ಬಾದಾಮಿ: ಮದುವೆ ನಿಶ್ಚಿತಾರ್ಥಕ್ಕೆ ತೆರಳುತ್ತಿದ್ದ ವಾಹನ ಪಲ್ಟಿ
ಮದುವೆ ನಿಶ್ಚಿತಾರ್ಥಕ್ಕೆ ತೆರಳುತ್ತಿದ್ದ ವಾಹನ ಪಲ್ಟಿ| ಓರ್ವ ವ್ಯಕ್ತಿ ಸಾವು, 24 ಜನರಿಗೆ ಗಾಯ| ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಮುತ್ತಲಗೇರಿ ಗ್ರಾಮದ ಬಳಿ ನಡೆದ ಘಟನೆ| ದುರ್ಘಟನೆಯಲ್ಲಿ ಐವರಿಗೆ ಗಂಭೀರವಾದ ಗಾಯ|
ಬಾಗಲಕೋಟೆ(ಫೆ.20): ಮದುವೆ ನಿಶ್ಚಿತಾರ್ಥದ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವಾಹನವೊಂದು ಪಲ್ಟಿಯಾದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲಿ ಸಾವನ್ನಪ್ಪಿ 24 ಜನರಿಗೆ ಗಾಯವಾದ ಘಟನೆ ಜಿಲ್ಲೆಯ ಬಾದಾಮಿ ತಾಲೂಕಿನ ಮುತ್ತಲಗೇರಿ ಗ್ರಾಮದ ಬಳಿ ಇಂದು(ಗುರುವಾರ) ನಡೆದಿದೆ. ಮೃತ ವ್ಯಕ್ತಿಯನ್ನ ಶಿವಪ್ಪ ಬೆಳವಣಿಕಿ(33) ಎಂದು ಗುರುತಿಸಲಾಗಿದೆ.
ಕಬ್ಬಲಗೇರಿ ಗ್ರಾಮದಿಂದ ಗದಗ ಜಿಲ್ಲೆಯ ನರಗುಂದ ಪಟ್ಟಣಕ್ಕೆ ತೆರಳುತ್ತಿದ್ದ ವಾಹನದ ಸ್ಟೇರಿಂಗ್ ಜಾಮ್ ಆಗಿದ್ದೇ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ. ದುರ್ಘಟನೆಯಲ್ಲಿ ಐವರಿಗೆ ಗಂಭೀರವಾದ ಗಾಯಗಳಾಗಿವೆ.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಗಾಯಾಳುಗಳನ್ನ ಬಾದಾಮಿ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನುಳಿದ 19 ಗಾಯಾಳುಗಳನ್ನ ಬಾದಾಮಿ ಸರ್ಕಾರಿ ತಾಲೂಕಾಸ್ಪತ್ರೆಗೆ ದಾಖಲಿಸಲಾಗಿದೆ.