*   ರಾಯಚೂರು ತಾಲೂಕಿನ ನಲ್ಲಬಂಡಾ ಕ್ರಾಸ್ ಬಳಿ ನಡೆದ ಘಟನೆ*   ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರು*   ಈ ಸಂಬಂಧ ಯರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ರಾಯಚೂರು(ಅ.15): ರಾಜ್ಯದಲ್ಲಿ ದಸರಾ(Dasara) ಹಬ್ಬದ ಸಂಭ್ರಮದ ಮಧ್ಯೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಹೌದು, ಬೈಕ್(Bike) ಸ್ಕಿಡ್ ಆಗಿ ಬಿದ್ದು ಇಬ್ಬರು ಮೃತಪಟ್ಟ(Death) ಘಟನೆ ತಾಲೂಕಿನ ನಲ್ಲಬಂಡಾ ಕ್ರಾಸ್ ಬಳಿ ಇಂದು(ಶುಕ್ರವಾರ) ನಡೆದಿದೆ. ಅಪಘಾತದಲ್ಲಿ(Accident) ದೀಪಕ್ (22) , ಹುಸೇನ್ (23) ಎಂಬುವರೇ ಸಾವನ್ನಪ್ಪಿದ್ದ ದುರ್ದೈವಿಗಳಾಗಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮೃತರು ರಾಯಚೂರು(Raichur) ನಗರದ ತಿಮ್ಮಪೂರ ಪೇಟೆ ನಿವಾಸಿಗಳಾಗಿದ್ದಾರೆ ಎಂದು ತಿಳಿದು ಬಂದಿದೆ. ಅಣ್ಣನನ್ನ ಬೈಕ್‌ನಲ್ಲಿ ಕರೆದುಕೊಂಡು ಬರಲು ಹೋದ ಸಂದರ್ಭದಲ್ಲಿ ದುರ್ಘಟನೆ ಸಂಭವಿಸಿದೆ. 

ಆಂಬುಲೆನ್ಸ್ ಏರುವಾಗ ಗಾಯಾಳು, ಶಿವಮೊಗ್ಗಕ್ಕೆ ಬಂದಾಗ ಸದ್ದಿಲ್ಲದೆ 3 ಜನ ಜೂಟ್!

ಘಟನಾ ಸ್ಥಳಕ್ಕೆ ಯರಗೇರಾ ಠಾಣೆಯ ಪೊಲೀಸರು(Police) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಮೃತದೇಹಗಳನ್ನ(Deadbody) ರಾಯಚೂರಿನ ರಿಮ್ಸ್(RIMS) ಆಸ್ಪತ್ರೆಗೆ ‌ರವಾನೆ ಮಾಡಲಾಗಿದೆ. ಈ ಸಂಬಂಧ ಯರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.