ಕೊರೋನಾ ಭೀತಿಗೆ ಕೇರಳ-ದಕ್ಷಿಣ ಕನ್ನಡ ವಾಹನ ಸಂಚಾರ ಬಂದ್
ಕೊರೋನಾ ವೈರಸ್ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ದಕ್ಷಿಣಕನ್ನಡ ಜಿಲ್ಲಾಡಳಿತ ತುರ್ತು ಕ್ರಮ ಕೈಗೊಂಡಿದ್ದು, ಕೇರಳ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ನಡುವೆ ಸರ್ವ ವಾಹನ ಸಂಚಾರವನ್ನು ನಿಷೇಧಿಸಿ ಆದೇಶ ಹೊರಡಿಸಿದೆ.
ಮಂಗಳೂರು(ಮಾ.21): ಕೊರೋನಾ ವೈರಸ್ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ದಕ್ಷಿಣಕನ್ನಡ ಜಿಲ್ಲಾಡಳಿತ ತುರ್ತು ಕ್ರಮ ಕೈಗೊಂಡಿದ್ದು, ಕೇರಳ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ನಡುವೆ ಸರ್ವ ವಾಹನ ಸಂಚಾರವನ್ನು ನಿಷೇಧಿಸಿ ಆದೇಶ ಹೊರಡಿಸಿದೆ.
ಮಾ.21ರ ಮಧ್ಯಾಹ್ನ ಎರಡು ಗಂಟೆಯಿಂದ ಮಾಚ್‌ರ್ 31ರವರೆಗೆ ಈ ಆದೇಶ ಜಾರಿಯಲ್ಲಿರುತ್ತದೆ. ಕಾಸರಗೋಡಿನಲ್ಲಿ ಈಗಾಗಲೇ 6 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿರುವುದರಿಂದ ಈ ಕ್ರಮವನ್ನು ಕೈಗೊಳ್ಳಲಾಗಿದೆ.
ಕಾಸರಗೋಡು ಪ್ರಯಾಣಿಕರ ಗಡಿ ದಾಟಿಸಲು ವಿಶೇಷ ಬಸ್
ಇದುವರೆಗೆ ದಕ್ಷಿಣ ಕನ್ನಡ ಮತ್ತು ಕೇರಳ ಗಡಿಭಾಗದಲ್ಲಿ ಪ್ರತಿಯೊಬ್ಬ ನಾಗರಿಕನನ್ನು ಥರ್ಮಲ್ ಪರೀಕ್ಷೆಗೆ ಒಳಪಡಿಸಿ ಬಿಡಲಾಗುತ್ತಿತ್ತು. ಈಗ ಎಲ್ಲ ಬಗೆಯ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ.