Asianet Suvarna News Asianet Suvarna News

ಲಾಕ್‌ಡೌನ್‌ ಸಡಿಲಿಕೆ: ಪೂರ್ಣ ಪ್ರಮಾಣದ ವಹಿವಾಟಿಗೆ ಅವಕಾಶ

ಕೋವಿಡ್‌-19ನಿಂದಾಗಿ ಇಡೀ ದೇಶವನ್ನೇ ಲಾಕ್‌ಡೌನ್‌ ಮಾಡಲಾಗಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರ ಕೊರೋನಾ ಹಿನ್ನೆಲೆಯಲ್ಲಿ ಮೂರು ವಲಯಗಳನ್ನು ಗುರ್ತಿಸಿದ್ದು ಅದರಲ್ಲಿ ತಿಪಟೂರಿನಲ್ಲಿ ಮೇ 9ರಿಂದ ಬೆಳಗ್ಗೆ 7ರಿಂದ ಸಂಜೆ 7ರವರೆಗೆ ಪೂರ್ಣ ಪ್ರಮಾಣದಲ್ಲಿ ವ್ಯಾಪಾರ ವಹಿವಾಟು ನಡೆಸಲು ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿದೆ ಎಂದು ಶಾಸಕ ಬಿ.ಸಿ. ನಾಗೇಶ್‌ ತಿಳಿಸಿದ್ದಾರೆ.

Unlock in Tiptur permits all kind of business
Author
Bangalore, First Published May 9, 2020, 2:14 PM IST

ತಿಪಟೂರು(ಮೇ 09): ಕೋವಿಡ್‌-19ನಿಂದಾಗಿ ಇಡೀ ದೇಶವನ್ನೇ ಲಾಕ್‌ಡೌನ್‌ ಮಾಡಲಾಗಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರ ಕೊರೋನಾ ಹಿನ್ನೆಲೆಯಲ್ಲಿ ಮೂರು ವಲಯಗಳನ್ನು ಗುರ್ತಿಸಿದ್ದು ಅದರಲ್ಲಿ ತಿಪಟೂರಿನಲ್ಲಿ ಮೇ 9ರಿಂದ ಬೆಳಗ್ಗೆ 7ರಿಂದ ಸಂಜೆ 7ರವರೆಗೆ ಪೂರ್ಣ ಪ್ರಮಾಣದಲ್ಲಿ ವ್ಯಾಪಾರ ವಹಿವಾಟು ನಡೆಸಲು ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿದೆ ಎಂದು ಶಾಸಕ ಬಿ.ಸಿ. ನಾಗೇಶ್‌ ತಿಳಿಸಿದರು

ನಗರದ ತಾಲೂಕು ಕಚೇರಿಯಲ್ಲಿ ಶುಕ್ರವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನತೆಯ ಸಹಕಾರದಿಂದ ತಾಲೂಕಿನಲ್ಲಿ ಯಾವುದೇ ಕೊರೊನಾ ಪ್ರಕರಣಗಳು ಸಂಭವಿಸಿಲ್ಲ. ತಾಲೂಕು ಆಡಳಿತ, ಪೊಲೀಸ್‌, ಆಶಾ, ಅಂಗನವಾಡಿ ಹಾಗೂ ಮಾಧ್ಯಮಗಳ ಸಹಕಾರವೆ ಇದಕ್ಕೆ ಕಾರಣವಾಗಿದೆ ಎಂದರು.

ವದಂತಿ ನಂಬಿ ರೈಲು ನಿಲ್ದಾಣಕ್ಕೆ ಬಂದ್ರು ಸಾವಿರಾರು ಮಂದಿ..!

ಲಾಕ್‌ಡೌನ್‌ನಿಂದ ಸಂಕಷ್ಟಕ್ಕೀಡಾಗಿದ್ದ ಹಲವು ಸಮಾಜಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಶೇಷ ಪ್ಯಾಕೇಜ್‌ಗಳನ್ನು ನೀಡಿವೆ. ಮೇ 9ರಿಂದ ನಗರದಲ್ಲಿ ಎಲ್ಲಾ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಲಾಗಿದ್ದು, ಅಂಗಡಿಗಳಲ್ಲಿ ಕಡ್ಡಾಯವಾಗಿ ಸ್ಯಾನಿಟೈಸರ್‌ ಮತ್ತು ಸಾಮಾಜಿಕ ಅಂತರ ಬಳಸಬೇಕು ಎಂದರು.

ಆಟೋದವರಿಗೆ ಪರವಾನಿಗೆ ಕಡ್ಡಾಯವಾಗಿರಬೇಕು. ಮಾಸ್ಕ್‌ ಹಾಕಿಕೊಂಡವರನ್ನು ಮಾತ್ರ ಹತ್ತಿಸಿಕೊಳ್ಳಬೇಕು. 144 ಸೆಕ್ಷನ್‌ ಜಾರಿಯಲ್ಲಿರುವ ಕಾರಣ ಮದುವೆ ಬಿಟ್ಟು ಬೇರಾವುದೇ ಸಮಾರಂಭಗಳನ್ನು ಮಾಡುವಂತಿಲ್ಲ ಎಂದರು.

12ರಂದು ಕಣ್ಣೂರಿಗೆ, 14ರಂದು ಮಂಗಳೂರಿಗೆ ಭಾರತೀಯರ ಏರ್‌ಲಿಫ್ಟ್

ಆಸ್ಪತ್ರೆ, ಮೆಡಿಕಲ್‌ ದಿನದ 24ಗಂಟೆ ಕಾರ್ಯನಿರ್ವಹಿಸಲಿದ್ದು ಶಾಲಾ-ಕಾಲೇಜುಗಳು, ಚಿತ್ರಮಂದಿರ, ದೇವಾಲಯ ಎಂದಿನಂತೆ ಬಂದ್‌ ಆಗಲಿವೆ. ಬಸ್‌ ಸಂಚಾರವಿರುವುದಿಲ್ಲ. ಬೀದಿ ಬದಿ ವ್ಯಾಪಾರ, ತಂಬಾಕು, ಗುಟ್ಕಾ, ಬೀಡ ನಿಷೇಧಿಸಲಾಗಿದೆ. ಹೋಟೆಲ್‌ಗಳಿಂದ ಪಾರ್ಸಲ್‌ ವ್ಯವಸ್ಥೆ ಮಾಡಲಾಗಿದೆ. ಅವಶ್ಯಕತೆ ಇದ್ದಲ್ಲಿ ನಗರಕ್ಕೆ ಬರಬೇಕು. ಅನಾವಶ್ಯಕವಾಗಿ ಓಡಾಡುತ್ತಿದ್ದರೆ ಕ್ರಮಕೈಗೊಳ್ಳಲಾಗುವುದು. ಪ್ರತಿಯೊಬ್ಬರೂ ಮಾಸ್ಕ್‌ ಹಾಕಿಕೊಂಡು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಇಲ್ಲವಾದಲ್ಲಿ ದಂಡ ಅನಿವಾರ್ಯ ಎಂದು ಎಚ್ಚರಿಸಿದರು.

ತಹಸೀಲ್ದಾರ್‌ ಬಿ.ಆರತಿ ಮಾತನಾಡಿ, ಹೊರಗಡೆಯಿಂದ ಬಂದಿರುವ 137 ಜನರನ್ನು ಕ್ವಾರಂಟೈನ್‌ ಮಾಡಲಾಗಿದೆ. ಇಲ್ಲಿಂದ 167 ವಲಸೆ ಕಾರ್ಮಿಕರನ್ನು ಕಳುಹಿಸಿಕೊಡಲಾಗಿದೆ ಎಂದರು.

ಆಪರೇಷನ್‌ ಏರ್‌ಲಿಫ್ಟ್‌ನಲ್ಲಿ ಕನ್ನಡಿಗ ಪೈಲಟ್‌: ಭಾರತೀಯರ ಕರೆತಂದ ತುಳುನಾಡ ಕುವರ!

ಡಿವೈಎಸ್‌ಪಿ ಚಂದನ್‌ಕುಮಾರ್‌ ಮಾತನಾಡಿ, ಮಾಸ್ಕ್‌ ಹಾಕಿಕೊಳ್ಳದೆ, ಅಂತರ ಕಾಯ್ದುಕೊಳ್ಳದೆ ಇದ್ದ 120 ಜನರ ಮೇಲೆ ಕೇಸ್‌ ಹಾಕಲಾಗಿದೆ. 60 ಅಂಗಡಿಗಳಿಗೆ ನೋಟಿಸ್‌ ನೀಡಲಾಗಿದೆ. ನಮ್ಮ ಇಲಾಖೆಯಿಂದ 13 ಸಾವಿರ ರು. ದಂಡ ವಸೂಲಿ ಮಾಡಲಾಗಿದೆ. ನಗರಸಭೆಯಿಂದ 13ಸಾವಿರ ರು. ದಂಡ ವಸೂಲಾತಿ ಮಾಡಲಾಗಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ನಗರಸಭೆ ಪೌರಾಯುಕ್ತ ಉಮಾಶಂಕರ್‌, ಸಿಪಿಐ ನವೀನ್‌, ಜಯಲಕ್ಷ್ಮೇ ಮತ್ತಿತರರಿದ್ದರು.

Follow Us:
Download App:
  • android
  • ios