Asianet Suvarna News Asianet Suvarna News

Namaz In School: ಹಿಜಾಬ್ ವಿವಾದದ ನಡುವೆ  ಮಂಗಳೂರಿನ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ನಮಾಜ್

* ಹಿಜಾಬ್ ವಿವಾದದ ನಡುವೆ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ನಮಾಜ್..!

* ವಿದ್ಯಾರ್ಥಿಗಳು ನಮಾಜ್ ಮಾಡುತ್ತಿರುವ ವಿಡಿಯೋ ವೈರಲ್

* ಕಡಬ ತಾಲೂಕಿನ ಅಂಕತ್ತಡ್ಕ ಸರಕಾರಿ ಶಾಲೆಯ ಮಕ್ಕಳು

* ಕಳೆದ ಮೂರು ವಾರಗಳಿಂದ ಶಾಲಾ ಕೊಠಡಿಯಲ್ಲಿ ನಮಾಜ್ ಮಾಡುತ್ತಿರುವ ವಿದ್ಯಾರ್ಥಿಗಳು

Video of students offering namaz inside classroom goes viral Mangaluru mah
Author
Bengaluru, First Published Feb 12, 2022, 12:45 AM IST | Last Updated Feb 12, 2022, 12:45 AM IST

ಮಂಗಳೂರು(ಫೆ. 12)   ಈ ಹಿಂದೆ ಬೆಂಗಳೂರಿನ ರೈಲ್ವೆ  ನಿಲ್ದಾಣದಲ್ಲಿ ನಮಾಜ್ (Namaz) ಗೆಂದು ಒಂದು ಕೊಠಡಿ ಮೀಸಲಿಡಲಾಗಿದೆ ಎನ್ನವು ಸುದ್ದಿ ವೈರಲ್ ಆಗಿತ್ತು. ಹಿಜಾಬ್ (Hijab) ವಿವಾದದ ನಡುವೆ ಶಾಲೆಯಲ್ಲಿ (School) ವಿದ್ಯಾರ್ಥಿಗಳು ನಮಾಜ್ ಮಾಡುತ್ತಿರುವ ವಿಡಿಯೋ ವೈರಲ್ (Viral Video) ಆಗಿದೆ.

ಕಡಬ ತಾಲೂಕಿನ ಅಂಕತ್ತಡ್ಕ ಸರಕಾರಿ ಶಾಲೆಯ ಮಕ್ಕಳು ನಮಾಜ್ ಮಾಡುತ್ತಿರುವ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಕಳೆದ ಮೂರು ವಾರಗಳಿಂದ ಶಾಲಾ ಕೊಠಡಿಯಲ್ಲಿ ವಿದ್ಯಾರ್ಥಿಗಳು ನಮಾಜ್ ಮಾಡುತ್ತಿದ್ದಾರೆ.  6 ನೇ ಮತ್ತು 7 ನೇ ತರಗತಿ ಮಕ್ಕಳು ಪ್ರಾರ್ಥನೆಯಲ್ಲಿ ತೊಡಗಿದ್ದಾರೆ. ನಮಾಜ್ ಮಾಡುತ್ತಿದ್ದರೂ ಶಾಲಾ ಸಿಬ್ಬಂದಿ ಗಮನ ಹರಿಸಿಲ್ಲ ಎನ್ನಲಾಗಿದೆ. 

ಕಾಲೇಜಿಗೆ ರಜಾ:  ಹಿಜಾಬ್ (Hijab) ವಿವಾದದ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆ ಹಾಗೂ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ವ್ಯಾಪ್ತಿಗೆ ಬರುವ ಶಿಕ್ಷಣ ಸಂಸ್ಥೆಗಳಿಗೆ ನೀಡಿದ್ದ ರಜೆಯನ್ನು ಮುಂಜಾಗ್ರತಾ ಕ್ರಮವಾಗಿ ಫೆ.16ರವರೆಗೂ ಮುಂದುವರಿಸಲಾಗಿದೆ . ಸರ್ಕಾರ (Karnataka Govt) ಅಧಿಕೃತ ಆದೇಶವನ್ನು ನೀಡಿದ್ದು ಈ ಬಗ್ಗೆ ಉನ್ನತ ಶಿಕ್ಷಣ ಸಚಿವ  ಡಾ.ಸಿ.ಎನ್. ಅಶ್ವತ್ಥನಾರಾಯಣ ಮಾಹಿತಿ ನೀಡಿದ್ದಾರೆ.

Karnataka Hijab Row : 'ವಿಳಾಸ, ಪೋನ್ ನಂಬರ್  ಕಾಲೇಜಿನಿಂದಲೇ ಲೀಕ್ ಆಗಿದೆ..  SPಗೆ ವಿದ್ಯಾರ್ಥಿನಿಯರ ದೂರು

 ಉನ್ನತ`ಇಲಾಖೆ ವ್ಯಾಪ್ತಿಗೆ ಬರುವ ಎಲ್ಲ ವಿಶ್ವವಿದ್ಯಾಲಯಗಳು,  ಸರಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಥಮ ದರ್ಜೆ ಕಾಲೇಜುಗಳು, ಎಂಜಿನಿಯರಿಂಗ್ ಮತ್ತು ಡಿಪ್ಲೊಮಾ ಕಾಲೇಜುಗಳಿಗೆ ಇದು ಅನ್ವಯಿಸುತ್ತದೆ. ಆದರೆ, ಈ ಅವಧಿಯಲ್ಲಿ ಆನ್ಲೈನ್ ಬೋಧನೆ ಎಂದಿನಂತೆಯೇ ನಡೆಯಲಿದೆ. ಜೊತೆಗೆ, ಈಗಾಗಲೇ ನಡೆಯುತ್ತಿರುವ ಮತ್ತು ನಿಗದಿಯಾಗಿರುವ ಪರೀಕ್ಷೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ. ಪರಿಸ್ಥಿತಿಯನ್ನು ಅವಲೋಕಿಸಿ, ಕಾಲೇಜು ಪುನಾರಂಭದ ಬಗ್ಗೆ ಫೆ.16ರ ಹೊತ್ತಿಗೆ ತೀರ್ಮಾನಿಸಲಾಗುವುದು ಎಂದು ತಿಳಿಸಿದ್ದಾರೆ.

ಬೆಂಗಳೂರು ರೈಲ್ವೆ ನಿಲ್ದಾಣದ ಪ್ರಕರಣ: ನಗರದ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಹಮಾಲರ ವಿಶ್ರಾಂತಿ ಕೊಠಡಿಯೊಂದರಲ್ಲಿ ಮುಸ್ಲಿಂ(Muslim) ಸಮುದಾಯದ ಹಮಾಲಿಗಳ ಪ್ರಾರ್ಥನೆ ಸಲ್ಲಿಸುತ್ತಿರುವ ವಿಡಿಯೋ ತುಣುಕು ಸಾಮಾಜಿಕ ಜಾಲಾತಾಣಗಳಲ್ಲಿ(Social Media) ವೈರಲ್‌ ಆಗಿದ್ದು, ಹಿಂದೂ ಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿತ್ತು.

ಸ್ಥಳಕ್ಕೆ ಭೇಟಿ ನೀಡಿದ್ದ ಹಿಂದೂ ಜನಜಾಗೃತಿ ಸಮಿತಿ ಸದಸ್ಯರು, ರೈಲ್ವೆ ನಿಲ್ದಾಣದಲ್ಲಿ ಅನಧಿಕೃತವಾಗಿ ಮಸೀದಿ ನಿರ್ಮಾಣವಾಗುತ್ತಿದ್ದು, ಒಂದು ಸಮುದಾಯದ ಹಮಾಲಿಗಳು ಪ್ರಾರ್ಥನೆ ಸಲ್ಲಿಸಲು ಮುಂದಾಗಿದ್ದಾರೆ. ಯಾವ ಆಧಾರದಲ್ಲಿ ಪ್ರಾರ್ಥನೆಗೆ ಅವಕಾಶ ನೀಡಲಾಗಿದೆ ಎಂದು ರೈಲ್ವೆ ನಿಲ್ದಾಣದ ವ್ಯವಸ್ಥಾಪಕರನ್ನು ಪ್ರಶ್ನೆ ಮಾಡಿದ್ದರು.

ಹಳೆಯ ಪದ್ಧತಿ: ರೈಲ್ವೆ ನಿಲ್ದಾಣದ(Railway Station) ಆವರಣದಲ್ಲಿ ಮಸೀದಿ ನಿರ್ಮಾಣವಾಗಿದೆ ಎಂಬುದು ಸುಳ್ಳು. ರೈಲ್ವೆಯಲ್ಲಿ ಎಲ್ಲ ಧರ್ಮಕ್ಕೆ ಸೇರಿದ ಹಮಾಲರಿದ್ದು, ಅವರು ವಿಶ್ರಾಂತಿ ಪಡೆಯಲು ಕೊಠಡಿಗಳನ್ನು ಒದಗಿಸಲಾಗಿದೆ. ಈ ಕೊಠಡಿಯಲ್ಲಿ ಎಲ್ಲ ಧರ್ಮದವರ ಫೋಟೋ ಈ ಕೊಠಡಿಗಳಲ್ಲಿ ಅಳವಡಿಸಿದ್ದು, ಸಹಬಾಳ್ವೆಯಿಂದ ಪೂಜೆ ಮತ್ತು ಪ್ರಾರ್ಥನೆಗಳನ್ನು ಸಲ್ಲಿಸುತ್ತಾರೆ. ಅಲ್ಲದೆ, ಫ್ಲಾಟ್‌ಫಾರ್ಮ್‌ ಸಂಖ್ಯೆ 7ರಲ್ಲಿ ಹಿಂದೂ ದೇವರ ದೇವಾಲಯವಿದೆ. ಅಲ್ಲಿ ನಿತ್ಯ ಪೂಜೆಗಳು ನಡೆಯುತ್ತಿವೆ. ರೈಲ್ವೆ ನಿಲ್ದಾಣ ಸರ್ವ ಧರ್ಮಿಯರ ತಾಣವಾಗಿದ್ದು, ಒಂದು ಧರ್ಮದವರಿಗೆ ಮಾತ್ರ ಅವಕಾಶ ನೀಡಲಾಗಿದೆ ಎಂಬುದು ಸತ್ಯಕ್ಕೆ ದೂರವಾದ ಸಂಗತಿ ಎಂದು ರೈಲ್ವೆ ಇಲಾಖೆ ಅಧಿಕಾರಿಗಳು ತಿಳಿಸಿದ್ದರು. 

 

Latest Videos
Follow Us:
Download App:
  • android
  • ios