1100 ಕೋಟಿ ವೆಚ್ಚದ ಯೋಜನೆ| ಕೇಂದ್ರ ಸರ್ಕಾರ ಹರ್‌ ಘರ್‌ ಜಲ್‌ ಯೋಜನೆ ಮೂಲಕ ಪ್ರತಿ ಮನೆಗೆ ಶುದ್ಧ ಕುಡಿಯುವ ನೀರು|  24/7 ನೀರು ಲಭ್ಯವಾಗುವಂತೆ ವ್ಯವಸ್ಥೆ| ಸ್ವಚ್ಛ ಭಾರತ್‌ ಸ್ವಚ್ಛ ಗ್ರಾಮ ಯೋಜನೆಯಡಿ ಪ್ರತಿ ಗ್ರಾಮ ಪಂಚಾಯಿತಿಗೆ ಸಾಕಷ್ಟು ಅನುದಾನ| 

ಹುಬ್ಬಳ್ಳಿ(ನ.23): ಕೇಂದ್ರ ಸರ್ಕಾರದ ಜಲಜೀವನ್‌ ಮಿಷನ್‌ ಹಾಗೂ ರಾಜ್ಯ ಸರ್ಕಾರದ ಜಲಧಾರೆ ಯೋಜನೆಯಡಿ 1100 ಕೋಟಿ ವೆಚ್ಚದಲ್ಲಿ ಧಾರವಾಡ ಜಿಲ್ಲಾದ್ಯಂತ ಮಲಪ್ರಭಾ ನದಿಯಿಂದ ಕುಡಿಯುವ ನೀರು ಸರಬರಾಜು ಮಾಡಲಾಗುವುದು ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. 

Add Asianetnews Kannada as a Preferred SourcegooglePreferred

ತಾಲೂಕಿನ ಕುಸುಗಲ್‌ ಗ್ರಾಮದಲ್ಲಿ ಆಯೋಜಿಸಲಾದ ಘನ ತ್ಯಾಜ್ಯ ವಿಲೇವಾರಿ ಘಟಕ, ಶ್ರೀ ಬೀರಲಿಂಗೇಶ್ವರ ದೇವಸ್ಥಾನದ ಭೂಮಿ ಪೂಜೆ, ಮುಕ್ತಿ ವನಸಹಾಯ ಕೇಂದ್ರ ಉದ್ಘಾಟನೆ ನೆರವೇರಿಸಿ ಹಾಗೂ ಕಸ ವಿಲೇವಾರಿ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದರು.

ಬಸ್‌ ಡಿಕ್ಕಿ: ಕರು ಸಾವು, ಹಸುವಿನ ಮೂಕ ರೋದನೆ

ಕೇಂದ್ರ ಸರ್ಕಾರ ಹರ್‌ ಘರ್‌ ಜಲ್‌ ಯೋಜನೆ ಮೂಲಕ ಪ್ರತಿ ಮನೆಗೆ ಶುದ್ಧ ಕುಡಿಯುವ ನೀರನ್ನು ಒದಗಿಸಲಾಗುವುದು. 24/7 ನೀರು ಲಭ್ಯವಾಗುವಂತೆ ಮಾಡಲಾಗುವುದು. ಸ್ವಚ್ಛ ಭಾರತ್‌ ಸ್ವಚ್ಛ ಗ್ರಾಮ ಯೋಜನೆಯಡಿ ಪ್ರತಿ ಗ್ರಾಮ ಪಂಚಾಯಿತಿಗೆ ಸಾಕಷ್ಟು ಅನುದಾನ ಒದಗಿಸಲಾಗುತ್ತಿದೆ. ಪ್ರತಿ ಮನೆಯಲ್ಲೂ ಕಸ ವಿಂಗಡಣೆ ಮಾಡಬೇಕು. ಹಸಿ ಹಾಗೂ ಕಸ ಸಂಗ್ರಹಿಸಲು ಗ್ರಾಮ ಪಂಚಾಯಿತಿಯಿಂದಲೇ ಹಸಿರು ಮತ್ತು ನೀಲಿ ಬುಟ್ಟಿಗಳನ್ನು ಉಚಿತವಾಗಿ ನೀಡಲಾಗುತ್ತಿದೆ. ಕುಸುಗಲ್‌ ಗ್ರಾಮದಲ್ಲಿ 20 ಲಕ್ಷ ಅನುದಾನದಲ್ಲಿ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಿಸು​ತ್ತಿದ್ದು ಇದಕ್ಕೆ 5 ಲಕ್ಷ ಹಣವನ್ನು ನರೇಗಾದಡಿ ಕೊಡಲಾಗಿದೆ. ಧಾರವಾಡ ಜಿಲ್ಲೆಗೆ 60 ತ್ಯಾಜ್ಯ ವಿಲೇವಾರಿ ಘಟಕ ಮಂಜೂರು ಆಗಿವೆ. 20 ಘಟಕಗಳು ಕಾರ್ಯ ನಿರ್ವಹಿಸುತ್ತಿವೆ ಎಂದ ಅವರು, ಸ್ವಚ್ಛತೆ ಗಮನ ನೀಡದೆ ಇರುವುದರಿಂದ ಹಲವು ಕಾಯಿಲೆಗಳು ಸಾಂಕ್ರಾಮಿಕ ರೋಗಗಳು ಹರಡುತ್ತವೆ. ರೋಗ ಬಂದಾಗ ಆಸ್ಪತ್ರೆಗಳಿಗೆ ಹಣ ವ್ಯಯಿಸುವ ಬದಲು ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದರು. ಕುಸುಗಲ್‌ ಗ್ರಾಮಸ್ಥರು ನೀಡದ ಮನವಿಗೆ ಸ್ಪಂದಿಸಿದ ಕೇಂದ್ರ ಸಚಿವರು ಹುಬ್ಬಳ್ಳಿ ಬೈಪಾಸ್‌ ರಸ್ತೆಯಿಂದ ಕುಸುಗಲ್‌ ಗ್ರಾಮಕ್ಕೆ ಸವೀರ್ಸ್‌ ರೋಡ್‌ ನಿರ್ಮಿಸಲು ಅಧಿಕಾರಿಗಳಿಗೆ ಸೂಚನೆ ನೀಡುವುದಾಗಿ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ಸಂಸ್ಥೆ ಅಧ್ಯಕ್ಷ ಹಾಗೂ ನವಲಗುಂದ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ, ಜಿಪಂ ಉಪಾಧ್ಯಕ್ಷ ಶಿವಾನಂದ ಕರಿಗಾರ, ಜಿಪಂ ಸಿಇಒ ಬಿ. ಸುಶೀಲಾ, ತಾಪಂ ಸದಸ್ಯೆ ದ್ಯಾವಲಾಬಿ ಮಿರ್ಜಾನವರ, ತಾಪಂ ಇಒ ಗಂಗಾಧರ ಕಂದಕೋರ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಶಿಧರ ಸೇರಿದಂತೆ ಮಾಜಿ ಗ್ರಾಪಂ ಸದಸ್ಯರು ಗ್ರಾಮದ ಮುಖಂಡರು ಉಪಸ್ಥಿತರಿದ್ದರು.