ಮೈಸೂರು ಕೇಂದ್ರ ಕಾರಾಗೃಹಕ್ಕೆ ಪೇಜಾವರ ಶ್ರೀ ಭೇಟಿ
ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಮೈಸೂರಿನಲ್ಲಿ ನಡೆದ ತಮ್ಮ 36ನೇ ಚಾತುರ್ಮಾಸ್ಯ ವ್ರತದ ಕೊನೆಯ ದಿನ ಶುಕ್ರವಾರ, ಮೈಸೂರಿನ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಆಯೋಜಿಸಲಾದ ಉಚಿತ ಆರೋಗ್ಯ ತಪಾಸಣೆ ಶಿಬಿರ ಮತ್ತು ವಿವಿಧ ಸವಲತ್ತು ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಸಂದೇಶ ನೀಡಿದರು.
ಉಡುಪಿ (ಸೆ.29): ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಮೈಸೂರಿನಲ್ಲಿ ನಡೆದ ತಮ್ಮ 36ನೇ ಚಾತುರ್ಮಾಸ್ಯ ವ್ರತದ ಕೊನೆಯ ದಿನ ಶುಕ್ರವಾರ, ಮೈಸೂರಿನ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಆಯೋಜಿಸಲಾದ ಉಚಿತ ಆರೋಗ್ಯ ತಪಾಸಣೆ ಶಿಬಿರ ಮತ್ತು ವಿವಿಧ ಸವಲತ್ತು ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಸಂದೇಶ ನೀಡಿದರು.
ಕೆಲವೊಮ್ಮೆ ತಿಳಿದೋ ತಿಳಿಯದೆಯೋ ಅಪರಾಧಗಳು ನಮ್ಮಿಂದಾಗುತ್ತವೆ. ಅದಕ್ಕೆ ನಾಗರಿಕ ಸಮಾಜದ ನಿಯಮಾನುಸಾರ ಶಿಕ್ಷೆ ಅನುಭವಿಸಬೇಕಾಗುತ್ತದೆ. ಆದರೆ ಶಿಕ್ಷೆ ಅನುಭವಿಸಿ ಹೊರಗೆ ಬರುವಾಗ ಅಂತಃಸಾಕ್ಷಿಯಾಗಿ ಮಾಡಿದ ತಪ್ಪಿಗೆ ಪಶ್ಚಾತ್ತಾಪ ಪಟ್ಟರೇ ಮಾತ್ರ ಪರಿಶುದ್ಧರಾಗಲು ಸಾಧ್ಯ. ಆದ್ದರಿಂದ ಮುಂದೆ ಇಂತಹ ಅಪರಾಧಗಳನ್ನು ನಡೆಸದೇ, ಅಪರಾಧ ಮುಕ್ತ ಸಮಾಜ ನಿರ್ಮಿಸಲು ಶ್ರಮಿಸಬೇಕು ಎಂದು ಕೈದಿಗಳಿಗೆ ಕಿವಿಮಾತು ಹೇಳಿದರು.
ಮೈಸೂರಿನ ದಲಿತರ ನಿವಾಸಗಳಿಗೆ ಭೇಟಿ ನೀಡಿದ ಪೇಜಾವರ ಶ್ರೀಗಳು
ಇದೇ ಸಂದರ್ಭ ಪೇಜಾವರ ಶ್ರೀಗಳು ಕಾರಾಗೃಹದ ಕೈದಿಗಳಿಗೆ ರಾಮ ಮಂತ್ರ ಬೋಧಿಸಿ, ಆಶೀರ್ವದಿಸಿದರು.
ಜಿಲ್ಲಾ ಕೇಂದ್ರ ಕಾರಾಗೃಹ ಅಧೀಕ್ಷಕ ಪಿ.ಎಸ್. ರಮೇಶ್, ಸ್ಥಳೀಯ ಲಯನ್ಸ್, ರೋಟರಿ, ಇನ್ನರ್‌ವೀಲ್ ಕ್ಲಬ್ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸನಾತನ ಧರ್ಮ: ದೇಶ ವಿರೋಧಿಗಳಿಗೆ ಪಾಠ ಅಗತ್ಯ, ಪೇಜಾವರ ಶ್ರೀ