Asianet Suvarna News Asianet Suvarna News

ಮಂಡ್ಯ: ಮೈಸೂರು-ಬೆಂಗಳೂರು ಎಕ್ಸಪ್ರೆಸ್‌ವೇನಲ್ಲಿ ಭೀಕರ ಅಪಘಾತ, ಸ್ಥಳದಲ್ಲೇ ಇಬ್ಬರ ದುರ್ಮರಣ

ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ಶಿಂಷಾ ನದಿ ಬಳಿಯ ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಮೃತರನ್ನ ಶಂಕರ್ ಹಾಗೂ ಮಹದೇವು ಎಂದು ಗುರುತಿಸಲಾಗಿದೆ. ಮೃತರು ಬೆಂಗಳೂರಿನ ಐಸಿಐಸಿಐ ಬ್ಯಾಂಕ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದರು. 

Two Killed in Road Accident in Bengaluru Mysuru Expressway at Mandya grg
Author
First Published Jan 14, 2024, 10:48 AM IST | Last Updated Jan 14, 2024, 10:48 AM IST

ಮಂಡ್ಯ(ಜ.14):  ಚಾಲಕನ ನಿಯಂತ್ರಣ ತಪ್ಪಿದ ಕಾರು ಶಿಂಷಾ ನದಿ ಸೇತುವೆ ಮೇಲೆಯೇ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಬಳಿಕ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರ ಸಾವನ್ನಪ್ಪಿ, ಮತ್ತೊಬ್ಬನ ಸ್ಥಿತಿ ಗಂಭೀರವಾದ ಘಟನೆ. ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯಲ್ಲಿ ಇಂದು(ಭಾನುವಾರ) ನಡೆದಿದೆ. 

ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ಶಿಂಷಾ ನದಿ ಬಳಿಯ ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಮೃತರನ್ನ ಶಂಕರ್ ಹಾಗೂ ಮಹದೇವು ಎಂದು ಗುರುತಿಸಲಾಗಿದೆ. ಮೃತರು ಬೆಂಗಳೂರಿನ ಐಸಿಐಸಿಐ ಬ್ಯಾಂಕ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ. 

ತುಮಕೂರು: ದ್ವಿಚಕ್ರವಾಹನಗಳಿಗೆ ಕಾರು ಡಿಕ್ಕಿ, ಇಬ್ಬರು ವಿದ್ಯಾರ್ಥಿಗಳ ಸಾವು

ದುರ್ಘಟನೆಯಲ್ಲಿ ಕಿಶೋರ್‌ ಎಂಬುವರಿಗೆ ಗಂಭೀರವಾದ ಗಾಯವಾದ ಹಿನ್ನಲೆಯಲ್ಲಿ ಮಂಡ್ಯದ ಮಿಮ್ಸ್‌ನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೂವರು ಮೈಸೂರಿನಿಂದ ಬೆಂಗಳೂರಿಗೆ ತೆರಳಿದ್ದರು. ಮೈಸೂರು ಕಡೆಗೆ ಹೋಗುವ ರಸ್ತೆಗೆ ಹೋಗಿ ಕಾರು ಮಗುಚಿ ಬಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. 

ಡಿಕ್ಕಿಯ ರಭಸಕ್ಕೆ ಮ್ಯಾನೇಜರ್ ಶಂಕರ್ ಹಾಗೂ ಮಹದೇವು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಿಶೋರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ.  ಘಟನಾ ಸ್ಥಳಕ್ಕೆ ಮದ್ದೂರು ಸಂಚಾರಿ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಮದ್ದೂರು ಸಂಚಾರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Latest Videos
Follow Us:
Download App:
  • android
  • ios