ಮೈಸೂರು [ಆ. 22]: ಬಿ.ಎಸ್.ಯಡಿಯೂರಪ್ಪ ಸಂಪುಟದಲ್ಲಿ ನೂತನ ಸಚಿವರಾದ ವಿ. ಸೋಮಣ್ಣ ರಾಜ್ಯ ರಾಜಕೀಯದ ಬಗ್ಗೆ ಹೊಸ ಸುಳಿವು ನೀಡಿದ್ದಾರೆ.

ವಿಶ್ವವಿಖ್ಯಾತ ಮೈಸೂರು ದಸರಾ ಗಜಪಯಣಕ್ಕೆ ಚಾಲನೆ ನೀಡಿ ಮಾತನಾಡಿದ ಸೋಮಣ್ಣ ರಾಜ್ಯದಲ್ಲಿ ಈಗಾಗಲೆ ಸಚಿವ ಸಂಪುಟ ವಿಸ್ತರಣೆಯಾಗಿದೆ. 17 ಜನರಿಗೆ ಸಚಿವ ಸ್ಥಾನ ನೀಡಲಾಗಿದೆ. ಇನ್ನೂ 16 ಸ್ಥಾನಗಳು ಖಾಲಿ ಉಳಿದಿವೆ ಎಂದರು. 

ಮೊದಲ ಹಂತದಲ್ಲಿ ಸಂಪುಟ ವಿಸ್ತರಣೆ ಮುಗಿದಿದ್ದು, ಎರಡನೇ ಹಂತದ ಸಂಪುಟ ವಿಸ್ತರಣೆ ನಡೆಯಲಿದೆ. ಹೈ ಕಮಾಂಡ್ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಅಳೆದು ತೂಗಿ  ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ ಎಂದರು. 

ಹೊಸ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಖಾತೆ?

ಅಲ್ಲದೇ ಇದೇ ವೇಳೆ ಹೊಸ ಸುಳಿವೊಂದನ್ನು ನೀಡಿದ್ದು, ಪರೋಕ್ಷವಾಗಿ ಅತೃಪ್ತರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಸುಳಿವು ನೀಡಿದ್ದಾರೆ.