ಚಿಂತಕ, ವಿಮರ್ಶಕ ಜಿ.ರಾಜಶೇಖರ್ ನಿಧನ
ಉಡುಪಿ(ಜು.21): ಚಿಂತಕ, ವಿಮರ್ಶಕ ಜಿ.ರಾಜಶೇಖರ್(75) ಅವರು ಇಂದು(ಬುಧವಾರ) ನಿಧನರಾಗಿದ್ದಾರೆ. ಕಳೆದ ಎರಡು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ರಾಜಶೇಖರ್ ಇಂದು ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಕಳೆದ ಎರಡು ವರ್ಷಗಳಿಂದ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ರಾಜಶೇಖರ್ ಅವರನ್ನ ಇತ್ತೀಚಿಗೆ ಉಡುಪಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು ಅಂತ ತಿಳಿದು ಬಂದಿದೆ.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಜಿ.ರಾಜಶೇಖರ್ ಇಂದು ನಿಧನರಾಗಿದ್ದಾರೆ. ಜಿ.ರಾಜಶೇಖರ್ ಅಂತ್ಯಕ್ರಿಯೆ ನಾಳೆ(ಗುರುವಾರ) ನಡೆಯಲಿದೆ.
