ರಾಯಚೂರು(ಜ.24): ಒಳಿತು ಮಾಡುವ ಜವಾಬ್ದಾರಿ ಎಲ್ಲರಿಗೂ ಇದೆ. ಸಮಾಜ ಅಂದ್ರೆ ನಾವು, ಪ್ರತಿಯೊಬ್ಬ ವ್ಯಕ್ತಿ ಸಮಾಜಕ್ಕೆ ಒಳಿತು ಮಾಡಬೇಕು. ಸಮಾಜಕ್ಕೆ ಕೆಡಕು ಮಾಡುವುದರಿಂದ ಯಾರಿಗೂ ಒಳಿತು ಆಗದು. ಯಾರು ಕೂಡ ಇಂತಹ ದುಷ್ಕೃತ್ಯಕ್ಕೆ ಕೈ ಹಾಕಬಾರದು ಎಂದು ಉಡುಪಿ ಮಠಾಧಿಪತಿ ವಿಶ್ವ ಪ್ರಸನ್ನ ತೀರ್ಥರು ಹೇಳಿದ್ದಾರೆ. 

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆಯಾದ ಪ್ರಕರಣದ ಸಂಬಂಧ ಶುಕ್ರವಾರ ನಗರದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಶ್ರೀಗಳು, ತಪ್ಪು ಮಾಡಿದವರಿಗೆ ತಕ್ಕ ಶಿಕ್ಷೆಯಾಗಲೇಬೇಕು. ಅಂದಾಗ ಯಾರು ಇಂತಹ ಕೃತ್ಯಕ್ಕೆ ಮುಂದಾಗಲ್ಲ ಎಂದು ತಿಳಿಸಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ರಾಮಮಂದಿರ ನಿರ್ಮಾಣ ವಿಚಾರದ ಬಗ್ಗೆ ಮಾತನಾಡಿದ ಅವರು, ರಾಮಮಂದಿರ ನಿರ್ಮಾಣ ಆಗಬೇಕು ಎಂಬುವುದು ಶತ ಶತಮಾನದ ಕನಸಾಗಿದೆ. ಸುಪ್ರೀಂ ಕೋರ್ಟ್ ರಾಮಮಂದಿರ ನಿರ್ಮಾಣ ‌ಮಾಡುವುದಕ್ಕೆ ಮುಕ್ತ ಅವಕಾಶ ‌ಮಾಡಿಕೊಟ್ಟಿದೆ. ಹಾಗಾಗಿ ಬಹುಬೇಗನೇ ರಾಮಮಂದಿರ ಆಗಬೇಕು ಎಂದ ವಿಶ್ವಪ್ರಸನ್ನ ತೀರ್ಥರು ಅಭಿಪ್ರಾಯಪಟ್ಟಿದ್ದಾರೆ.