ಉಡುಪಿ(ಆ.17): ಬೈಂದೂರಿನಲ್ಲಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಮರವಂತೆಯ ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ ಘಟಕದಲ್ಲಿ ರಕ್ಷಾ ಬಂಧನ ಕಾರ್ಯಕ್ರಮ ಗುರುವಾರ ನಡೆಯಿತು.

ಬೈಂದೂರಿನ ಬಿಜೆಪಿ ಮಹಿಳಾ ಮೋರ್ಚಾದ ಸದಸ್ಯೆಯರು ಪೌರ ಕಾರ್ಮಿಕರಿಗೆ ಹಾಗೂ ಸ್ವಚ್ಛತಾ ಸಿಬ್ಬಂದಿಗೆ ರಾಖಿ ಕಟ್ಟಿದರು. ನಂತರ ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು.

ಮಂಗಳೂರು: ಬೀಟ್‌ ಪೊಲೀಸ್ ಜೊತೆ ಬೀಟ್‌ ನಡೆಸಿದ ಕಮಿಷನರ್‌!

ಬೈಂದೂರು ಮಹಿಳಾ ಮೋರ್ಚಾದ ಅಧ್ಯಕ್ಷೆ ಪ್ರಿಯದರ್ಶಿನಿ ಬೆಸ್ಕೂರು, ಮರವಂತೆ ಪಂಚಾಯತ್‌ ಅಧ್ಯಕ್ಷೆ ಅರ್‌.ಕೆ.ಅನಿತಾ, ಮಹಿಳಾ ಮೋರ್ಚಾದ ಸದಸ್ಯರಾದ ಭಾಗೀರಥಿ ಸುರೇಶ್‌, ಸುನಂದಾ ಗಾಣಿಗ ಮೊದಲಾದವರು ಭಾಗವಹಿಸಿದ್ದರು.