Asianet Suvarna News Asianet Suvarna News

ವಿಜಯನಗರ: ಕೂಡ್ಲಿಗಿ ಬಳಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ, ಇಬ್ಬರ ಸಾವು

ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿ, 5 ಜನರಿಗೆ ಗಾಯಗಳಾದ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಇಂದು ನಡೆದಿದೆ. 

Two Killed due to Road Accident at Kudligi in Vijayanagara grg
Author
First Published Jun 30, 2024, 9:14 AM IST

ವಿಜಯನಗರ(ಜೂ.30):  ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿ, 5 ಜನರಿಗೆ ಗಾಯಗಳಾದ ಘಟನೆ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಇಂದು(ಭಾನುವಾರ) ನಡೆದಿದೆ. ಕಾರು ಚಾಲಕ ವಿನಯ್( 27) ಮತ್ತು ಚನ್ನವಸವ(27) ಮೃತಪಟ್ಟವರು.  

ಗೆಳೆಯರ ತಂಡವೊಂದು ರಾಯಚೂರು ಜಿಲ್ಲೆಯ ಲಿಂಗಸೂಗೂರಿನಿಂದ ಕೇರಳದ ವೈಯನಾಡುಗೆ ಹೊರಟಿತ್ತು ಎಂದು ತಿಳಿದು ಬಂದಿದೆ.  ಅತಿಯಾದ ವೇಗದಿಂದ ಕಾರು ಚಾಲನೆ ಮಾಡಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. 

ಹಾವೇರಿ: ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ, ದೇವರ ದರ್ಶನ ಪಡೆದು ಬಂದು ಮಸಣ ಸೇರಿದ 13 ಮಂದಿ..!

ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಉಳಿದ 5 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ಕೂಡ್ಲಿಗಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಮೂವರನ್ನು ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಸಂಬಂಧ ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Latest Videos
Follow Us:
Download App:
  • android
  • ios