ಹುಬ್ಬಳ್ಳಿ(ಮಾ.15): ಬಿ.ಎಸ್. ಯಡಿಯೂರಪ್ಪನವರೇ ಇನ್ನೂ ಮೂರು ವರ್ಷಕಾಲ ಮುಖ್ಯಮಂತ್ರಿ ಆಗಿರುತ್ತಾರೆ. ಯಡಿಯೂರಪ್ಪನವರು ಸಮರ್ಥವಾಗಿ ಸರ್ಕಾರವನ್ನು ನಡೆಸುತ್ತಿದ್ದಾರೆ. ಅನೇಕ ಜನಪರ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿದ್ದಾರೆ. ಅವರ ನೇತೃತ್ವದಲ್ಲಿಯೇ ರಾಜ್ಯ ಸರ್ಕಾರ ಮುಂದುವರಿಯಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. 

ಇಂದು(ಭಾನುವಾರ) ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ನಾನು ಯಾವುದೇ ಅತೃಪ್ತ ಶಾಸಕರ ಸಭೆ ನಡೆಸಿಲ್ಲ‌. ಶಾಸಕರ ಸಭೆ ನಡೆಸಿದ್ದೇನೆ ಅನ್ನೋದು ಶುದ್ಧ ಸುಳ್ಳು. ಶಾಸಕರ ಸಭೆ ನಡೆಸುವಷ್ಟು ದೊಡ್ಡ ನಾಯಕನೂ ನಾನಲ್ಲ ಎಂದಿದ್ದಾರೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಸಿಎಂ ಸ್ಥಾನವನ್ನು ಯಾರೂ ಅಭದ್ರಗೊಳಿಸುತ್ತಿಲ್ಲ. ಜಗದೀಶ್ ಶೆಟ್ಟರ್ ಕೂಡ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಕೆಲವು ಅತೃಪ್ತ ಆತ್ಮಗಳು ಸುಳ್ಳು ವದಂತಿ ಹರಡುತ್ತಿವೆ ಎಂದು ಹೇಳಿದ್ದಾರೆ.