ತುಮಕೂರು(ಮೇ 30): ಅಪ್ರಾಪ್ತೆಯನ್ನು ಪುಸಲಾಯಿಸಿ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಇಬ್ಬರು ಯುವಕರನ್ನು ಬಂಧಿಸಿ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ ಘಟನೆ ಕೊರಟಗೆರೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.

ಕೊರಟಗೆರೆ ತಾಲೂಕಿನ ಬಸವನಹಳ್ಳಿ ಗ್ರಾಮದ ಎಸ್‌ಎಸ್‌ಎಲ್‌ಸಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತೆಯನ್ನು ಇದೇ ಗ್ರಾಮದ ಬಸವರಾಜು ಎಂಬುವನಿಂದ 8ತಿಂಗಳ ಹಿಂದೆ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿ ಪೋಷಕರಿಗೆ ತಿಳಿಸದೆ, ಕಾಲ ಕಳೆಯುತ್ತಿರುವಾಗಲೇ ಮತ್ತೊಬ್ಬ ಅದೇ ಊರಿನ ಹರೀಶ್‌ ಎಂಬಾತ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಮೊಬೈಲ್‌ ಚಾರ್ಚ್‌ ಹಾಕುವ ನೆಪದಲ್ಲಿ ಆಕೆಯನ್ನು ಪುಸಲಾಯಿಸಿ ಲೈಂಗಿಕ ದೌರ್ಜನ್ಯ ವೆಸಗಿದ್ದಾನೆ ಎನ್ನಲಾಗಿದೆ.

ಸಾಗರದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

ಈ ಘಟನೆಗಳು ನಡೆದು 8 ತಿಂಗಳುಗಳ ನಂತರ ಅಪ್ರಾಪ್ತೆ ಗರ್ಭಿಣಿಯಾಗಿರುವುದು ಪೋಷಕರಿಗೆ ತಿಳಿದು ಬಂದಿದ್ದು, ಪೋಷಕರು ಮಗಳ ಮೇಲೆ ನಡೆದ ದೌರ್ಜನ್ಯ ಖಂಡಿಸಿ ಪೊಲೀಸ್‌ ಠಾಣೆ ಮೆಟ್ಟಿಲೇರಿ ಕೇಸು ದಾಖಲಾದ ನಂತರ ಈ ಇಬ್ಬರು ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.

ಈ ಸಂಬಂಧ ಕೊರಟಗೆರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣದಾಕಲಾಗಿದ್ದು, ಸರ್ಕಲ್‌ ಇನ್ಸ್‌ಪೆಕ್ಟರ್‌ ನದಾಫ್‌ ಹಾಗೂ ಪಿಎಸ್‌ಐ ಮುತ್ತುರಾಜು ಸ್ಥಳಕ್ಕೆ ಭೇಟಿ ನೀಡಿ ಹೆಚ್ಚಿನ ತನಿಖೆ ನಡೆಸಿ ಆರೋಪಿಗಳ ವಿರುದ್ಧ ಫೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾನೆ ಎನ್ನಲಾಗಿದೆ.