Asianet Suvarna News Asianet Suvarna News

ಹಾಸನ: ವೈದ್ಯರ ನಿರ್ಲಕ್ಷ್ಯಕ್ಕೆ ಎರಡು ತಿಂಗಳ ಮಗು ಸಾವು?. ಪೋಷಕರ ಆಕ್ರೋಶ

ಮಗುವಿಗೆ ಚಿಕಿತ್ಸೆ ನೀಡಲು ಹಿರಿಯ ವೈದ್ಯರು ವಿಳಂಬ ಮಾಡಿದ್ದರು. ಸೂಕ್ತ ಚಿಕಿತ್ಸೆ ಸಿಗದಿದ್ದರಿಂದ ಮಗು ಸಾವನ್ನಪ್ಪಿದೆ. ಮಗುವಿನ ಸಾವಿಗೆ ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ನಿರ್ಲಕ್ಷ್ಯ ಹಾಗೂ ಅವ್ಯವಸ್ಥೆ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ ಪೋಷಕರು 

Two months old baby died due to doctor's negligence in Hassan grg
Author
First Published Aug 31, 2024, 8:51 PM IST | Last Updated Aug 31, 2024, 8:51 PM IST

ಹಾಸನ(ಆ.31):  ವೈದ್ಯರು ಹಾಗೂ ಆಸ್ಪತ್ರೆ ಸಿಬ್ಬಂದಿಗಳ ನಿರ್ಲಕ್ಷ್ಯಕ್ಕೆ ಹಸುಗೂಸು ಸಾವನ್ನಪ್ಪಿದೆ ಎಂಬ ಆರೋಪವೊಂದು ಹಾಸನದಲ್ಲಿ ಕೇಳಿ ಬಂದಿದೆ. ಹೌದು, ಹಾಸನದ ಹಿಮ್ಸ್ ಆಸ್ಪತ್ರೆಯಲ್ಲಿರುವ ಮಹಿಳಾ‌ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಘಟನೆ ನಡೆದಿದೆ. 

ವೈದ್ಯರು ಹಾಗೂ ಆಸ್ಪತ್ರೆ ಸಿಬ್ಬಂದಿಗಳ ವಿರುದ್ಧ ಮೃತ ಮಗುವಿನ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿಕ್ಕಮಗಳೂರಿನ ಚಂದ್ರಕಲಾ-ನಂದಕುಮಾರ್ ದಂಪತಿ ಎರಡು ತಿಂಗಳ ಮಗು ಸಂಜೆ ಹಾಲು ಕುಡಿದ ನಂತರ ವಿಪರೀತ ವಾಂತಿ ಮಾಡಿಕೊಂಡಿತ್ತು. ಕೂಡಲೇ ಪೋಷಕರು ಚಿಕ್ಕಮಗಳೂರಿನ ಆಸ್ಪತ್ರೆಗೆ ಕರೆದೊಯ್ದಿದ್ದರು.  

ಮೋದಿ ಪ್ರಧಾನಿಯಾದ ನಂತರ ಕಾಶ್ಮೀರದಲ್ಲಿ ಉಗ್ರರ ಉಪಟಳ ನಿಂತಿದೆ: ಹೆಚ್‌ಡಿ ದೇವೇಗೌಡ

ಮಗುವಿನ ಸ್ಥಿತಿ ಗಂಭೀರವಾಗಿದೆ ಹಾಸನಕ್ಕೆ ಕರೆದೊಯ್ಯುವಂತೆ ವೈದ್ಯರು ತಿಳಿಸಿದ್ದರು. ಚಿಕ್ಕಮಗಳೂರಿನಿಂದ ಆಂಬ್ಯುಲೆನ್ಸ್‌ನಲ್ಲಿ ಜೀರೋ ಟ್ರಾಫಿಕ್‌ ಮೂಲಕ ಹಾಸನಕ್ಕೆ ಕರೆತರಲಾಗಿತ್ತು. ಜಿಲ್ಲಾಸ್ಪತ್ರೆ ಆವರಣಕ್ಕೆ ಅಂಬ್ಯುಲೆನ್ಸ್ ಬಂದ ವೇಳೆ ವೈದ್ಯರು ಹಾಗೂ ಸಿಬ್ಬಂದಿ ಸರಿಯಾಗಿ ಸ್ಪಂದಿಸಿಲ್ಲ ಎಂದು ಆರೋಪಿಸಲಾಗಿದೆ. 

ಮಗುವಿಗೆ ತುರ್ತು ಆಕ್ಸಿಜನ್ ಅವಶ್ಯಕವಿತ್ತು. ಆಕ್ಸಿಜನ್ ಹಾಕಲು ಸಿಬ್ಬಂದಿ ಸಿಲಿಂಡರ್ ತಂದಿದ್ದರು. ಆದ್ರೆ, ಖಾಲಿಯಾಗಿದ್ದ ಆಕ್ಸಿಜನ್ ಸಿಲಿಂಡರ್ ತಂದಿದ್ದರು. ಮಗುವನ್ನು ದಾಖಲಿಸಿಕೊಂಡು ತರಬೇತಿ ವೈದ್ಯರು ಸರಿಯಾಗಿ ಚಿಕಿತ್ಸೆ ನೀಡಿಲ್ಲ.  ಮಗುವಿಗೆ ಚಿಕಿತ್ಸೆ ನೀಡಲು ಹಿರಿಯ ವೈದ್ಯರು ವಿಳಂಬ ಮಾಡಿದ್ದರು. ಸೂಕ್ತ ಚಿಕಿತ್ಸೆ ಸಿಗದಿದ್ದರಿಂದ ಮಗು ಸಾವನ್ನಪ್ಪಿದೆ. ಮಗುವಿನ ಸಾವಿಗೆ ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ನಿರ್ಲಕ್ಷ್ಯ ಹಾಗೂ ಅವ್ಯವಸ್ಥೆ ಕಾರಣ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ವೈದ್ಯರು ಹಾಗೂ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೋಷಕರು ಆಗ್ರಹಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡು ಪರಿಶೀಲನೆ ನಡೆಸಿದ್ದಾರೆ. 

Latest Videos
Follow Us:
Download App:
  • android
  • ios