ಪ್ರಯಾಣಿಕರ ಗಮನಕ್ಕೆ: 3 ದಿನ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರದಲ್ಲಿ ವ್ಯತ್ಯಯ

ಧರ್ಮಸ್ಥಳ, ಉಪ್ಪಿನಂಗಡಿ, ಸುಬ್ರಹ್ಮಣ್ಯ, ಕಾಸರಗೋಡು ವಲಯಗಳಲ್ಲಿ ಕಾರ್ಯಾಚರಣೆಯಲ್ಲಿರುವ ಸಾರಿಗೆಗಳಲ್ಲಿ ಡಿ.26 ರಿಂದ 28ರ ವರೆಗೆ ದೈನಂದಿನ ಮಾರ್ಗ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಲಿದೆ. 

Variation in KSRTC Bus Service for 3 days in Mangaluru grg

ಮಂಗಳೂರು(ಡಿ.24): ಮೂಡಬಿದಿರೆಯಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ರಾಜ್ಯದ ವಿವಿಧ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದ ಭಾರತ್‌ ಸ್ಕೌಟ್ಸ್‌- ಗೌಡ್ಸ್‌ನ ಸುಮಾರು 50,000 ಕ್ಕಿಂತಲೂ ಹೆಚ್ಚಿನ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು ಆಗಮಿಸಿದ್ದಾರೆ.

ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ರಾಜ್ಯ ರಸ್ತೆ ಸಾರಿಗೆ ನಿಗಮದ ಇತರೆ ವಿಭಾಗಗಳಿಂದ ಹಾಗೂ ವಾಯವ್ಯ, ಕಲ್ಯಾಣ ಕರ್ನಾಟಕ ನಿಗಮಗಳಿಂದ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರಲಾಗಿದೆ. ಆ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು ಡಿ.27ರಂದು ಕಾರ್ಯಕ್ರಮ ಮುಕ್ತಾಯಗೊಂಡು ಹಿಂತಿರುಗುವ ವೇಳೆಗೆ ಮೂಡುಬಿದಿರೆಯಿಂದ ರಾಜ್ಯದ ವಿವಿಧ ಸ್ಥಳಗಳಿಗೆ/ ರೈಲು ನಿಲ್ದಾಣಗಳಿಗೆ ಹೆಚ್ಚುವರಿ ಸಾರಿಗೆಗಳ ವ್ಯವಸ್ಥೆ ಮಾಡಿ ವಾಹನಗಳನ್ನು ನಿಯೋಜಿಸಬೇಕಾಗಿರುತ್ತದೆ. 

ಬಿಲ್ಲವರ 3 ಬೇಡಿಕೆ ಈಡೇರಿಸಿದರೆ ಪಾದಯಾತ್ರೆ ವಾಪಸ್‌: ಪ್ರಣವಾನಂದ ಶ್ರೀ

ಆದ್ದರಿಂದ ಧರ್ಮಸ್ಥಳ, ಉಪ್ಪಿನಂಗಡಿ, ಸುಬ್ರಹ್ಮಣ್ಯ, ಕಾಸರಗೋಡು ವಲಯಗಳಲ್ಲಿ ಕಾರ್ಯಾಚರಣೆಯಲ್ಲಿರುವ ಸಾರಿಗೆಗಳಲ್ಲಿ ಡಿ.26 ರಿಂದ 28ರ ವರೆಗೆ ದೈನಂದಿನ ಮಾರ್ಗ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಪ್ರಯಾಣಿಕರು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸಹಕರಿಸುವಂತೆ ನಿಗಮದ ಮಂಗಳೂರಿನ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Latest Videos
Follow Us:
Download App:
  • android
  • ios