ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದ ಹಿನ್ನೆಲೆಯಲ್ಲಿ ಸಚಿವ ಬಿ. ನಾಗೇಂದ್ರ ತಮ್ಮ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕರಿಸಿದ್ದಾರೆ. ಇದು ತಮ್ಮ ವಿರುದ್ಧದ ಪಿತೂರಿ ಎಂದು ಆರೋಪಿಸಿರುವ ನಾಗೇಂದ್ರ, ಬಿಜೆಪಿ ನಾಯಕರ ವಿರುದ್ಧ ಸವಾಲು ಹಾಕಿದ್ದಾರೆ. ಈ ರಾಜೀನಾಮೆಯೊಂದಿಗೆ ಸಿಎಂ ಡಿಕೆ ಶಿವಕುಮಾರ್ ಸಂಪುಟದ ಮೊದಲ ವಿಕೆಟ್ ಪತನಗೊಂಡಂತಾಗಿದೆ.

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ಆರೋಪ ಎದುರಿಸುತ್ತಿರುವ ಬಿ ನಾಗೇಂದ್ರ ಅವರ ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕರಿಸಿದ್ದಾರೆ. ಇದರೊಂದಿಗೆ ಅಧಿಕೃತವಾಗಿ ಸಿಎಂ ಡಿಕೆ ಶಿವಕುಮಾರ್ ಅವರ ಕ್ಯಾಬಿನೆಟ್‌ನ ಮೊದಲ ವಿಕೆಟ್ ಪತನಗೊಂಡಿದೆ. ನಾಗೇಂದ್ರ ಅವತು ತಮ್ಮ ಸ್ಥಾನಕ್ಕೆ ಶನಿವಾರ ಶುಕ್ರವಾರ ರಾಜೀನಾಮೆ ನೀಡಿದ್ದರು. ಈ ಕುರಿತು ಪ್ರತಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ್ದ ಅವರು, ಭಾವುಕರಾಗಿ ಕಣ್ಣೀರಿಟ್ಟಿದ್ದರು.

ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ: ತೆರೆಮರೆಯ ರಹಸ್ಯವೇನು?

ಇಂದು ರಾಜ್ಯಪಾಲರು ಸಚಿವರ ರಾಜೀನಾಮೆಯನ್ನು ಅಂಗೀಕರಿಸಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಸಿಎಂ ಡಿಕೆ ಶಿವಕುಮಾರ್ ಗೆ ಪತ್ರದ ಮುಖೇನ ಮಾಹಿತಿ ರವಾನೆ ಮಾಡಿದ್ದಾರೆ. ಇನ್ನು, ಸಂಪುಟ ಸೇರ್ಪಡೆಯಾದ ಕೇವಲ 25 ದಿನಗಳಲ್ಲಿ ನಾಗೇಂದ್ರ ರಾಜೀನಾಮೆ ನೀಡಿದ್ದು, ತಮ್ಮ ರಾಜೀನಾಮೆ ಪತ್ರವನ್ನು ಸಿಎಂ ಡಿಕೆ ಶಿವಕುಮಾರ್ ಅವರಿಗೆ ನೀಡಿದ್ದರು. ಮುಖ್ಯಮಂತ್ರಿಗಳು ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ಕಳುಹಿಸಿದ್ದರು. ಪತ್ರದ ಪರಿಶೀಲನೆ ನಡೆಸಿರುವ ರಾಜ್ಯಪಾಲರು ರಾಜೀನಾಮೆ ಅಂಗೀಕಾರ ಮಾಡಿದ್ದಾರೆ.

ರಾಜೀನಾಮೆ ನೀಡುವ ಸಂದರ್ಭದಲ್ಲಿ ಮಾತನಾಡಿದ್ದ ನಾಗೇಂದ್ರ, ಪಕ್ಷದ ನಾಯಕತ್ವಕ್ಕೆ ಮುಜುಗರ ಎದುರಾಗಬಾರದು ಎಂಬ ಉದ್ದೇಶದಿಂದ ಭಾರವಾದ ಹೃದಯದಿಂದ ಈ ನಿರ್ಧಾರ ತೆಗೆದುಕೊಂಡಿದ್ದೇನೆ. ಇದು ಒಂದು ಪಿತೂರಿಯ ಭಾಗವಾಗಿ ನ್ನನ್ನು ಗುರಿ ಮಾಡಿದ್ದರು. ಕೇಂದ್ರ ತನಿಖಾ ಸಂಸ್ಥೆಗಳ ಮೂಲಕ ಬಿಜೆಪಿ ತಮ್ಮನ್ನು ಬೆದರಿಸಲು ಸಾಧ್ಯವಿಲ್ಲ. ನನ್ನನ್ನು ಇಡಿ, ಸಿಬಿಐ ಮೂಲಕ ಹೆದರಿಸಲು ಆಗಲ್ಲ. ದೇಶದಲ್ಲಿ ಓರ್ವ ಬುಡಕಟ್ಟು ಜನಾಂಗದ ವ್ಯಕ್ತಿ ಬೆಳೆಯಬಾರದು ಎಂದು ಮನುವಾದಿಗಳು ನನ್ನನ್ನು ಟಾರ್ಗೆಟ್ ಮಾಡಿದ್ದಾರೆ ಎಂದು ಆರೋಪಿಸಿದ್ದರು.

ನಿಗದಿಯಂತೆ ನಡೆಯಲಿದೆ ಬಿಜೆಪಿ ಪಾದಯಾತ್ರೆ

ಇದೇ ವೇಳೆ ಬಿಜೆಪಿ ನಾಯಕರಿಗೆ ಸವಾಲು ಹಾಕಿದ್ದ ನಾಗೇಂದ್ರ, ನನ್ನನ್ನು ಸಾರ್ವಜನಿಕರ ನ್ಯಾಯಾಲಯದಲ್ಲಿ ಸೋಲಿಸಿ ನೋಡೋಣಾ. ಬಿಜೆಪಿ ನಾಯಕರು ನನ್ನನ್ನು ಎದುರಿಸಲು ಸಿದ್ಧವಿದ್ದರೆ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಿ ಚುನಾವಣೆ ಎದುರಿಸಲು ಸಿದ್ಧ ಎಂದು ಗುಡುಗಿದ್ದರು. ಈ ರಾಜೀನಾಮೆಯೊಂದಿಗೆ ನಾಗೇಂದ್ರವಾಗಿ ಎರಡನೇ ಬಾರಿಗೆ ಸಂಪುಟದಿಂದ ಹೊರ ಹೋಗಿದ್ದು, 2024 ಜೂನ್‌ನಲ್ಲಿ ಇದೇ ಪ್ರಕರಣದಲ್ಲಿ ರಾಜೀನಾಮೆ ಸಲ್ಲಿಕೆ ಮಾಡಿದ್ದರು. ಆ ಬಳಿಕ ಸಿಎಂ ಡಿಕೆಶಿ ಅವರ ಸಂಪುಟಕ್ಕೆ ಆಗಸ್ಟ್ 03ರಂದು ಮರು ಸೇರ್ಪಡೆಯಾಗಿದ್ದರು. ಆದರೆ ಅವರನ್ನು ಸಂಪುಟದಿಂದ ವಜಾ ಮಾಡುವಂತೆ ಬಿಜೆಪಿ ಮತ್ತು ಜೆಡಿಎಸ್ ನಾಯಕರು ತೀವ್ರ ಪ್ರತಿಭಟನೆ ನಡೆಸಿದ್ದರು. ಅಲ್ಲದೇ ಸೆಪ್ಟೆಂಬರ್ 01 ರಿಂದ 10ರ ವರೆಗೂ ರಾಯಚೂರಿನಿಂದ ಬಳ್ಳಾರಿಗೆ ಪಾದಯಾತ್ರೆಯನ್ನು ನಿಗದಿಪಡಿಸಿದ್ದರು. ಸದ್ಯ ನಾಗೇಂದ್ರ ಅವರ ರಾಜೀನಾಮೆ ನೀಡಿದ ಬಳಿಕವೂ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬಿಜೆಪಿ ತನ್ನ ಪಾದಯಾತ್ರೆಯನ್ನು ಮುಂದುವರಿಸಲು ನಿರ್ಧಾರ ಮಾಡಿದೆ.