ಬಸವ ಜನ್ಮಭೂಮಿಯಲ್ಲಿ Vijayapura DCಯಿಂದ ಸಾರ್ವಜನಿಕ ಅಹವಾಲು ಸ್ವೀಕಾರ!
ಜಿಲ್ಲಾಧಿಕಾರಿಗಳಾದ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಪೂರ್ವನಿಗದಿಯಂತೆ ಪ್ರಪ್ರಥಮಬಾರಿಗೆ ಬಸವನ ಬಾಗೇವಾಡಿ ತಾಲೂಕು ಕಚೇರಿಗೆ ಭೇಟಿ ನೀಡಿ, ವಿವಿಧ ಇಲಾಖೆಗಳ ತಾಲೂಕುಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ನಾನಾ ಯೋಜನೆಗಳ ಪ್ರಗತಿಯ ಬಗ್ಗೆ ಪರಾಮರ್ಶೆ ನಡೆಸಿದರು.
ವರದಿ: ಷಡಕ್ಷರಿ ಕಂಪೂನವರ್ ಏಷ್ಯಾನೆಟ್ ಸುವರ್ಣ ನ್ಯೂಸ್
ವಿಜಯಪುರ (ಜೂನ್ 8): ವಿಜಯಪುರ (Vijayapura) ಜಿಲ್ಲಾಧಿಕಾರಿಗಳು ಪ್ರತಿವಾರ ಜಿಲ್ಲಾ ವ್ಯಾಪ್ತಿಯ ತಾಲೂಕು ಕಚೇರಿಗೆ ಭೇಟಿ ನೀಡಿ ಅಹವಾಲು ಆಲಿಸುತ್ತಿದ್ದಾರೆ. ತಾಲೂಕು ಕಚೇರಿ ಭೇಟಿ ವೇಳೆ ಸಾರ್ವಜನಿಕರಿಂದ ಬರುವ ಕುಂದುಕೊರತೆಗಳನ್ನ ಆಲಿಸಿ ಪರಿಹರಿಸುವ ಕೆಲಸ ಮಾಡ್ತಿದ್ದಾರೆ. ಜಗಜ್ಯೋತಿ ಬಸವೇಶ್ವರರ ಜನ್ಮಭೂಮಿಯಾದ ಬಸವನಬಾಗೇವಾಡಿಯಿಂದ ( basavana bagewadi ) ಆರಂಭಗೊಂಡಿತು.
ಜಿಲ್ಲಾಧಿಕಾರಿಗಳಾದ ಡಾ.ವಿಜಯಮಹಾಂತೇಶ ದಾನಮ್ಮನವರ (vijay mahantesh danamma ) ಅವರು ಪೂರ್ವನಿಗದಿಯಂತೆ ಪ್ರಪ್ರಥಮಬಾರಿಗೆ ಬಸವನ ಬಾಗೇವಾಡಿ ತಾಲೂಕು ಕಚೇರಿಗೆ ಭೇಟಿ ನೀಡಿ, ವಿವಿಧ ಇಲಾಖೆಗಳ ತಾಲೂಕುಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ನಾನಾ ಯೋಜನೆಗಳ ಪ್ರಗತಿಯ ಬಗ್ಗೆ ಪರಾಮರ್ಶೆ ನಡೆಸಿದರು.
HAVERI: ಸಬ್ ಕಾ ಸಾತ್ ಸಬ್ ಕಾ ನಾಶ್ ಮಾಡಿದ್ದಾರೆ ನರೇಂದ್ರ ಮೋದಿ: ಸಿದ್ದರಾಮಯ್ಯ
ಸಾರ್ವಜನಿಕರ ಅಹವಾಲು ಆಲಿಸಿದ ಡಿಸಿ..!
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಸಾರ್ವಜನಿಕರ ಆಹವಾಲುಗಳನ್ನು ಕೂಡ ಆಲಿಸಿದರು. ಸ್ವೀಕೃತವಾದ 8 ಅರ್ಜಿಗಳನ್ನು ಸ್ಥಳದಲ್ಲಿಯೇ ವಿಲೇವಾರಿಗೆ ಕ್ರಮ ವಹಿಸಿದರು. ಅರ್ಜಿಗಳ ಬಗ್ಗೆ ಸಂಬಂಧಿಸಿದ ಇಲಾಖಾ ಅಧಿಕಾರಿಗಳೊಂದಿಗೆ ಸಮಾಲೋಚಿಸಿ ಇತ್ಯರ್ಥಪಡಿಸಿದರು.
ಅಧಿಕಾರಿಗಳ ಜೊತೆಗೆ ಡಿಸಿ ಸಭೆ..!
ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, ಅಧಿಕಾರಿಗಳು ಸಾರ್ವಜನಿಕರ ಅಹವಾಲುಗಳಿಗೆ ಸರಿಯಾಗಿ ಸ್ಪಂದಿಸಬೇಕು. ಯಾರೇ ಆಗಲಿ ಕಚೇರಿಗೆ ಭೇಟಿ ನೀಡಿದಾಗ ಅವರೊಂದಿಗೆ ಸಹಾನುಭೂತಿಯಿಂದ ಸ್ಪಂದಿಸಬೇಕು. ಸಾಧ್ಯವಾದರೆ ಆಯಾ ಗ್ರಾಮಗಳಿಗೆ ಭೇಟಿ ನೀಡಿ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಸಲಹೆ ಮಾಡಿದರು. ಭೂಮಿ ವಿಭಾಗದಲ್ಲಿರುವ ತಿದ್ದುಪಡಿ, ಪೋಡಿ ಪ್ರಕರಣ ಸೇರಿದಂತೆ ಇನ್ನೀತರ ಎಲ್ಲವನ್ನು ಸಕಾಲದಲ್ಲಿ ಇತ್ಯರ್ಥ ಪಡಿಸಲು ಇದೆ ವೇಳೆ ಜಿಲ್ಲಾಧಿಕಾರಿಗಳು ತಹಸೀಲ್ದಾರರಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಬಸವನಬಾಗೇವಾಡಿ ತಹಸೀಲ್ದಾರರಾದ ವಿಜಯಕುಮಾರ ಗೋಪಾಲರಾವ್ ಕಡಕೋಳ, ತಾಪಂ ಕಾರ್ಯನಿರ್ವಹಣಾಧಿಕಾರಿಗಳಾದ ಭಾರತಿ ಚಲುವಯ್ಯ ಹಾಗೂ ಇನ್ನೀತರರು ಉಪಸ್ಥಿತರಿದ್ದರು.
Chamarajanagaraದಲ್ಲಿ ಇದ್ರೂ ಇಲ್ಲದಾಗಿವೆ ಆಂಬ್ಯುಲೆನ್ಸ್ , ಚಾಲಕರ ನೇಮಕಾತಿಗೆ
ಯಶಸ್ಸು ಕಂಡ "ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ"..!
ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ಜನಪ್ರಿಯವಾಗಿ ಯಶಸ್ಸು ಕಂಡಿದೆ. ಈ ಕಾರ್ಯಕ್ರಮ ಮುಂದುವರೆದ ಭಾಗವಾಗಿ ಜಿಲ್ಲಾಧಿಕಾರಿಗಳು ಪ್ರತಿ ತಿಂಗಳ ಎಲ್ಲಾ ಮಂಗಳವಾರದಂದು ತಾಲೂಕು ಕಚೇರಿಯಲ್ಲಿ ಲಭ್ಯವಿದ್ದು ಜನಸಾಮಾನ್ಯರ ಕುಂದುಕೊರತೆಗಳನ್ನು ಬಗೆಹರಿಸಲು ತ್ವರಿತ ಕ್ರಮಕೈಗೊಳ್ಳುವಂತೆ ಹಾಗೂ ಕೈಗೊಂಡ ಕ್ರಮದ ಬಗ್ಗೆ ಸರ್ಕಾರಕ್ಕೆ ಮಾಹಿತಿಯನ್ನು ಸಲ್ಲಿಸಲಾಗುತ್ತದೆ. ಕೆಲವು ತಾಲೂಕುಗಳು ಜಿಲ್ಲಾ ಕೇಂದ್ರದಿಂದ ಸಾಕಷ್ಟು ದೂರ ಇರುತ್ತವೆ. ವಯೋವೃದ್ಧರು, ಮಹಿಳೆಯರು ಮತ್ತು ವಿಕಲಚೇತನರು ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಅರ್ಜಿ ನೀಡುವದಕ್ಕೆ ತೊಂದರೆಯಾಗುತ್ತದೆ.
ಹೀಗಾಗಿ ಜಿಲ್ಲಾಧಿಕಾರಿಗಳು ತಾಲೂಕು ಕಚೇರಿಗಳಿಗೆ ತೆರಳಿದಲ್ಲಿ ಜನರಿಗೆ ನಿರ್ದಿಷ್ಟ ಸಮಯದಲ್ಲಿ ಖುದ್ದು ಜಿಲ್ಲಾಧಿಕಾರಿಯವರನ್ನು ಭೇಟಿ ಮಾಡಿ ಅವರ ತೊಂದರೆಗಳಿಗೆ ಪರಿಹಾರ ಕಂಡುಕೊಳ್ಳಲು ಹಾಗೂ ಅವರ ಅಹವಾಲು ಸಲ್ಲಿಸಲು ಸಹಾಯವಾಗುತ್ತದೆ. ತಾಲೂಕು ಕಚೇರಿಗಳಲ್ಲಿ ಮೂಲಭೂತ ಸೌರ್ಕಯಗಳ ಕೊರತೆಯಿದ್ದಲ್ಲಿ ಅವುಗಳನ್ನು ಸರಿಪಡಿಸಲು ಜಿಲ್ಲಾಡಳಿತಕ್ಕೆ ಹೆಚ್ಚಿನ ಅನುಕೂಲವಾಗಲಿದ್ದು ಇದು ಮಹತ್ವದ ಕಾರ್ಯಕ್ರಮವಾಗಿದೆ ಎಂದು ಇದೆ ವೇಳೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.