ಕಾರವಾರ [ಜ.09] : ವೇದಿಕೆಯಲ್ಲಿ ಕಾರ್ಯಕ್ರಮ ನಡೆಯುತ್ತಿದ್ದಾರೆ ಜಿಲ್ಲಾಧಿಕಾರಿ ಪ್ರಜ್ಞೆ ತಪ್ಪಿ ಬಿದ್ದ ಘಟನೆ ಕಾರವಾರದಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲಾಧಿಕಾರಿ ಡಾ. ಹರೀಶ್ ಕುಮಾರ್  ಕಾರವಾರ ನಗರದ ವಾರ್ತಾ ಇಲಾಖೆಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. 

"

ವಾರ್ತಾ ಸ್ಪಂದನ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಆರೋಗ್ಯ ಇಲಾಖೆ ವೈದ್ಯರ ಜೊತೆಗೆ ಹಮ್ಮಿಕೊಂಡಿದ್ದ ಫೋನ್ ಇನ್ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಇದ್ದಕ್ಕಿಂದ್ದಂತೆ ಪ್ರಜ್ಞೆ ತಪ್ಪಿ ಕುಸಿದು ಬಿದ್ದರು. 

ಮೇದಿನಿ ಎಂಬ ಸುಂದರ ಊರಲ್ಲಿ 2ಹಗಲು 1ರಾತ್ರಿ : ಇಲ್ಲಿ ಜೀವಕ್ಕೆ ಗ್ಯಾರಂಟಿ ಇಲ್ಲ!...

ತಕ್ಷಣ ಸ್ಥಳದಲ್ಲಿದ್ದ ವೈದ್ಯರು ಜಿಲ್ಲಾಧಿಕಾರಿ ಹರೀಶ್ ಕುಮಾರ್ ಅವರಿಗೆ ಸೂಕ್ತ ಚಿಕಿತ್ಸೆ ನೀಡಿದ್ದ ಕೆಲ ಸಮಯದ ನಂತರ ಸುಧಾರಿಸಿಕೊಂಡು ಕಾರ್ಯಕ್ರಮದಲ್ಲಿ ಪಾಲ್ಗೊಂಡರು. 

ಲೋ ಬಿಪಿ ಸಮಸ್ಯೆಯಿಂದಾಗಿ ಜಿಲ್ಲಾಧಿಕಾರಿಗಳು ಕುಸಿದು ಬಿದ್ದಿದ್ದಾಗಿ ವೈದ್ಯಾಧಿಕಾರಿಗಳು ತಿಳಿಸಿದರು. 

ಮೇದಿನಿ ಗ್ರಾಮಕ್ಕೆ ಹೆಣ್ಣು ಕೊಡೋಕೂ ಹೆದರ್ತಾರೆ !..

ಇತ್ತೀಚೆಗಷ್ಟೇ ಉತ್ತರ ಕನ್ನಡ ಜಿಲ್ಲೆಯ ಅತ್ಯಂತ ಹಿಂದುಳಿದ ಪ್ರದೇಶ ಎಂದೇ ಕರೆಸಿಕೊಂಡಿದ್ದ ಕುಗ್ರಾಮ ಮೇದಿನಿಗೆ ಭೇಟಿ ನೀಡಿ ಅಲ್ಲಿ ವಾಸ್ತವ್ಯ ಹೂಡಿ ಮೂಲ ಸೌಕರ್ಯ ಕಲ್ಪಿಸುವುದಾಗಿ ಭರವಸೆ ನೀಡಿದ್ದರು. ಜನರ ಸಮಸ್ಯೆ ನೀಗಿಸುವ ಭರವಸೆಯೊಂದಿಗೆ ಊರಿನ ಅಭಿವೃದ್ಧಿಯ ಬಗ್ಗೆಯೂ ಗಮನ ಹರಿಸಿದ್ದರು.