Asianet Suvarna News Asianet Suvarna News

ಶಿಗ್ಗಾಂವಿ ಬಳಿ ಭೀಕರ ಅಪಘಾತ: ಮೈಲಾರಲಿಂಗನ ದರ್ಶನಕ್ಕೆ ಹೊರಟ್ಟಿದ್ದ ಇಬ್ಬರು ಭಕ್ತರ ದುರ್ಮರಣ

ಮೈಲಾರ ದೇವರ ದರ್ಶನಕ್ಕೆ ಹೊರಟ್ಟಿದ್ದವರು ಮಸಣ ಸೇರಿದ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಹೊನ್ನಾಪುರ ಗ್ರಾಮದ ಬಳಿ ನಡೆದಿದೆ. 

Two Killed in Road Accident at Shiggaon in Haveri grg
Author
First Published Feb 3, 2023, 7:08 PM IST

ಹಾವೇರಿ(ಫೆ.03):  ಮೈಲಾರ ದೇವರ ದರ್ಶನಕ್ಕೆ ಹೊರಟ್ಟಿದ್ದವರು ಮಸಣ ಸೇರಿದ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಹೊನ್ನಾಪುರ ಗ್ರಾಮದ ಬಳಿ ಇಂದು(ಶುಕ್ರವಾರ) ನಡೆದಿದೆ. ಟ್ರಾಕ್ಟರ್‌ಗೆ ಹಿಂಬದಿಯಿಂದ ಸ್ವಿಪ್ಟ್ ಕಾರೊಂದು ಗುದ್ದಿದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿ, ನಾಲ್ವರಿಗೆ ಗಂಭೀರವಾದ ಗಾಯಗಳಾಗಿವೆ. 

ಹನುಮಂತಪ್ಪ ಮುಲಗಿ(55) ಹಾಗೂ ಚಂದ್ರು ಸಿರಕೋಳ(40) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಗಾಯಾಳುಗಳಿಗೆ ಶಿಗ್ಗಾಂವಿ ತಾಲೂಕು ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. 

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ , ಗರ್ಭಿಣಿ ಸೇರಿ ಇಬ್ಬರೂ ಸಜೀವ ದಹನ

ಮೃತರು ಶೆರೆವಾಡ ಗ್ರಾಮದ ನಿವಾಸಿಗಳಾಗಿದ್ದಾರೆ. ಟ್ರ್ಯಾಕ್ಟರ್‌ನಲ್ಲಿ ಮೈಲಾರಲಿಂಗನ ಜಾತ್ರೆಗೆ ಹೊರಟಿದ್ದರು ಅಂತ ತಿಳಿದು ಬಂದಿದೆ. ಹುಬ್ಬಳ್ಳಿಯಿಂದ ಹಾವೇರಿ ಕಡೆ ಬರುತ್ತಿದ್ದ ಕಾರು ಹಿಂಬದಿಯಿಂದ ಗುದ್ದಿದ ಪರಿಣಾಮ ಈ ದುರಂತ ಸಂಭವಿಸಿದೆ. 

ಘಟನಾ ಸ್ಥಳಕ್ಕೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ತಡಸ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. 

Follow Us:
Download App:
  • android
  • ios