Asianet Suvarna News Asianet Suvarna News

ವಿಜಯಪುರ: ಎರಡು ಬಸ್ಸುಗಳ ನಡುವೆ ಡಿಕ್ಕಿ: ಮಹಿಳೆಯರಿಬ್ಬರ ಸಾವು

ಸಿಂದಗಿ ಮಾರ್ಗವಾಗಿ ವಿಜಯಪುರಕ್ಕೆ ಬರುತ್ತಿದ್ದ ಬಸ್‌ ಹಾಗೂ ವಿಜಯಪುರದಿಂದ ಸಿಂದಗಿಗೆ ಹೋಗುತ್ತಿದ್ದ ಬಸ್ ನಡುವೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಇಬ್ಬರು ಮಹಿಳೆಯರು ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಎರಡೂ ಬಸ್‌ ಚಾಲಕರು ಸೇರಿದ್ದಾರೆ.

Two Killed in KKRTC Buses Accident in Vijayapura grg
Author
First Published Jan 7, 2024, 8:28 PM IST | Last Updated Jan 7, 2024, 8:28 PM IST

ಬಸನವಬಾಗೇಬಾಡಿ(ಜ.07): ಎರಡು ಬಸ್ಸುಗಳ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಹಿಳೆಯರಿಬ್ಬರು ಮೃತಪಟ್ಟಿರುವ ಘಟನೆ ವಿಜಯಪುರ ತಾಲೂಕಿನ ಕವಲಗಿ ಗ್ರಾಮದ ಬಳಿ ಶನಿವಾರ ನಡೆದಿದೆ. ಅಲ್ಲದೆ, ಅಪಘಾತದಲ್ಲಿ 10ಕ್ಕೂ ಅಧಿಕ ಜನರು ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ವಿಜಯಪುರ ಜಿಲ್ಲೆ ಬಸನವಬಾಗೇಬಾಡಿ ತಾಲೂಕಿನ ಡೋಣೂರ ಗ್ರಾಮದ ಸಾಜೀದಾ ಬೇಗಂ (36), ಕಲಬುರಗಿ ಪಟ್ಟಣದ ನಿವಾಸಿ ರೋಹಿಣಿ ಪಂಚಾಳ (31) ಮೃತಪಟ್ಟ ಮಹಿಳೆಯರು. ಸಿಂದಗಿ ಮಾರ್ಗವಾಗಿ ವಿಜಯಪುರಕ್ಕೆ ಬರುತ್ತಿದ್ದ ಬಸ್‌ ಹಾಗೂ ವಿಜಯಪುರದಿಂದ ಸಿಂದಗಿಗೆ ಹೋಗುತ್ತಿದ್ದ ಬಸ್ ನಡುವೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಇಬ್ಬರು ಮಹಿಳೆಯರು ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಎರಡೂ ಬಸ್‌ ಚಾಲಕರು ಸೇರಿದ್ದಾರೆ.

ಚಾಮರಾಜನಗರ: ಕಳೆದ ವರ್ಷದಲ್ಲಿ ಬರೋಬ್ಬರಿ 58 ಆಕ್ಸಿಡೆಂಟ್‌ ಡೆತ್‌..!

ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಅಪಘಾತಕ್ಕೊಳಗಾದ ಬಸ್​ಗಳನ್ನು ತೆರವು ಮಾಡಲು ಕ್ರಮ ಕೈಗೊಳ್ಳಲಾಗಿದೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

Latest Videos
Follow Us:
Download App:
  • android
  • ios