ರೈಲು ಸ್ವಚ್ಛತಾ ಕಾರ್ಯ : 4 ನಿಮಿಷಗಳ ಪವಾಡ ಅಭಿಯಾನ
ನೈಋತ್ಯ ರೈಲ್ವೆಯ ಮೈಸೂರು ವಿಭಾಗವು 14 ನಿಮಿಷಗಳ ಪವಾಡ'''' ಅಭಿಯಾನದಡಿ ಚೆನ್ನೈ- ಮೈಸೂರು - ಚೆನ್ನೈ ವಂದೇ ಭಾರತ್ ರೈಲಿಗೆ ಹೊಸದಾದ ಸ್ವಚ್ಛಗೊಳಿಸುವ ವಿಧಾನವನ್ನು ಪರಿಚಯಿಸಿತು
ಮೈಸೂರು : ನೈಋತ್ಯ ರೈಲ್ವೆಯ ಮೈಸೂರು ವಿಭಾಗವು 14 ನಿಮಿಷಗಳ ಪವಾಡ'''' ಅಭಿಯಾನದಡಿ ಚೆನ್ನೈ- ಮೈಸೂರು - ಚೆನ್ನೈ ವಂದೇ ಭಾರತ್ ರೈಲಿಗೆ ಹೊಸದಾದ ಸ್ವಚ್ಛಗೊಳಿಸುವ ವಿಧಾನವನ್ನು ಪರಿಚಯಿಸಿತು.
ರೈಲ್ವೆ ಸಚಿವಾಲಯದ ನಿರ್ದೇಶನದಂತೆ, ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಚೆನ್ನೈ- ಮೈಸೂರು - ಚೆನ್ನೈ ವಂದೇ ಭಾರತ್ ರೈಲಿಗೆ ''''14 ನಿಮಿಷಗಳ ಪವಾಡ- ಶುಚಿಗೊಳಿಸುವ ಹೊಸ ಪ್ರಕ್ರಿಯೆಯನ್ನು ಪರಿಚಯಿಸುತ್ತಿದೆ.
ಚೆನ್ನೈ-ಮೈಸೂರು-ಚೆನ್ನೈನ 16 ಕೋಚುಗಳ ‘ವಂದೇ ಭಾರತ್’ ರೈಲಿನ ಸ್ವಚ್ಛತೆಗೆ ಈ ವಿನೂತನ ಶುಚಿಗೊಳಿಸಲು ನಡೆಸಲಾಗುವ ಪ್ರಕ್ರಿಯೆಯು ರೈಲಿನ ಸ್ವಚ್ಛತೆ ಮತ್ತು ದಕ್ಷತೆಗೆ ಆದ್ಯತೆ ನೀಡುತ್ತದೆ. 14 ನಿಮಿಷಗಳ ಪವಾಡ ಕಾರ್ಯಕ್ರಮವನ್ನು ವಂದೇ ಭಾರತ್ ರೈಲುಗಳು ವಿವಿಧ ಗಮ್ಯ ಸ್ಥಾನಗಳಿಗೆ ಆಗಮಿಸಿದ ನಂತರ ಅವುಗಳನ್ನು ಶುಚಿಗೊಳಿಸುವ ಪ್ರಕ್ರಿಯೆಯನ್ನು ಸುಗಮಗೊಳಿಸಲು ನಿಖರವಾಗಿ ವಿನ್ಯಾಸಗೊಳಿಸಲಾಗಿದೆ.
ಭಾರತೀಯ ರೈಲ್ವೆ ಅಭಿವೃದ್ಧಿಪಡಿಸಿರುವ ಈ ವಿಧಾನದಿಂದ ಕೇವಲ 14 ನಿಮಿಷಗಳಲ್ಲಿ ಸಂಪೂರ್ಣವಾಗಿ ಸಮಗ್ರವಾಗಿ ಶುಚಿಗೊಳಿಸುವಿಕೆ ಸಾಧ್ಯವಾಗಿದೆ. ಇದು ರೈಲಿನ ಹಿಂತಿರುಗುವಿಕೆಯ ಸಮಯವನ್ನು ಗಣನೀಯವಾಗಿ ಇಳಿಸುತ್ತದೆ ಮತ್ತು ಪ್ರಯಾಣಿಕರ ಆಹ್ಲಾದಕರ ಅನುಭವವನ್ನು ಗಮನಾರ್ಹವಾಗಿ ಹೆಚ್ಚಿಸುತ್ತದೆ.
ಸ್ವಚ್ಛತೆಯೆ ಪ್ರಮುಖ ಮುಖ್ಯಾಂಶಗಳು
ಒಟ್ಟು 48 ಸಿಬ್ಬಂದಿ ಮತ್ತು 3 ಮೇಲ್ವಿಚಾರಕರನ್ನು ನಿಯೋಜಿಸಲಾಗುತ್ತದೆ. ಪ್ರತಿಯೊಂದು ಬೋಗಿಗೂ ತರಬೇತಿ ಪಡೆದ 3 ಸಿಬ್ಬಂದಿ ಸದಸ್ಯರನ್ನು ನಿಯೋಜಿಸಲಾಗುತ್ತದೆ. ಮೊದಲ ಸಿಬ್ಬಂದಿ ಕಸವನ್ನು ಸಂಗ್ರಹಿಸುತ್ತಾರೆ, ಒಣ ಒರಸುವಿಕೆಯನ್ನು ನಿರ್ವಹಿಸುತ್ತಾರೆ ಮತ್ತು ಹೊರಗಿನ ಕಿಟಕಿ ಗಾಜನ್ನು ಸ್ವಚ್ಛಗೊಳಿಸುತ್ತಾರೆ.
ಎರಡನೆ ಸಿಬ್ಬಂದಿ ಉಪಹಾರ ಮೇಜು ಮತ್ತು ಆಸನಗಳನ್ನು ಶುಚಿಗೊಳಿಸುತ್ತಾರೆ ಮತ್ತು ನೀರಿನಿಂದ ಒರೆಸುತ್ತಾರೆ. ಮೂರನೆ ಸಿಬ್ಬಂದಿ ಕಸದಬುಟ್ಟಿಗಳನ್ನು ಶೌಚಾಲಯಗಳನ್ನು ಕನ್ನಡಿಗಳನ್ನು, ಪ್ರವೇಶ ದ್ವಾರವನ್ನು ಸ್ವಚ್ಛಗೊಳಿಸುತ್ತಾರೆ. ಈ ಪ್ರದೇಶಗಳನ್ನು ಸೂಕ್ಷ್ಮವಾಗಿ ಒರೆಸುತ್ತಾರೆ.
ವಿಭಾಗೀಯ ರೈಲ್ವೆ ವ್ಯವಸ್ಥಾಪಕಿ ಶಿಲ್ಪಿ ಅಗರ್ವಾಲ್ ಈ ಕೆಲಸದಲ್ಲಿ ತೊಡಗಿರುವ ಎಲ್ಲಾ ಸಿಬ್ಬಂದಿಯ ಸಮರ್ಪಣೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಬುಲೆಟ್ ವೇಗದಲ್ಲಿ ಸ್ವಚ್ಛತೆ
ಬೆಂಗಳೂರು (ಅ.2): ನೈಋತ್ಯ ರೈಲ್ವೆಯ ಬೆಂಗಳೂರು ವಿಭಾಗವು ನಗರದ ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು 'ಮಿರಾಕಲ್' 14 ನಿಮಿಷಗಳು' ಎಂಬ ಹೆಸರಿನಡಿ ಸ್ವಚ್ಛಗೊಳಿಸುವ ವ್ಯವಸ್ಥೆ ಆರಂಭಿಸಿದೆ.
ಭಾನುವಾರ ಮಧ್ಯಾಹ್ನ ಯಶವಂತಪುರ ರೈಲು ನಿಲ್ದಾಣ(Yaswantapur railway station)ಕ್ಕೆ ಆಗಮಿಸಿದ ಕಾಚಿಗುಡ ಯಶವಂತಪುರ ವಂದೇ ಭಾರತ್ ಎಕ್ಸ್‌ಪ್ರೆಸ್(Vande bharat express) ರೈಲನ್ನು ಕೇವಲ 13 ನಿಮಿಷಗಳಲ್ಲಿ ಸ್ವಚ್ಛಗೊ ಳಿಸಿ ಪ್ರಯಾಣಿಕರಿಗೆ ರೈಲು ಹತ್ತಲು ಸಿದ್ಧಗೊಳಿಸಲಾಯಿತು. ಮೊದಲೇ ಸಿದ್ಧಗೊಂಡಿದ್ದ 25ಕ್ಕೂ ಹೆಚ್ಚಿನ ಸ್ವಚ್ಛತಾ ಸಿಬ್ಬಂದಿ ರೈಲಿನಿಂದ ಪ್ರಯಾಣಿಕರು ಇಳಿದ ತಕ್ಷಣ ಸ್ವಚ್ಛಗೊಳಿಸಿ ಜನರಿಗೆ ಪ್ರಯಾಣಿಸಲು ಮಾಡಿಕೊಟ್ಟರು.
ರೈಲಲ್ಲಿ 'ನೀನ್ ಚಂದಾನೆ' ಹಾಡಿಗೆ ಆ್ಯಂಕರ್ ಅನುಶ್ರೀ ಸಕತ್ ಎಂಜಾಯ್: ಇಲ್ಲೂ ಮದ್ವೆ ವಿಷ್ಯ ಕೆದಕಿದ ಫ್ಯಾನ್ಸ್!
ಈ ವೇಳೆ ಮಾತನಾಡಿದ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಯೋಗೀಶ್ ಮೋಹನ್, ವಂದೇ ಭಾರತ್ ರೈಲುಗಳಲ್ಲಿ ಸ್ವಚ್ಛತಾ ಪ್ರಕ್ರಿ ಯೆಗೆ ಸಮಯ ಕಡಿಮೆ ಇರುವುದರಿಂದ ಪ್ರಯಾಣಿಕರು ಹತ್ತಿ ಇಳಿಸುವುದು ತ್ವರಿತವಾಗಿ ನಡೆಯಬೇಕು. ರೈಲ್ವೆ ಸಚಿವರ ಪರಿಕಲ್ಪನೆಯಂತೆ ಜಾರಿಗೆ ಬರುತ್ತಿದೆ. ಇದು ನಿರಂತರವಾಗಿರಲಿದೆ ಎಂದರು.