Asianet Suvarna News Asianet Suvarna News

ಪ್ರಧಾನಿ ಮೋದಿ ಮನ್ ಕಿ ಬಾತ್: ಮುಗದ ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿದ ಜೋಶಿ

ಕೇಂದ್ರ ಸಂಸದೀಯ ವ್ಯವಹಾರಗಳ ಮತ್ತು ಗಣಿ, ಕಲ್ಲಿದ್ದಲು ಸಚಿವರಾದ ಪ್ರಹ್ಲಾದ್‌ ಜೋಶಿ ಅವರು ಇಂದು ಬೆಳಿಗ್ಗೆ ಪ್ರಧಾನಮಂತ್ರಿಗಳ ಮನ್ ಕಿ ಬಾತ್ ಕಾರ್ಯಕ್ರಮವನ್ನು ಮುಗದ ಗ್ರಾಮ ಪಂಚಾಯತದಲ್ಲಿ ವೀಕ್ಷಿಸಿದರು.

Union Minister Prahlad Joshi Receives Complaint From Mugada Villagers after pm modi mann ki baat gvd
Author
First Published Aug 28, 2022, 3:47 PM IST

ವರದಿ: ಪರಮೇಶ್ವರ ಅಂಗಡಿ, ಏಷ್ಯಾನೆಟ್ ಸುವರ್ಣ ನ್ಯೂಸ್, ಧಾರವಾಡ 

ಧಾರವಾಡ (ಆ.28): ಕೇಂದ್ರ ಸಂಸದೀಯ ವ್ಯವಹಾರಗಳ ಮತ್ತು ಗಣಿ, ಕಲ್ಲಿದ್ದಲು ಸಚಿವರಾದ ಪ್ರಹ್ಲಾದ್‌ ಜೋಶಿ ಅವರು ಇಂದು ಬೆಳಿಗ್ಗೆ ಪ್ರಧಾನಮಂತ್ರಿಗಳ ಮನ್ ಕಿ ಬಾತ್ ಕಾರ್ಯಕ್ರಮವನ್ನು ಮುಗದ ಗ್ರಾಮ ಪಂಚಾಯತದಲ್ಲಿ ವೀಕ್ಷಿಸಿದರು. ನಂತರ ಅವರು ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿದ ಅವರು ಕೇಂದ್ರ ಸರಕಾರವು ಗ್ರಾಮೀಣ ಮೂಲಸೌಕರ್ಯಗಳ ಹೆಚ್ಚಳ ಮತ್ತು ಸುಧಾರಣೆಗೆ ಆದ್ಯತೆ ನೀಡಿದೆ. ಕಲಘಟಗಿ ಹಾಗೂ ಧಾರವಾಡ ಮತಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಸುಧಾರಣೆಗೆ ಕಾಮಗಾರಿ ಕೈಗೊಳ್ಳಲಾಗಿದೆ ಮತ್ತು ರೈಲ್ವೆ ಬ್ರಿಡ್ಜ್‌ ನಿರ್ಮಾಣಕ್ಕೆ ಅನುದಾನ ಒದಗಿಸಲಾಗಿದೆ ಎಂದು ಹೇಳಿದರು. 

ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಅಮೃತ ಸರೋವರ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ನೂರು ಕೆರೆಗಳ ನಿರ್ಮಾಣಕ್ಕೆ ನಿರ್ಧರಿಸಿ, ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಇವುಗಳಲ್ಲಿ ಗ್ರಾಮೀಣ ಐತಿಹಾಸಿಕ ಕೆರೆಗಳ ಸುಧಾರಣೆ, ಹೊಸ ಕೆರೆಗಳ ನಿರ್ಮಾಣ ಸೇರಿದೆ ಭಾರತವು ಈಗ ವಿದ್ಯುತ್ ಉತ್ಪಾದನೆ ಮತ್ತು ವಿತರಣೆಯಲ್ಲಿ ಸ್ವಾವಲಂಬಿ ಆಗಿದೆ. ಸ್ಥಳಿಯ ಸರಕಾರಗಳು ಲಭ್ಯವಿರುವ ವಿದ್ಯುತನ್ನು ಅಗತ್ಯಕ್ಕೆ ತಕ್ಕಂತೆ ಬಳಸಿಕೊಳ್ಳಬೇಕು. ಜನರಿಗೆ ತೊಂದರೆ ಆಗದಂತೆ ವಿದ್ಯುತ್ ವಿತರಣೆ ಆಗಬೇಕೆಂದು ಸಚಿವರು ಹೇಳಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಅನೇಕ ಜನಪರ ಯೋಜನೆಗಳು ಪ್ರಗತಿಯ ಪಥದಲ್ಲಿ ಸಾಗುತ್ತಿವೆ. 

ತಾರಿಹಾಳ ಅಗ್ನಿ ದುರಂತದ ಕರಾಳತೆ: ಕುಟುಂಬಕ್ಕಿದ್ದ ಆಸರೆಯೇ ಕಳಚಿತು, 6 ತಿಂಗಳ ಕೂಸು ಅನಾಥ..!

ಜಲಜೀವನ ಮಿಷನ್ ಅಮೃತ ಯೋಜನೆಯಲ್ಲಿ ಅಳ್ನಾವರ ತಾಲೂಕಿನ 3625 ಮನೆಗಳಿಗೆ ನಿರಂತರ ನೀರು ಪೂರೈಕೆ ಕಾಮಗಾರಿಯಲ್ಲಿ ಶೇ.73 ರಷ್ಟು ಸಾಧನೆಯಾಗಿದೆ ಅಳ್ನಾವರ ಮುಖ್ಯ ರಸ್ತೆ ದುರಸ್ತಿಗೆ ಆದ್ಯತೆ ನೀಡಲಾಗಿದೆ ಎಂದು ಸಚಿವರು ಹೇಳಿದರು. ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ತಿನ ಸಮಸ್ಯೆಗಳನ್ನು ಬೆಳಿಗ್ಗೆ 6 ರಿಂದ ಸಾಯಂಕಾಲ 7 ಗಂಟೆಗಳವರೆಗೂ ಹಾಗೂ ಹೊಲದಲ್ಲಿ ವಾಸಿಸುವ ರೈತರಿಗೆ ಸಿಂಗಲ್ ಫೇಸ್ ವಿದ್ಯುತ್ ನೀಡಬೇಕೆಂದು ಹೆಸ್ಕಾಂನ ಅಧಿಕಾರಿಗಳಿಗೆ ಸೂಚಿಸಿದರು‌. ನಂತರ ಸಚಿವರಿಗೆ ಮುಗದ ಹಾಗೂ ಸುತ್ತಲಿನ ಗ್ರಾಮಗಳ ಸಾರ್ವಜನಿಕರು ತಮ್ಮ ಗ್ರಾಮಗಳ ಪ್ರಮುಖ ಸಮಸ್ಯೆಗಳ ಕುರಿತು ಮನವಿ ಸಲ್ಲಿಸಿದರು. 

ಕಲಘಟಗಿ ಶಾಸಕ ಸಿ.ಎಂ.ನಿಂಬಣ್ಣವರ ಅವರು, ಜನರ ಸಮಸ್ಯೆಗಳನ್ನು ಆಲಿಸಿ ಸ್ಪಂದಿಸಿದರು. ತಾಲ್ಲೂಕಿನಾದ್ಯಂತ ಸಂಚರಿಸಿ, ಸಾರ್ವಜನಿಕ ಕುಂದು ಕೊರತೆಗಳಿಗೆ ಪರಿಹಾರ ಒದಗಿಸುವದಾಗಿ ಹೇಳಿದರು. ಸಭೆಯಲ್ಲಿ ರಾಮಾಪುರ ಗ್ರಾಮಸ್ಥರು, ತೋಟದ ಮನೆಗಳಿರುವ ಪ್ರದೇಶವನ್ನು ಕಂದಾಯ ಗ್ರಾಮವಾಗಿಸಲು, ಮುಮ್ಮಿಗಟ್ಟಿ ಗ್ರಾಮಸ್ಥರು ಸ್ಮಶಾನಕ್ಕೆ ಭೂಮಿ ನೀಡಲು ಮುಗದ ಗ್ರಾಮಸ್ಥರು ವಿದ್ಯುತ್ ಸಮಸ್ಯೆ ಬಗೆಹರಿಸಿ, ನಿರಂತರವಾಗಿ ವಿದ್ಯುತ್ ಪೂರೈಕೆ ಮಾಡಲು ಮನವಿ ಸಲ್ಲಿಸಿದರು. ಮನವಿ ಪರಿಶೀಲಿಸಿದ ಕೇಂದ್ರ ಸಚಿವರು ಸಂಬಂಧಿಸಿದ ಅಧಿಕಾರಿಗಳಿಂದ ಪರಿಶೀಲಿಸಿ, ಪರಿಹರಿಸಲು ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು. 

ಅನುಮತಿ ಕೊಡದಿದ್ದರೂ ಹುಬ್ಬಳ್ಳಿ ಈದ್ಗಾದಲ್ಲಿ ಗಣೇಶೋತ್ಸವ: ಪ್ರಮೋದ್‌ ಮುತಾಲಿಕ್‌

ಸಭೆಯಲ್ಲಿ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸುರೇಶ ಇಟ್ನಾಳ, ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ ಡಿ. ಭಾರತಿ, ಉಪವಿಭಾಗಧಾಕಾರಿ ಅಶೋಕ ತೇಲಿ, ಮುಗದ ಗ್ರಾಮ ಪಂಚಾಯತ ಅಧ್ಯಕ್ಷೆ ಋಕ್ಕಮ್ಮ ಭೋವಿ ಮತ್ತು ಉಪಾಧ್ಯಕ್ಷರು, ಸದಸ್ಯರು ಸೇರಿದಂತೆ ಗ್ರಾಮಸ್ಥರು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.

Follow Us:
Download App:
  • android
  • ios