Asianet Suvarna News Asianet Suvarna News

ಪಂಚಮಸಾಲಿ 2ಎ ಮೀಸಲಾತಿ: ಡಿಕೆಶಿ, ಸಿದ್ದು ಭೇಟಿಯಾದ ವಚನಾನಂದ ಶ್ರೀ

ಹಿಂದುಳಿದ ವರ್ಗಗಳ ಆಯೋಗದ ವರದಿಯನ್ನು ಮಂಡಿಸುವ ನಿಟ್ಟಿನಲ್ಲಿ ಕೊನೆಯ ಹಂತದ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿರುವ ರಾಜ್ಯ ಸರ್ಕಾರ 

Vachananad Swamiji Met Siddaramaiah and DK Shivakumar For Panchamasali 2A Reservation grg
Author
First Published Dec 9, 2022, 11:33 PM IST

ವರದಿ: ವರದರಾಜ್, ಏಷ್ಯಾನೆಟ್‌ ಸುವರ್ಣ ನ್ಯೂಸ್‌, ದಾವಣಗೆರೆ

ದಾವಣಗೆರೆ(ಡಿ.09): 28 ವರ್ಷಗಳಿಂದ 2ಎ ಮೀಸಲಾತಿಗಾಗಿ ವೀರಶೈವ ಲಿಂಗಾಯತ ಪಂಚಮಸಾಲಿ ಸಮುದಾಯ ಹೋರಾಟ ಮಾಡುತ್ತಿದ್ದು, ಈ ಹೋರಾಟ ಈಗ ನಿರ್ಣಾಯಕ ಘಟ್ಟಕ್ಕೆ ಬಂದು ತಲುಪಿದೆ ಎಂದು ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಶ್ರೀ ವಚನಾನಂದ ಸ್ವಾಮೀಜಿ ತಿಳಿಸಿದ್ದಾರೆ.  

ರಾಜ್ಯ ಸರ್ಕಾರ ಹಿಂದುಳಿದ ವರ್ಗಗಳ ಆಯೋಗದ ವರದಿಯನ್ನು ಮಂಡಿಸುವ ನಿಟ್ಟಿನಲ್ಲಿ ಕೊನೆಯ ಹಂತದ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಈ ಸಂದರ್ಭದಲ್ಲಿ ಇಂದು(ಶುಕ್ರವಾರ) ಕರ್ನಾಟಕ ರಾಜ್ಯದ ವಿರೋಧ ಪಕ್ಷದ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಡಿ ಕೆ ಶಿವಕುಮಾರ್ ಅವರನ್ನ ವಚನಾನಂದ ಸ್ವಾಮೀಜಿ ಅವರು ಭೇಟಿಯಾದರು.  

Panchamasali Reservation; 2ಎ ಮೀಸಲಾತಿ ನೀಡಿದರೆ ಸಿಎಂಗೆ ಸನ್ಮಾ​ನ: ಮೃತ್ಯುಂಜಯ ಶ್ರೀ

ಮಾನ್ಯ ಮುಖ್ಯಮಂತ್ರಿಗಳು ಸರ್ವಪಕ್ಷಗಳ ಸಭೆಯನ್ನು ಕರೆದರೆ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಲು ಸಹಕರಿಸುವಂತೆ ಮನವಿ ಮಾಡಿಕೊಳ್ಳಲಾಯಿತು. ಇಬ್ಬರು ನಾಯಕರು ನಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ರಾಜ್ಯದ ಎಲ್ಲಾ ಜನಪ್ರತಿನಿಧಿಗಳು ಒಗ್ಗಟ್ಟಿನಿಂದ ನಮ್ಮ ಬೇಡಿಕೆಯನ್ನು ಬೆಂಬಲಿಸಿದ್ದಾರೆ ಎನ್ನುವ ನಮ್ಮ ಆಶಯಕ್ಕೆ ಇನ್ನಷ್ಟು ಪುಷ್ಟಿ ದೊರೆತಿದೆ ಎಂದರು.
 

Follow Us:
Download App:
  • android
  • ios