Asianet Suvarna News Asianet Suvarna News

ಪುತ್ತೂರು: ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರ ದೌರ್ಜನ್ಯ, ಇಬ್ಬರು ಅಮಾನತು

ಪುತ್ತೂರು ಗ್ರಾಮಾಂತರ ಸಬ್ ಇನ್ಸ್ಪೆಕ್ಟರ್ ಶ್ರೀನಾಥ ರೆಡ್ಡಿ ಹಾಗೂ ನಗರ ಠಾಣೆ ಕಾನ್ಸ್‌ಟೇಬಲ್ ಅಮಾನತು ಮಾಡಿ ಆದೇಶ ಹೊರಡಿಸಿದ ದ.ಕ ಜಿಲ್ಲಾ ಎಸ್ಪಿ ವಿಕ್ರಂ ಅಮಾಟೆ

Two Police Suspended For Assault on Hindu Activists at Puttur in Dakshina Kannada grg
Author
First Published May 18, 2023, 1:09 PM IST

ಭರತ್ ರಾಜ್, ಏಷ್ಯಾನೆಟ್ ಸುವರ್ಣ ನ್ಯೂಸ್, ಮಂಗಳೂರು

ಮಂಗಳೂರು(ಮೇ.18):  ಜಿಲ್ಲೆಯ ಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯ ವಿಚಾರಕ್ಕೆ ಸಂಬಂಧಿಸಿದಂತೆ ಕೊನೆಗೂ ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗಿದ್ದು, ಓರ್ವ ಸಬ್ ಇನ್ಸ್‌ಪೆಕ್ಟರ್ ಹಾಗೂ ಓರ್ವ ಕಾನ್ಸ್‌ಟೇಬಲ್ ಅಮಾನತು ಮಾಡಲಾಗಿದೆ. 

ಪುತ್ತೂರು ಗ್ರಾಮಾಂತರ ಸಬ್ ಇನ್ಸ್ಪೆಕ್ಟರ್ ಶ್ರೀನಾಥ ರೆಡ್ಡಿ ಹಾಗೂ ನಗರ ಠಾಣೆ ಕಾನ್ಸ್‌ಟೇಬಲ್ ಅಮಾನತು ಮಾಡಿ ದ.ಕ ಜಿಲ್ಲಾ ಎಸ್ಪಿ ವಿಕ್ರಂ ಅಮಾಟೆ ಆದೇಶ ಹೊರಡಿಸಿದ್ದಾರೆ. ಡಿವೈಎಸ್ಪಿ ವೀರಯ್ಯ ಹಿರೇಮಠ್ ಗೆ ರಜೆಯ ಮೇಲೆ ಕಳುಹಿಸಿದ ಎಸ್ಪಿ, ಮೇಲಾಧಿಕಾರಿಗಳಿಗೆ ಡಿವೈಎಸ್ಪಿ ವಿರುದ್ದ ಶಿಸ್ತು ಕ್ರಮಕ್ಕೆ ಶಿಫಾರಸ್ಸು ಮಾಡಿದ್ದಾರೆ. ಈ ನಡುವೆ ಮೂವರು ಪೊಲೀಸರ ವಿರುದ್ದ ಪುತ್ತೂರು ನಗರ ಠಾಣೆಯಲ್ಲಿ ಎಫ್ ಆರ್ ದಾಖಲಿಸಿದ್ದು, ಬಂಟ್ವಾಳ ಉಪವಿಭಾಗ ಡಿವೈಎಸ್ಪಿ ನೇತೃತ್ವದಲ್ಲಿ ಪೊಲೀಸರ ವಿರುದ್ಧ ತನಿಖೆ ನಡೆಯಲಿದೆ. ಹಲ್ಲೆಗೊಳಗಾದ ಹಿಂದೂ ಕಾರ್ಯಕರ್ತ ಅವಿನಾಶ್ ದೂರಿನ ಹಿನ್ನೆಲೆ ಎಫ್‌ಐಆರ್ ದಾಖಲಾಗಿದೆ.

ಹಿಂದು ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ತಪ್ಪಿತಸ್ಥರ ಮೇಲೆ ಕ್ರಮಕ್ಕೆ ನಳಿನ್‌ ಆಗ್ರಹ

ಠಾಣೆಯಲ್ಲೇ ಮೊಕ್ಕಾಂ ಹೂಡಿದ ಎಸ್ಪಿ!

ಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯ ವಿಚಾರ ಸಂಬಂಧ ಪುತ್ತೂರು ನಗರ ಠಾಣೆಯಲ್ಲೇ ಎಸ್ಪಿ ವಿಕ್ರಂ ಅಮಾಠೆ ಮೊಕ್ಕಾಂ ಹೂಡಿದ್ದಾರೆ. ಪ್ರಕರಣದ ಗಂಭೀರತೆ ಹಿನ್ನೆಲೆಯಲ್ಲಿ ಠಾಣೆಯಲ್ಲೇ ಎಸ್ಪಿ ಮೊಕ್ಕಾಂ ಹೂಡಿದ್ದು, ಪುತ್ತೂರು ಡಿವೈಎಸ್ಪಿ ವೀರಯ್ಯ ಹಿರೇಮಠ, ಸಂಪ್ಯ ಎಸ್ಸೈ ಹಾಗೂ ಸಿಬ್ಬಂದಿ ವಿಚಾರಣೆ ನಡೆಸಿದ್ದಾರೆ. ಪ್ರಕರಣ ಸಂಬಂಧ ಮಾಹಿತಿ ಪಡೆದ ಎಸ್ಪಿ ವಿಕ್ರಂ, ಹಿಂದೂ ಸಂಘಟನೆ ಗಡುವಿನ ಹಿನ್ನೆಲೆ ಅಮಾನತು ಮಾಡಿ ಆದೇಶಿಸಿದ್ದಾರೆ. ಉಳಿದ ಇಲಾಖಾ ತನಿಖೆಯನ್ನು ಎಎಸ್ಪಿ ನಡೆಸಲಿದ್ದಾರೆ.

Follow Us:
Download App:
  • android
  • ios