ಕೊರೋನಾ ವಿರುದ್ಧ ಹೋರಾಟ: 'ಮಾಸ್ಕ್ ಧರಿಸದವರಿಗೆ ಸರ್ಕಾರಿ ಕಚೇರಿಗಳಿಗೆ ಪ್ರವೇಶವಿಲ್ಲ'
ವ್ಯಾಪಾರದ ಸ್ಥಳದಲ್ಲಿ ಮಾಸ್ಕ್ ಧರಿಸದೇ ಇದ್ದಲ್ಲಿ ಅಂತಹ ಅಂಗಡಿ ಮಾಲೀಕರ ವಿರುದ್ಧ ಕಾನೂನು ಕ್ರಮ| , ಸಾರ್ವಜನಿಕರು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ ಗುಂಪು ಕಟ್ಟಿಕೊಂಡು ಇರುವುದು ಕಂಡುಬಂದಲ್ಲಿ ಮೊದಲು ಎಚ್ಚರಿಕೆ ನೀಡುವುದು ನಂತರ ಅಂತವರ ವಿರುದ್ಧ ಕಾನೂನು ಕ್ರಮ|
ಕಾರವಾರ(ಸೆ.10): ಜಿಲ್ಲೆಯ ಸರ್ಕಾರಿ ಕಚೇರಿಗಗಳಿಗೆ ಮಾಸ್ಕ್ ಧರಿಸದೇ ಬರುವಂತಹ ಸಾರ್ವಜನಿಕರಿಗೆ ಕಚೇರಿಗೆ ಪ್ರವೇಶ ನೀಡುವುದಿಲ್ಲ ಎಂದು ಜಿಲ್ಲಾಧಿಕಾರಿ ಡಾ. ಕೆ.ಹರೀಶಕುಮಾರ ಆದೇಶಿಸಿದ್ದಾರೆ.
ಇದನ್ನು ಉಲ್ಲಂಘನೆ ಮಾಡಿದವರ ವಿರುದ್ಧ ಸಾಂಕ್ರಾಮಿಕ ರೋಗಗಳ ಕಾಯ್ದೆ 1897 ಮತ್ತು ವಿಪತ್ತು ನಿರ್ವಹಣಾ ಕಾಯ್ದೆ 2005 ಮತ್ತು ಭಾರತೀಯ ದಂಡ ನೀತಿ ಸಂಹಿತೆ 1860 ಮತ್ತು ದಂಡ ಪ್ರಕ್ರಿಯಾ ಸಂಹಿತೆಯ ವಿವಿಧ ನಿಬಂಧನೆಗಳ ಅಡಿಯಲ್ಲಿ ನಿಯಮಾನುಸಾರ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು. ಅಲ್ಲದೇ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೇ ಇರುವವರಿಗೆ ಸರ್ಕಾರದ ಆದೇಶದಂತೆ ನಗರ ಪ್ರದೇಶದಲ್ಲಿ 200 ಹಾಗೂ ಇನ್ನುಳಿದ ಪ್ರದೇಶದಲ್ಲಿ 100 ದಂಡವನ್ನು ವಿಧಿಸಲು ಕೂಡಾ ಸೂಚಿಸಿದ್ದಾರೆ.
ಕರ್ನಾಟಕದ ಮತ್ತೋರ್ವ ಸಚಿವರೊಬ್ಬರಿಗೆ ಕೊರೋನಾ ದೃಢ
ಯಾವುದೇ ವ್ಯಾಪಾರದ ಸ್ಥಳದಲ್ಲಿ ಮಾಸ್ಕ್ ಧರಿಸದೇ ಇದ್ದಲ್ಲಿ ಅಂತಹ ಅಂಗಡಿ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು, ಸಾರ್ವಜನಿಕರು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ ಗುಂಪು ಕಟ್ಟಿಕೊಂಡು ಇರುವುದು ಕಂಡುಬಂದಲ್ಲಿ ಮೊದಲು ಎಚ್ಚರಿಕೆ ನೀಡುವುದು. ನಂತರ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಈಗಾಗಲೇ ಸಂಬಂಧಿಸಿದ ಸ್ಥಳಿಯ ಸಂಸ್ಥೆಗಳ ಮುಖ್ಯಸ್ಥರಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.