ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಅವರ ತೋಟದಲ್ಲಿ ಸರ್ಕಾರಿ ಜಮೀನು ಒತ್ತುವರಿ ಆರೋಪದ ತನಿಖೆಗಾಗಿ ಸರ್ವೇ ಕಾರ್ಯ ನಡೆಯುತ್ತಿದೆ. ಎರಡನೇ ದಿನವೂ ಕಂದಾಯ ಇಲಾಖೆ ಅಧಿಕಾರಿಗಳು ಸರ್ವೇ ಕಾರ್ಯ ಮುಂದುವರೆಸಿದ್ದಾರೆ. ಹೈಕೋರ್ಟ್ ನಿರ್ದೇಶನದ ಮೇರೆಗೆ ಈ ಸರ್ವೇ ಕಾರ್ಯ ನಡೆಯುತ್ತಿದ್ದು, ವರದಿಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಾಗುವುದು.

ರಾಮನಗರ (ಫೆ.18): ಕೇಂದ್ರ ಕೈಗಾರಿಕಾ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಸರ್ಕಾರಿ ಜಮೀನನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂಬ ಆರೋಪದ ಬೆನ್ನಲ್ಲಿಯೇ ರಾಜ್ಯ ಸರ್ಕಾರದಿಂದ ಸತತ 2ನೇ ದಿನವೂ ಕುಮಾರಸ್ವಾಮಿ ಅವರ ತೋಟದ ಸರ್ವೇ ಕಾರ್ಯವನ್ನು ಮಾಡಲಾಗುತ್ತಿದೆ.

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಭೂ ಒತ್ತುವರಿ ಆರೋಪ ಕೇಳಿಬಂದಿತ್ತು. ಹೀಗಾಗಿ, ರಾಜ್ಯ ಸರ್ಕಾರದಿಂದ ಹೆಚ್.ಡಿ. ಕುಮಾರಸ್ವಾಮಿ ಅವರ ಭೂ ಒತ್ತುವರಿ ಬಗ್ಗೆ ತನಿಖೆಗೆ ರಾಜ್ಯ ಸರ್ಕಾರದಿಂದ ಎಸ್ಐಟಿ ರಚನೆ ಮಾಡಲಾಗಿತ್ತು. ಆದರೆ, ಎಸ್‌ಐಟಿ ತನಿಖಾ ತಂಡದಿಂದ ವರದಿ ನೀಡಲು ವಿಳಂಬ ಹಿನ್ನೆಲೆ ಕಂದಾಯ ಇಲಾಖೆ ಆಯುಕ್ತರಿಗೆ ಶೀಘ್ರ ವರದಿ ನೀಡುವಂತೆ ಹೈಕೋರ್ಟ್‌ನಿಂದ ತಾಕೀತು ಮಾಡಲಾಗಿತ್ತು. ಇದರ ಬೆನ್ನಲ್ಲಿಯೇ ನಿನ್ನೆಯಿಂದ ಕಂದಾಯ ಇಲಾಖೆ ಅಧಿಕಾರಿಗಳು ಕುಮಾರಸ್ವಾಮಿ ತೋಟದ ಜಾಗಕ್ಕೆ ಬಂದು ಸರ್ವೇ ಕಾರ್ಯ ಆರಂಭಿಸಿತ್ತು. ಇಂದು ಕಂದಾಯ ಇಲಾಖೆ ಅಧಿಕಾರಿಗಳು ಕಳೆದ ಎರಡು ದಿನಗಳಿಂದ ಬಿಸಲು, ನೆರಳು ಲೆಕ್ಕಿಸದೇ ಸರ್ವೇ ಕಾರ್ಯವನ್ನು ಮುಂದುವರೆಸಿದ್ದಾರೆ.

ಎರಡನೇ ದಿನವೂ ಮುಂದುವರಿದ ಸರ್ವೇ ಕಾರ್ಯ ಮುಂದುರೆಸಿದೆ. ಬಿಡದಿಯ ಕೇತಗಾನಹಳ್ಳಿಯಲ್ಲಿರೋ ಕುಮಾರಸ್ವಾಮಿ ತೋಟದಲ್ಲಿ ರೆವಿನ್ಯೂ ಇನ್ಸ್‌ಪೆಕ್ಟರ್ ಪ್ರಕಾಶ್ ನೇತೃತ್ವದಲ್ಲಿ ಜಮೀನಿನ ಸರ್ವೆ ಮಾಡಲಾಗುತ್ತಿದೆ. ಜೊತೆಗೆ, ಕುಮಾರಸ್ವಾಮಿ ತೋಟ ಹಾಗೂ ಸುತ್ತಮುತ್ತಲಿನ ಜಮೀನುಗಳನ್ನೂ ಕೂಡ ಸರ್ವೇ ಮಾಡಲಾಗುತ್ತಿದೆ. ಆಧುನಿಕ ಸರ್ವೇ ಉಪಕರಣಗಳ ಮೂಲಕ ಸಮೀಕ್ಷೆ ಮಾಡುತ್ತಿದ್ದು, ಕುಮಾರಸ್ವಾಮಿ ತೋಟದ ಅಕ್ಕಪಕ್ಕದ ಜಮೀನಿನ ಮೂಲ ಮಾಲೀಕರನ್ನೂ ಸ್ಥಳಕ್ಕೆ ಕರೆಸಿ ಪರಿಶೀಲನೆ ಮಾಡಲಾಗುತ್ತಿದೆ. ಕೇತಗಾನಹಳ್ಳಿಯಲ್ಲಿರುವ ಸರ್ವೇ ನಂಬರ್ 7, 8ರಲ್ಲಿರೋ ಕುಮಾರಸ್ವಾಮಿ ತೋಟದ ಸುತ್ತಲೂ ಸರ್ಕಾರಿ ಜಮೀನು ಒತ್ತುವರಿ ಆಗಿದೆಯೇ ಎಂಬುದನ್ನು ಸರ್ವೇ ಮೂಲಕ ಪತ್ತೆ ಮಾಡಲಾಗುತ್ತಿದೆ.

ಇದನ್ನೂ ಓದಿ: ಒಳ್ಳೆಯ ಕೆಲಸಗಳಿಗೆ ಭಗವಂತ ಯಾವ ರೂಪದಲ್ಲಾದರೂ ಸಹಾಯ ಮಾಡುತ್ತಾನೆ: ನಿಖಿಲ್ ಕುಮಾರಸ್ವಾಮಿ

ಕೇತಗಾನಹಳ್ಳಿಯ ಸರ್ವೇ ನಂಬರ್ 7,8,9,10,16,17,79, ಇಷ್ಟು ಗೋಮಾಳ ಭೂಮಿಯಲ್ಲಿ ಪರಿಶೀಲನೆ ಮಾಡಲಾಗುತ್ತಿದೆ. ಒಟ್ಟು 110 ಎಕರೆಗೂ ಹೆಚ್ಚು ಜಮೀನು ಸರ್ವೆ ಮಾಡಿದ್ದಾರೆ. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಅವರ ಸಹೋದರಿ ಅನುಸೂಯ ಮಂಜುನಾಥ್ ಹಾಗೂ ಸಂಬಂಧಿ ಡಿ.ಸಿ. ತಮ್ಮಣ್ಣ ಹೆಸರಿನಲ್ಲಿರುವ ಜಮೀನಿಗೆ ಅಕ್ಕಪಕ್ಕದಲ್ಲಿರುವ 14 ಎಕರೆ ಭೂಮಿ ಸರ್ಕಾರಿ ಜಮೀನನ್ನ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಸಾಮಾಜಿಕ ಹೋರಾಟಗಾರರು ದೂರು ನೀಡಿದ್ದರು. ಈ ಬಗ್ಗೆ ವರದಿ ನೀಡುವಂತೆ ಕಂದಾಯ ಇಲಾಖೆಗೆ ಹೈಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಸಮೀಕ್ಷೆ ನಡೆಸಲಾಗುತ್ತಿದ್ದು, ನಂತರ ಜಿಲ್ಲಾಧಿಕಾರಿಗೆ ವರದಿ ನೀಡಲಿದ್ದಾರೆ.

ಇದನ್ನೂ ಓದಿ: ರಾಮನಗರದ ಹೆಸರು ಬದಲಾವಣೆಗೆ ಕುಮಾರಸ್ವಾಮಿಯಿಂದ ಅಡ್ಡಗಾಲು: ಡಿಕೆಶಿ ಕಿಡಿ