Asianet Suvarna News Asianet Suvarna News

ಹಾವೇರಿ: ಬ್ಯಾಡಗಿ ಬಳಿ ಖಾಸಗಿ ಬಸ್‌ ಪಲ್ಟಿ, ಇಬ್ಬರು ಸಾವು

ಹಾವೇರಿ ಜಿಲ್ಲೆ ಬ್ಯಾಡಗಿ ತಾಲ್ಲೂಕಿನ ಮೊಟೇಬೆನ್ನೂರು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದ ಘಟನೆ.  ಘಟನಾ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ ಬ್ಯಾಡಗಿ ಪೊಲೀಸ್ ಠಾಣೆಯ ಪೊಲೀಸರು 

Two Killed in Road Accident at Byadagi in Haveri grg
Author
First Published Jun 29, 2023, 8:29 AM IST

ಹಾವೇರಿ(ಜೂ.29):  ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್‌ವೊಂದು ಪಲ್ಟಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿ, ಹಲವು ಪ್ರಯಾಣಿಕರಿಗೆ ಗಾಯಗಳಾದ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ತಾಲ್ಲೂಕಿನ ಮೊಟೇಬೆನ್ನೂರು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಇಂದು(ಗುರುವಾರ) ಬೆಳಗ್ಗೆ ನಡೆದಿದೆ. 

ಮೃತ ಚಾಲಕನನ್ನ ಸದಾನಂದ ಬೆಳಗಾವಿ(50) ಎಂದು ಗುರುತಿಸಲಾಗಿದೆ. ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದಾರೆ. ಪ್ರಯಾಣಿಕನ ಗುರುತು ಇನ್ನೂ ಪತ್ತೆಯಾಗಿಲ್ಲ.  ಖಾಸಗಿ ಬಸ್‌ ಬೆಂಗಳೂರಿನಿಂದ ಮೀರಜ್ ಹೋಗುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ನಸುಕಿನ ಜಾವ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ರಸ್ತೆ ಡಿವೈಡರ್‌ಗೆ ಹೊಡೆದು ಪಲ್ಟಿಯಾಗಿದೆ. 

ಕೆಎಸ್‌ಅರ್‌ಟಿಸಿ ಎಲೆಕ್ಟ್ರಿಕ್‌ ಬಸ್‌ ಮೊದಲ ಅಪಘಾತ: ಚಾಲಕ ಸಾವು, 25 ಮಂದಿಗೆ ಗಾಯ

ಗಾಯಾಳುಗಳನ್ನ ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನಾ ಸ್ಥಳಕ್ಕೆ ಬ್ಯಾಡಗಿ ಪೊಲೀಸ್ ಠಾಣೆಯ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಬ್ಯಾಡಗಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 

Follow Us:
Download App:
  • android
  • ios