ಸಂಪುಟ ವಿಸ್ತರಣೆ: ಸಂತೋಷವಾಗಿದ್ದೇನೆ, ಆ ಮಾತು ಈಗೇಕೆ ಎಂದ ಸಚಿವ
ಸಚಿವ ಸಂಪುಟ ವಿಸ್ತರಣೆ ಸಂಬಂಧ ಈಗಾಗಲೇ ಒಬ್ಬೊಬ್ಬರು ಒಂದೊಂದು ರೀತಿ ಹೇಳಿಕೆ ನೀಡುತ್ತಿದ್ದು, ಈ ಬಗ್ಗೆ ಸಚಿವ ವಿ. ಸೋಮಣ್ಣ ಪ್ರತಿಕ್ರಿಯಿಸಿದ್ದಾರೆ. ನಾನು ಖಷಿಯಾಗಿದ್ದೇನೆ. ಈಗ ಸಂಪುಟ ವಿಸ್ತರಣೆ ಮಾತೇಕೆ ಎಂದಿದ್ದಾರೆ.
ಮೈಸೂರು(ಡಿ.21): ಸಚಿವ ಸಂಪುಟ ವಿಸ್ತರಣೆ ಸಂಬಂಧ ಈಗಾಗಲೇ ಒಬ್ಬೊಬ್ಬರು ಒಂದೊಂದು ರೀತಿ ಹೇಳಿಕೆ ನೀಡುತ್ತಿದ್ದು, ಈ ಬಗ್ಗೆ ವಸತಿ, ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ವಿ.ಸೋಮಣ್ಣ ಪ್ರತಿಕ್ರಿಯಿಸಿದ್ದಾರೆ. ನಾನು ಖಷಿಯಾಗಿದ್ದೇನೆ. ಈಗ ಸಂಪುಟ ವಿಸ್ತರಣೆ ಮಾತೇಕೆ ಎಂದಿದ್ದಾರೆ.
ಉಪಚುನಾವಣೆಯಲ್ಲಿ ಸೋತವರಿಗೂ ಮಂತ್ರಿಗಿರಿ ನೀಡುವ ಚರ್ಚೆ ನಡೆಯುತ್ತಿರುವ ವಿಚಾರವಾಗಿ ನಂಜನಗೂಡು ತಾಲೂಕಿನ ಸುತ್ತೂರಿನಲ್ಲಿ ಪ್ರತಿಕ್ರಿಯಿಸಿದ ವಿ. ಸೋಮಣ್ಣ, ಈಗ ನಾನು ಸಂತೋಷವಾಗಿದ್ದೇನೆ, ಆ ಮಾತು ಈಗ ಯಾಕೆ ? ಎಂದು ಪ್ರಶ್ನಿಸಿದ್ದಾರೆ.
ಮಂಡ್ಯ: ಮೈಷುಗರ್ - PSSK ಖಾಸಗಿಗೆ ಗುತ್ತಿಗೆ
ಯಾರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕು, ಯಾರನ್ನು ಬಿಡಬೇಕು ಎಂಬುದು ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟ ವಿಚಾರ. ಯಡಿಯೂರಪ್ಪ ಅವರು ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ. ವಿಶ್ವನಾಥ್ ಅವರನ್ನು ಮಧ್ಯಾಹ್ನ ಭೇಟಿ ಮಾಡಿ ಮಾತನಾಡಿಸುತ್ತೇನೆ. ಸಂಪುಟ ವಿಸ್ತರಣೆ ವಿಚಾರದಲ್ಲಿ ಯಾವುದೇ ಹೇಳಿಕೆ ನೀಡದಂತೆ ಎಲ್ಲರಿಗೂ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.
ಮೈಸೂರು: JDS ಮುಖಂಡ BJPಗೆ ಸೇರ್ಪಡೆ
ಪೌರತ್ವ ತಿದ್ದುಪಡಿ ಕಾಯ್ದೆಯ ಬೆಳವಣಿಗೆಗಳಿಗೂ ಸಂಪುಟ ವಿಸ್ತರಣೆಗೂ ಸಂಬಂಧವಿಲ್ಲ. ಆದಷ್ಟು ಬೇಗ ವರಿಷ್ಠರು ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ ಎಂದಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿ, ಮೈಸೂರಿನ ಬಗ್ಗೆ ಯಾರಿಗೆ ಪ್ರೀತಿ ಇಲ್ಲ ? ಮೈಸೂರು ಎಂದಾಕ್ಷಣ ಚಾಮುಂಡಿಬೆಟ್ಟ, ಮಹಾರಾಜರು ನೆನಪಾಗುತ್ತದೆ. ಹಿಂದೆ ರಾಜಧಾನಿಯೂ ಆಗಿತ್ತು. ಇಂತಹ ಜಾಗದ ಬಗ್ಗೆ ಎಲ್ಲರಿಗೂ ಪ್ರೀತಿ ಇದ್ದೇ ಇರುತ್ತೆ. ನನಗೂ ಇಲ್ಲಿ ಒಳ್ಳೆಯ ಕೆಲಸ ಮಾಡುವ ಆಸೆ ಇದೆ ಎಂದು ಹೇಳಿದ್ದಾರೆ.
'ಪ್ರತ್ಯೇಕ ಕರ್ನಾಟಕ ರಾಷ್ಟ್ರ ಮಾಡಿದ್ರೆ ನೆಮ್ಮದಿಯಿಂದ ಇರ್ತೀವಿ'..!