Asianet Suvarna News Asianet Suvarna News

ಕೋಲಾರ: ಮುಳಬಾಗಿಲು ಬಳಿ ಖಾಸಗಿ ಬಸ್‌ ಪಲ್ಟಿ, ಇಬ್ಬರ ಸಾವು

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ರಾಷ್ಟ್ರೀಯ ಹೆದ್ದಾರಿ-75 ರ ವಿರುಪಾಕ್ಷಿ ಗೇಟ್ ಬಳಿ ನಡೆದ ಘಟನೆ

Two Killed in Private Bus Over Turn at Mulabagilu in Kolar grg
Author
Bengaluru, First Published Aug 17, 2022, 8:39 AM IST

ಕೋಲಾರ(ಆ.17): ಖಾಸಗಿ ಬಸ್‌ವೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿ, 15 ಕ್ಕೂ ಹೆಚ್ಚು ಜನರಿಗೆ ಗಾಯಗಳಾದ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ರಾಷ್ಟ್ರೀಯ ಹೆದ್ದಾರಿ-75 ರ ವಿರುಪಾಕ್ಷಿ ಗೇಟ್ ಬಳಿ ಇಂದು(ಬುಧವಾರ) ಬೆಳಗಿನ ಜಾವ 5 ಗಂಟೆ ಸುಮಾರಿಗೆ ನಡೆದಿದೆ.

ಆಂಧ್ರಪ್ರದೇಶದ ವಿಜಯವಾಡ ಮೂಲದ ಷರೀಫ್ ಹಾಗೂ ಮೈಮುನ್ನಿಸಾ ಎಂಬುವರೇ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಮತ್ತೊಬ್ಬರ ಸ್ಥಿತಿ ಚಿಂತಾಜನಕವಾಗಿದೆ ಅಂತ ತಿಳಿದು ಬಂದಿದೆ. ಅಪಘಾತಕ್ಕೀಡಾದ ಖಾಗಿ ಬಸ್‌ ಆಂಧ್ರ ಪ್ರದೇಶದ ಗುಂಟೂರಿನಿಂದ ಬೆಂಗಳೂರಿಗೆ ಬರುತ್ತಿತ್ತು ಅಂತ ತಿಳಿದು ಬಂದಿದೆ. ಆಂಧ್ರದ ನಲ್ಲೂರಿನ ವೇಮೂರಿ-ಕಾವೇರಿ ಟ್ರಾವಲ್ಸ್‌ಗೆ ಸೇರಿದ ಬಸ್ ಇದಾಗಿದೆ. ಅಪಘಾತದ ನಂತರ ಡ್ರೈವರ್ ಹಾಗೂ ಕಂಡಕ್ಟರ್ ಪರಾರಿಯಾಗಿದ್ದಾರೆ. 

37 ITBP ಸೈನಿಕರು, ಇಬ್ಬರು ಕಾಶ್ಮೀರ ಪೊಲೀಸರು ತೆರಳುತ್ತಿದ್ದ ವಾಹನ ಅಪಘಾತ: 6 ಸೈನಿಕರ ಸಾವು

ಗಾಯಾಳುಗಳನ್ನ ಮುಳಬಾಗಿಲು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನಾ ಸ್ಥಳಕ್ಕೆ ಮುಳಬಾಗಿಲು ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಬಸ್‌ನಲ್ಲಿ 30 ಪ್ರಯಾಣಿಕರಿದ್ದರು ಅಂತ ತಿಳಿದು ಬಂದಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. 
 

Follow Us:
Download App:
  • android
  • ios