* ಬಿಜೆಪಿಯಲ್ಲಿ ಆಂತರಿಕ ಕಚ್ಚಾಟವಿಲ್ಲ* ಯೋಗೀಶ್ವರ್‌ ಪರೀಕ್ಷೆ ಬರೆದ ವಿವಿಯ ಕುಲಪತಿ ಅರುಣ್‌ ಸಿಂಗ್‌ ಸರಿಯಾಗಿ ಉತ್ತರ ಕೊಟ್ಟಿದ್ದಾರೆ * ಪ್ರಧಾನಿ ತೀರ್ಮಾನಿಸಿದಾಗ ಸಂಪುಟ ವಿಸ್ತರಣೆ 

ಧಾರವಾಡ(ಜೂ.28): ಸರ್ಕಾರ ಸಹಜವಾಗಿ ಉಸಿರಾಡುತ್ತಿದೆ. ಶ್ವಾಸಕೋಶಗಳು ತುಂಬಾನೇ ಗಟ್ಟಿಯಾಗಿವೆ. ಸರ್ಕಾರ ಸರಿಯಾಗಿ ಕೆಲಸ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. 

ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿಯಲ್ಲಿ ಆಂತರಿಕ ಕಚ್ಚಾಟವಿಲ್ಲ. ಎಲ್ಲವನ್ನೂ ರಾಜಕೀಯ ಅಂದರೆ ಹೇಗೆ ಎಂದು ಪ್ರಶ್ನಿಸಿದರು. ಸಚಿವ ಸಿ.ಪಿ.ಯೋಗೀಶ್ವರ್‌ ಪರೀಕ್ಷೆ ಬರೆದ ವಿವಿಯ ಕುಲಪತಿ ಅರುಣ್‌ ಸಿಂಗ್‌ ಸರಿಯಾಗಿ ಉತ್ತರ ಕೊಟ್ಟಿದ್ದಾರೆ ಎಂದು ಯೋಗೀಶ್ವರಗೆ ಕುಟುಕಿದ್ದಾರೆ. 

'ಸಿಎಂ ಸ್ಥಾನ ಖಾಲಿ ಇಲ್ಲ‌ ಎನ್ನುತ್ತ ಬೋರ್ಡ್ ಹಾಕಿಕೊಂಡು ಓಡಾಡಬೇಕಿದೆ'

ಇನ್ನು ಕೇಂದ್ರ ಸಚಿವ ಸ್ಥಾನದ ಬಗ್ಗೆ ಮಾತನಾಡಿದ ಅವರು, ಪ್ರಧಾನಿ ತೀರ್ಮಾನಿಸಿದಾಗ ವಿಸ್ತರಣೆಯಾಗುತ್ತದೆ. ಪ್ರಧಾನಿ ತೀರ್ಮಾನದ ಮೇಲೆ ವಿಸ್ತರಣೆ. ಸಂಪುಟಕ್ಕೆ ಯಾರನ್ನು ತೆಗೆದುಕೊಳ್ಳುತ್ತಾರೆ ಎಂಬುದು ಮೊದಲೇ ನಮ್ಮ ಸರ್ಕಾರದಲ್ಲಿ ಗೊತ್ತಾಗುವುದಿಲ್ಲ. ಅದರ ಬಗ್ಗೆ ತಾವು ಮಾತನಾಡಲು ಅರ್ಹರೂ ಅಲ್ಲ ಎಂದರು.