*  ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕಾಳಿಹುಂಡಿ ಗೇಟ್‌ ಬಳಿ ನಡೆದ ಘಟನೆ*  ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ಸಂಚಾರಿ ಪೊಲೀಸರು *  ಈ ಸಂಬಂಧ ನಂಜನಗೂಡು ಸಂಚಾರಿ ಠಾಣೆಯಲ್ಲಿ ದೂರು ದಾಖಲು 

ನಂಜನಗೂಡು(ಮೇ.21): ತ್ರಿಬಲ್‌ ರೈಡ್‌ ಹೋಗುತ್ತಿದ್ದಾಗ ವಾಹನ ತಪಾಸಣೆ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟು, ಮತ್ತೊಬ್ಬ ಗಂಭೀರ ಗಾಯಗೊಂಡ ಘಟನೆ ತಾಲೂಕಿನ ಕಾಳಿಹುಂಡಿ ಗೇಟ್‌ ಬಳಿ ಸಂಭವಿಸಿದೆ. 

ತಾಲೂಕಿನ ಕೂಡ್ಲಾಪುರ ಗ್ರಾಮದ ಸಚಿನ್‌ (23), ಹುಣಸನಾಳು ಗ್ರಾಮದ ದೊರೆಸ್ವಾಮಿ (23) ಮೃತ ದುರ್ದೈವಿಗಳು. ಮತ್ತೊಬ್ಬ ಯುವಕ ರಘು (22) ಗಂಭೀರವಾಗಿ ಗಾಯಗೊಂಡು ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

Vijayapura ಅಪರೂಪದ ಘಟನೆಗೆ ಸಾಕ್ಷಿಯಾದ ಆ ಅಪಘಾತ!

ಕಡಕೋಳ ಕೈಗಾರಿಕಾ ಪ್ರದೇಶದಲ್ಲಿರುವ ಪೇಪರ್‌ ಬೋಟ್‌ ಜ್ಯೂಸ್‌ ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಈ ಮೂವರು ಸ್ವಗ್ರಾಮ ಹುಣಸನಾಳು ಗ್ರಾಮಕ್ಕೆ ಒಂದೇ ಬೈಕ್‌ನಲ್ಲಿ ಸಾಗುತ್ತಿದ್ದರು. ಈ ವೇಳೆ ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರಿ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದರು. ಪೊಲೀಸರನ್ನು ಕಂಡು ಆತುರÜದಲ್ಲಿ ಯೂಟರ್ನ್‌ ತೆಗೆದುಕೊಂಡಾಗ ಹಿಂದಿನಿಂದ ವೇಗವಾಗಿ ಬರುತ್ತಿದ್ದ ಕೇರಳ ಸಾರಿಗೆ ಬಸ್‌ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ನಂಜನಗೂಡು ಸಂಚಾರಿ ಠಾಣೆಯಲ್ಲಿ ದೂರು ದಾಖಲಾಗಿದೆ.