ಗದಗ(ಫೆ.25): ಟ್ರ್ಯಾಕ್ಟರ್‌ವೊಂದು ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿ, ಏಳು ಜನರಿಗೆ ಗಾಯ‌ಗಳಾದ ಘಟನೆ ಜಿಲ್ಲೆಯ ಲಕ್ಷೇಶ್ವರ ತಾಲೂಕಿನ ಗುಂಜಳ ರಸ್ತೆಯಲ್ಲಿ ಇಂದು(ಗುರುವಾರ) ನಡೆದಿದೆ. 

ಲಕ್ಷ್ಮೇಶ್ವರ ನಿವಾಸಿಗಳಾದ ಸರೋಜವ್ವಾ ಹಿತ್ತಲಮನಿ(30) ಹಾಗೂ ಸೋಮವ್ವಾ ಅಡುಗೆಮನಿ(48) ಮೃತ ದುರ್ದೈವಿಗಳಾಗಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. 

ರಸ್ತೆ ಅಪಘಾತದಲ್ಲಿ ಸಾವನ್ನಪ್ಪುತ್ತಿರುವವರಲ್ಲಿ ಶೇ.70 ರಷ್ಟು ಯುವಜನಾಂಗ; ಬೆಚ್ಚಿ ಬೀಳಿಸುತ್ತಿದೆ ವರದಿ!

ಕೂಲಿ ಕೆಲಸ ಮುಗಿಸಿಕೊಂಡು ವಾಪಸ್‌ ಬರುವಾಗ ಟ್ರ್ಯಾಕ್ಟರ್‌ ಪಲ್ಟಿಯಾದ ರಸ್ತೆ ಬದಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಗಾಯಾಳುಗಳನ್ನ ಲಕ್ಷ್ಮೇಶ್ವರ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಲಕ್ಷ್ಮೇಶ್ವರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.