ಚಿತ್ರದುರ್ಗ(ಡಿ.06): ಸಾರಿಗೆ ಬಸ್ಸೊಂದು ಪಲ್ಟಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿದ ಘಟನೆ ಜಿಲ್ಲೆಯ ಹಿರಿಯೂರು ಪಟ್ಟಣ ಬಳಿ ನಡೆದ ಘಟನೆ ಇಂದು(ಭಾನುವಾರ) ನಡೆದಿದೆ. ಯಾದಗಿರಿ ಮೂಲದ ಐಶ್ವರ್ಯ(12) ಹಾಗೂ ಮತ್ತೊಬ್ಬರ ಗುರುತು ಪತ್ತೆಯಾಗಿಲ್ಲ.

ಯಾದಗಿರಿ ಜಿಲ್ಲೆಯ ಶಹಾಪುರದಿಂದ ಬೆಂಗಳೂರಿಗೆ ತೆರಳುತ್ತಿತ್ತು ಎಂದು ತಿಳಿದು ಬಂದಿದೆ. ಬಸ್ ಪಲ್ಟಿಯಾದ ಪರಿಣಾಮ ಬಸ್‌ನಲ್ಲಿದ್ದ ಇನ್ನಿಬ್ಬರಿಗೆ ಗಾಯವಾಗಿದೆ. 

ಅಂಕೋಲಾ: ನಿಂತ ಲಾರಿಗೆ ಬಸ್‌ ಡಿಕ್ಕಿ, ಇಬ್ಬರ ಸಾವು

ಗಾಯಾಳುಗಳನ್ನ ಜಿಲ್ಲೆಯ ಹಿರಿಯೂರು ಪಟ್ಟಣದಲ್ಲಿರವ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹಿರಿಯೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.