ಶಾಲೆಗೆ ರಜೆ ಇದ್ದ ಹಿನ್ನೆಲೆಯಲ್ಲಿ ಈಜಲು ತೆರಳಿದ್ದ ವೇಳೆ ಕೃಷಿ ಹೊಂಡದಲ್ಲಿ ಸಿಲುಕಿ ಇಬ್ಬರು ವಿದ್ಯಾರ್ಥಿಗಳು ಸಾವು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಹೇಳೆ ಊರಿನಲ್ಲಿ ನಡೆದಿದೆ
ಗೌರಿಬಿದನೂರು (ಸೆ.14): ಶಾಲೆಗೆ ರಜೆ ಇದ್ದ ಹಿನ್ನೆಲೆಯಲ್ಲಿ ಈಜಲು ತೆರಳಿದ್ದ ವೇಳೆ ಕೃಷಿ ಹೊಂಡದಲ್ಲಿ ಸಿಲುಕಿ ಇಬ್ಬರು ವಿದ್ಯಾರ್ಥಿಗಳು ಉಸಿರುಗಟ್ಟಿ ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಹೇಳೆ ಊರಿನಲ್ಲಿ ನಡೆದಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಮೃತ ಬಾಲಕರನ್ನು ಹರಿಚರಣ್‌ರೆಡ್ಡಿ (13) ಹಾಗೂ ಲಿಖಿತ್ (14) ಎಂದು ಗುರುತಿಸಲಾಗಿದೆ.
ಗೋಕರ್ಣ ಬೀಚ್‌ಗೆ ಪ್ರವಾಸಿಗರಿಗೆ ನಿಷೇಧ
ಭಾನುವಾರ ಕೃಷಿ ಹೊಂಡದಲ್ಲಿ ಈಜಾಡಲು ಹೋಗಿದ್ದಾಗ ಈ ದುರಂತ ಸಂಭವಿಸಿದೆ. ಸಂಜೆಯಾದರೂ ಇಬ್ಬರು ಮನೆಗೆ ಬಾರದ ಬಗ್ಗೆ ಪೋಷಕರು ಹುಡುಕಾಟ ನಡೆಸಿದಾಗ ದುರ್ಘಟನೆ ಬೆಳಕಿಗೆ ಬಂದಿದೆ.
