' ಕ್ಷೇತ್ರದಲ್ಲಿ ಹೆಚ್ಚುತ್ತಿರುವ ಕಾಂಗ್ರೆಸ್ ಶಾಸಕರ ದಬ್ಬಾಳಿಕೆ'
ಕಾಂಗ್ರೆಸ್ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಜನವಿರೋಧಿ ನೀತಿ ಹಾಗೂ ಹಿಟ್ಲರ್ ಧೋರಣೆಯ ವಿರುದ್ಧ ಜನರು ಬೇಸತ್ತಿದ್ದಾರೆ. ಸೋಲಿನ ಭೀತಿಯ ಹತಾಶೆಯಲ್ಲಿ ಪ್ರಾಮಾಣಿಕ ತಹಸೀಲ್ದಾರ್ ಎಂ.ದಯಾನಂದ್ ವಿರುದ್ಧ ಆಧಾರ ರಹಿತವಾಗಿ ಭ್ರಷ್ಟಾಚಾರ ಆರೋಪ ಮಾಡುತ್ತಿದ್ದಾರೆ ಎಂದು ಮಾಜಿ ಶಾಸಕ ಬಿ.ಪಿ.ವೆಂಕಟಮುನಿಯಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಬಂಗಾರಪೇಟೆ(ಅ.09): ಕಾಂಗ್ರೆಸ್ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಜನವಿರೋಧಿ ನೀತಿ ಹಾಗೂ ಹಿಟ್ಲರ್ ಧೋರಣೆಯ ವಿರುದ್ಧ ಜನರು ಬೇಸತ್ತಿದ್ದಾರೆ. ಸೋಲಿನ ಭೀತಿಯ ಹತಾಶೆಯಲ್ಲಿ ಪ್ರಾಮಾಣಿಕ ತಹಸೀಲ್ದಾರ್ ಎಂ.ದಯಾನಂದ್ ವಿರುದ್ಧ ಆಧಾರ ರಹಿತವಾಗಿ ಭ್ರಷ್ಟಾಚಾರ ಆರೋಪ ಮಾಡುತ್ತಿದ್ದಾರೆ ಎಂದು ಮಾಜಿ ಶಾಸಕ ಬಿ.ಪಿ.ವೆಂಕಟಮುನಿಯಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಪಟ್ಟಣದ ಕುವೆಂಪು ವೃತ್ತದಲ್ಲಿ ತಾಲೂಕು ಬಿಜೆಪಿ (BJP) ವತಿಯಿಂದ ಎಸ್ಸಿ ಎಸ್ಟಿಮೀಸಲಾತಿ ಹೆಚ್ಚಳ ಪರ ಹಮ್ಮಿಕೊಂಡಿದ್ದ ವಿಜಯೋತ್ಸವ ಕಾರ್ಯಕ್ರಮದಲ್ಲಿ ಸಿಹಿ ಹಂಚಿ ಮಾತನಾಡಿದ ಅವರು, ತಹಸೀಲ್ದಾರ್ ಎಂ.ದಯಾನಂದ್ ಶಾಸಕರು (MLA) ಹೇಳಿದಂತೆ ಸರ್ಕಾರಿ ಕೆಲವನ್ನು ಮಾಡದೇ ಇರುವುದಕ್ಕೆ ಅವರ ವಿರುದ್ದ ಪ್ರತಿ ದಿನ ಆರೋಪಗಳನ್ನು ಮಾಡುತ್ತಿದ್ದಾರೆ. 10 ವರ್ಷಗಳಿಂದ ಶಾಸಕರಾಗಿರುವವರು ಒಬ್ಬ ತಹಸೀಲ್ದಾರ್ರನ್ನು ತನ್ನ ವೈಯುಕ್ತಿಕ ಕೆಲಸಗಳಿಗೆಬಳಸಿಕೊಳ್ಳಲು ಪ್ರಯತ್ನ ಮಾಡುತ್ತಿದ್ದಾರೆಂದು ಲೇವಡಿ ಮಾಡಿದರು.
ಭಾರತ ಜೋಡೋ ಯಾತ್ರೆ ಹಾಸ್ಯಾಸ್ಪದ
ಜಿಲ್ಲಾ ಬಿಜೆಪಿ (BJP) ಉಪಾಧ್ಯಕ್ಷ ಹೊಸರಾಯಪ್ಪ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳು ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದು ಜನ ಮನ ಮಾನಸದಲ್ಲಿ ನಿಂತಿದೆ. ಸರ್ವರಿಗೂ ಸಮಪಾಲು ಸಮಬಾಳು ಎಂಬ ಸಂದೇಶವನ್ನು ವಿಶ್ವಕ್ಕೆ ಸಾರಿದ್ದಾರೆ. ಭಾರತವನ್ನು ವಿಭಜಿಸಿದ ಕಾಂಗ್ರೆಸ್ ಪಕ್ಷ ಭಾರತ್ ಜೋಡೋ ಯಾತ್ರೆ ಮಾಡುತ್ತಿರುವುದು ಅತ್ಯಂತ ಹಾಸ್ಯಸ್ಪದವಾಗಿದೆ, 1947ರಲ್ಲಿ ಕಾಶ್ಮೀರ ಭಾರತದ ಅಧಿಕೃತ ಭಾಗವಾಗಿತ್ತು ಅದನ್ನು ಬೇರ್ಪಡಿಸಿದರು. ಚೀನಾ ದೇಶಕ್ಕೆ 40,000 ಚದರ ಅಡಿ ಸ್ಥಳವನ್ನು ಬಿಟ್ಟುಕೊಟ್ಟರು, ಪಾಕ್ ಆಕ್ರಮಿತ ಕಾಶ್ಮೀರಕ್ಕೆ ನಾಂದಿ ಹಾಡಿದವರೆ ಕಾಂಗ್ರೆಸ…, ಹೀಗೆ ಭಾರತವನ್ನು ಹಂತ ಹಂತವಾಗಿ ವಿಭಜಿಸಿದ ಪಕ್ಷ ಭಾರತ ಜೋಡೋ ಯಾತ್ರೆ ಮಾಡುತ್ತಿರುವುದು ವಿಪರ್ಯಾಸವಾಗಿದೆ ಎಂದು ದೂರಿದರು.
ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಬಿ.ವಿ.ಮಹೇಶ್, ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಪಿ.ಅಮರೇಶ್, ತಾಲೂಕು ಬಿಜೆಪಿ ಅಧ್ಯಕ್ಷ ಎಂ.ನಾಗೇಶ್, ಮಾಜಿ ಅಧ್ಯಕ್ಷ ಎ.ಹನುಮಪ್ಪ, ಪ್ರದಾನ ಕಾರ್ಯದರ್ಶಿಗಳಾದ ಚೌಡಪ್ಪ, ಪಾರ್ಥಸಾರಥಿ, ಉಪಾಧ್ಯಕ್ಷ ರಾಮಚಂದ್ರಪ್ಪ, ಎಸ್ಸಿ ಮೋರ್ಚಾ ಅಧ್ಯಕ್ಷ ವೆಂಕಟೇಶ್, ಹುಣಸನಹಳ್ಳಿ ಶ್ರೀನಿವಾಸ್, ಪುರಸಭೆ ಸದಸ್ಯ ಕಪಾಲಿ ಶಂಕರ್, ಬಿ.ಪಿ.ಮಹೇಶ್, ಬಿಂದು ಮಾಧವ, ಮೆಹಬೂಬ, ಟಿಎಪಿಸಿಎಂಎಸ್ ನಿರ್ದೇಶಕ ಎಂ.ಸಂಪಂಗಿರೆಡ್ಡಿ, ಶಿವಣ್ಣ, ಸುರೇಂದ್ರ, ಕುಮಾರಗೌಡ, ರಾಣಿ ಗೋವಿಂದರಾಜು, ಸುಶೀಲಮ್ಮ, ಶೋಭಾ, ಅಬಕಾರಿ ಸುಬ್ಬರಾಯಪ್ಪ, ಕರವೇ ಚಲಪತಿ, ಹುಲಿಬೆಲೆ ಪ್ರಸನ್ನ, ಸುರೇಶ್ ಮುಂತಾದವರಿದ್ದರು.
ಕಾಂಗ್ರೆಸಿಗರಿಗೆ ನೈತಿಕತೆ ಇಲ್ಲ
ರಾಹುಲ್ ಗಾಂಧಿ ಹಾಗೂ ಅವರ ತಾಯಿ ಬೇಲ್ ಮೇಲೆ ಹೊರಗೆ ಇದ್ದಾರೆ. ಕಮಿಷನ್ ತೆಗೆದುಕೊಳ್ಳುವುದರಲ್ಲಿ ಕಾಂಗ್ರೆಸ್ನವರು ಪಿತಾಮಹರು. ಅವರಿಗೆ ಬಿಜೆಪಿ ಹಾಗೂ ನಮ್ಮ ಸರ್ಕಾರದ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಗೇನಾದರೂ ಕಮಿಷನ್ ಬಗ್ಗೆ ಅವರಲ್ಲಿ ದಾಖಲೆ ಇದ್ದರೆ ಒದಗಿಸಬೇಕು. ರಾಹುಲ್ ಗಾಂಧಿ ರಾಜ್ಯಕ್ಕೆ ಬಂದಿದ್ದಾರೆ. ಅವರು ನಮ್ಮ ಸರ್ಕಾರ 40 ಪರ್ಸೆಂಟ್ ಸರ್ಕಾರ ಎಂದು ಹೇಳಿದ್ದಾರೆ. ಅವರ ಪಕ್ಷದವರೇ ಭ್ರಷ್ಟಾಚಾರದಲ್ಲಿ ಪಿತಾಮಹರಾಗಿದ್ದಾರೆ.
ಅವರು ಭಾರತ್ ಜೋಡೋ ಯಾತ್ರೆ, ಪಾದಯಾತ್ರೆ ಮಾಡಿಕೊಳ್ಳಲಿ. ಜನತೆ ಅದನ್ನು ಲೆಕ್ಕಕ್ಕೆ ತೆಗೆದುಕೊಳ್ಳುವ ಪರಿಸ್ಥಿತಿಯಿಲ್ಲ. ಅವರ ಹೇಳಿಕೆಯನ್ನು ನಾನು ಖಂಡಿಸುತ್ತೇನೆ. ರಾಜ್ಯಾದ್ಯಂತ ನಮ್ಮ ಕಾರ್ಯಕರ್ತರು ಪ್ರತಿಭಟನೆಗೆ ಇಳಿಯಬೇಕಾಗುತ್ತದೆ ಎಂಬ ಎಚ್ಚರಿಕೆ ಕೊಡುತ್ತೇನೆ ಎಂದು ವಾಗ್ದಾಳಿ ನಡೆಸಿದರು. ನಾವು ಹಲವು ಜನಪರ ಅಭಿವೃದ್ಧಿ ಕೆಲಸ ಮಾಡಿದ್ದೇವೆ. ಅದನ್ನು ಮುಂದಿಟ್ಟುಕೊಂಡು ಜನರ ಮುಂದೆ ಹೋಗುತ್ತೇವೆ. ಕಾಂಗ್ರೆಸ್ನವರು ಯಾವ ನೈತಿಕತೆ ಇಟ್ಟುಕೊಂಡು ಜನರ ಬಳಿ ಹೋಗುತ್ತಾರೆ? ಅವರು ಕೆಲಸ ಮಾಡಿದ್ದರೆ ಯಾಕೆ ಕಳೆದ ಬಾರಿ 79 ಸೀಟು ಬರುತ್ತಿತ್ತು ಎಂದು ಪ್ರಶ್ನಿಸಿದರು.
ಯಾರು ಭಾರತ್ ಜೋಡೋ ಮಾಡಿದ್ದಾರೆ, ತೋಡೋ ಮಾಡಿದ್ದಾರೆಂದು ಎಲ್ಲರಿಗೂ ಗೊತ್ತಿದೆ: ಸಿಎಂ ಬೊಮ್ಮಾಯಿ
ಸಿದ್ದರಾಯಮಯ್ಯ ಆರ್ಎಸ್ಎಸ್ ಬಗ್ಗೆ ಮಾತನಾಡಿದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ರಾಷ್ಟ್ರೀಯ ಸ್ವಯಂ ಸೇವಕ ಸಂಘವು ದೇಶದ ಸಂಸ್ಕೃತಿ ಬಗ್ಗೆ ಅಪಾರ ಗೌರವ ಹೊಂದಿದೆ. ಅಸೂಯೆಯಿಂದ ಸಿದ್ದರಾಮಯ್ಯ ಆ ರೀತಿ ಮಾತನಾಡುತ್ತಿದ್ದಾರೆ. ರಾಜ್ಯ ಹಾಗೂ ದೇಶದ ರಕ್ಷಣೆ ಕುರಿತು ನಮಗೆ ಆರ್ಎಸ್ಎಸ್ನವರು ಸಲಹೆ ನೀಡುತ್ತಿದ್ದಾರೆ ಎಂದರು.
ಕಾಂಗ್ರೆಸ್ನವರು ಪೇಸಿಎಂ ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿ. ಸಿದ್ದರಾಮಯ್ಯ ಕೂಡಾ ಮುಖ್ಯಮಂತ್ರಿ ಆಗಿದ್ದಾಗ ಏನೇನು ಮಾಡಿದ್ದೆ ಎಂಬುದನ್ನು ನೋಡಿಕೊಳ್ಳಬೇಕು. ಸಿದ್ದರಾಮಯ್ಯ ತಮ್ಮ ಬೆನ್ನನ್ನು ತಾವು ನೋಡಿಕೊಳ್ಳಲಿ. ಇಂಥ ಹೇಳಿಕೆ ಅವರಿಗೆ ಶೋಭೆ ತರುವುದಿಲ್ಲ. ಭಾರತ್ ಜೋಡೋ ಸಂದರ್ಭದಲ್ಲಿ ಡಿಕೆಶಿ ಕಣ್ಣೀರು ಹಾಕಿರುವುದು ನಾಟಕ. ಅವರು ಏನೇ ಮಾಡಿದರೂ ಜನ ನಮ್ಮ ಪರ ಇದ್ದಾರೆ. ಮುಂದಿನ ದಿನಗಳಲ್ಲಿ ಜನ ನಮಗೇ ಆಶೀರ್ವಾದ ಮಾಡುತ್ತಾರೆ ಎಂಬ ವಿಶ್ವಾಸವಿದೆ ಎಂದು ಸಚಿವ ಬೈರತಿ ಹೇಳಿದರು.