* ಮಾಜಿ ಸಚಿವ ಅಭಯಚಂದ್ರ ಜೈನ್‌ ಚುನಾವಣಾ ನಿವೃತ್ತಿ* ದೇಶ ಉಳಿಯಬೇಕಾದರೆ ಕಾಂಗ್ರೆಸ್‌ ಅಧಿಕಾರಕ್ಕೆ ಬರಬೇಕು* ಕಾಂಗ್ರೆಸ್‌ ಉಳಿಯಬೇಕಾದರೆ ಯುವಕರಿಗೆ ಹೆಚ್ಚು ಅವಕಾಶ ನೀಡಬೇಕು

ಮಂಗಳೂರು(ಜು.03): ಇನ್ನು ಮುಂದೆ ಚುನಾವಣೆಗಳಲ್ಲಿ ನಾನು ಸ್ಪರ್ಧಿಸುವುದಿಲ್ಲ. ಆ ಸ್ಥಾನವನ್ನು ಯುವಕರಿಗೆ ಬಿಟ್ಟುಕೊಡುತ್ತೇನೆ ಎಂದು ಮಾಜಿ ಸಚಿವ ಅಭಯಚಂದ್ರ ಜೈನ್‌ ಸ್ಪಷ್ಟಪಡಿಸಿದ್ದಾರೆ.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದೇಶ ಉಳಿಯಬೇಕಾದರೆ ಕಾಂಗ್ರೆಸ್‌ ಅಧಿಕಾರಕ್ಕೆ ಬರಬೇಕು. ಕಾಂಗ್ರೆಸ್‌ ಉಳಿಯಬೇಕಾದರೆ ಯುವಕರಿಗೆ ಹೆಚ್ಚು ಅವಕಾಶ ನೀಡಬೇಕು. ಆಗ ಮತದಾರರಿಗೂ ಸ್ಫೂರ್ತಿ ಬರುತ್ತದೆ. ರಾಜಕಾರಣದಲ್ಲಿ ಈ ಬದಲಾವಣೆಯ ಅಗತ್ಯವಿದೆ. ಎಲ್ಲ ಹಿರಿಯರಿಗೆ ಇದೇ ಕಿವಿಮಾತು ಹೇಳುತ್ತಿದ್ದೇನೆ ಎಂದರು.

ಮಂಗಳೂರು: ಅಂಗಾಂಗ ದಾನ​ ಘೋಷಿಸಿದ ಅಭ​ಯ​ಚಂದ್ರ ಜೈನ್‌​

ಕಳೆದ ಚುನಾವಣೆಗೂ ಮೊದಲೇ ಆಗಿನ ಯುವ ಕಾಂಗ್ರೆಸ್‌ ಅಧ್ಯಕ್ಷರಾಗಿದ್ದ ಮಿಥುನ್‌ ರೈ ಅವರಿಗೆ ಅವಕಾಶ ಕೊಡಿ ಎಂದು ವರಿಷ್ಠರಿಗೆ ಹೇಳಿದ್ದೆ. ಆದರೂ ಚುನಾವಣೆಯಲ್ಲಿ ಸೋತೆ. ಪ್ರಾಮಾಣಿಕತೆ ನನ್ನನ್ನು ಗೆಲ್ಲಿಸಲಿಲ್ಲ. ಇನ್ಮುಂದೆ ಯುವಕರನ್ನು ನಿಲ್ಲಿಸಿ ಗೆಲ್ಲಿಸಲು ಪಣ ತೊಡುತ್ತೇನೆ ಎಂದರು ಜೈನ್‌.