ಬೆಂಗಳೂರು(ಮಾ.18): ಕೊರೋನಾ ವೈರಸ್ ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಂದ್ ಮುಂದುವರಿಸುವ ಬಗ್ಗೆ ಮಾತುಕತೆ ನಡೆಯುತ್ತಿರುವಾಗಲೇ ಬೆಂಗಳೂರಿನಲ್ಲಿ ಮತ್ತೆರಡು ಕೊರೋನಾ ಪ್ರಕರಣಗಳು ದೃಢಪಟ್ಟಿದೆ.

ಬೆಂಗಳೂರಿನಲ್ಲಿ ಮತ್ತಿಬ್ಬರಿಗೆ COVID19 ಸೋಂಕು ದೃಢಪಟ್ಟಿದೆ. ಒಬ್ಬರು 56 ವಯಸ್ಸಿನವರಾಗಿದ್ದು, ಅಮೆರಿಕ ಪ್ರವಾಸದಿಂದ ಮಾರ್ಚ್ 6ರಂದು ಹಿಂದಿರುಗಿದ್ದರು. ಇನ್ನೊಬ್ಬರು 25 ವರ್ಷದ ಮಹಿಳೆಯಾಗಿದ್ದು, ಸ್ಪೇನ್ ಪ್ರವಾಸದಿಂದ ಹಿಂದಿರುಗಿದವರಾಗಿದ್ದಾರೆ. ಇಬ್ಬರನ್ನು ಈಗಾಗಲೇ ಪ್ರತ್ಯೇಕಿಸಲ್ಪಟ್ಟ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ.

ಹಲವು ಮಾರ್ಗಗಳ KSRTC ಬಸ್ ಸಂಚಾರ ಸ್ಥಗಿತ
ಇವರೊಂದಿಗೆ ಸಂಪರ್ಕ ಹೊಂದಿದವರನ್ನು ಪತ್ತೆ ಮಾಡಿ, ಅವರೆಲ್ಲರನ್ನೂ ಕಡ್ಡಾಯವಾಗಿ ಅವರ ಮನೆಯಲ್ಲಿ ಪ್ರತ್ಯೇಕವಾಗಿರಿಸಲಾಗಿದೆ. ಎಲ್ಲಾ ಅಂತರರಾಷ್ಟ್ರೀಯ ಪ್ರಯಾಣಿಕರನ್ನು ತಪಾಸಣೆ ಮಾಡುವ ಕಾರ್ಯ ನಿರಂತರ ಪ್ರಗತಿಯಲ್ಲಿದೆ.