Asianet Suvarna News Asianet Suvarna News

ಕೋವಿಡ್ ಸಂದರ್ಭದಲ್ಲಿ ಸ್ವಂತ ಹಣದಿಂದ ಬಡವರಿಗೆ ರೇಷನ್ ಹಂಚಿದ್ದ ಪೊಲೀಸ್ ಸಿಬ್ಬಂದಿ ಹೃದಯಾಘಾತದಿಂದ ಸಾವು!

ನಗರ ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಸಿಬ್ಬಂದಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ವಿಜಯಪುರ ಜಿಲ್ಲೆಯವರಾದ ಸೋಮನ ಗೌಡ ಚೌಧರಿ (31) ಮೃತಪಟ್ಟ ದುರ್ದೈವಿ.

Vijayapura Head Constable Serving In Mangaluru Succumbed To Heart Attack gvd
Author
First Published Oct 5, 2023, 11:04 AM IST

ಮಂಗಳೂರು (ಅ.05): ನಗರ ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಸಿಬ್ಬಂದಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ವಿಜಯಪುರ ಜಿಲ್ಲೆಯವರಾದ ಸೋಮನ ಗೌಡ ಚೌಧರಿ (31) ಮೃತಪಟ್ಟ ದುರ್ದೈವಿ. ಮಂಗಳೂರು ನಗರ ಪೊಲೀಸ್‌ ಕಮಿಷನರೇಟ್‌ನಲ್ಲಿ ವಯರ್‌ವೆಲ್‌ ಇನ್‌ಸ್ಪೆಕ್ಟರ್‌ ವಾಹನಕ್ಕೆ ಇವರು ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇನ್‌ಸ್ಪೆಕ್ಟರ್‌ಗೆ ಡೆಂಘೀ ಜ್ವರ ಬಾಧಿಸಿದ್ದರಿಂದ ನಗರದ ಫಳ್ನಿರ್‌ನಲ್ಲಿರುವ ಖಾಸಗಿ ಆಸ್ಪತ್ರೆಗೆ ಮಂಗಳವಾರ ಬೆಳಗ್ಗೆ ಕರೆದುಕೊಂಡು ಹೋಗಿದ್ದರು. 

ಅಧಿಕಾರಿಯನ್ನು ಆಸ್ಪತ್ರೆ ಬಳಿ ಇಳಿಸಿ ವಾಹನ ಪಾರ್ಕ್ ಮಾಡಲು ಹೋದ ಸಂದರ್ಭ ಸೋಮನ ಗೌಡ ಏಕಾಎಕಿ ಕುಸಿದು ಬಿದ್ದಿದ್ದಾರೆ. ಕೂಡಲೇ ಸ್ಥಳೀಯರು ಧಾವಿಸಿ 112ಕ್ಕೆ ಕರೆ ಮಾಡಿ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲು ಹೋಗುತ್ತಿರಬೇಕಾದರೆ ದಾರಿ ಮಧ್ಯೆ ಸಾವಿಗೀಡಾಗಿದ್ದಾರೆ. ವಿವಾಹಿತರಾಗಿರುವ ಸೋಮನ ಗೌಡ ಕಳೆದ 7 ವರ್ಷಗಳಿಂದ ನಗರ ಸಶಸ್ತ್ರ ದಳದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಸ್ವಂತ ಹಣದಿಂದ ಬಡವರಿಗೆ ಸೋಮನಗೌಡ ರೇಷನ್ ಹಂಚಿದ್ದರು. ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Bengaluru: ವರದಕ್ಷಿಣೆ ಕಿರುಕುಳ: ಬೆಂಗಳೂರಿನಲ್ಲಿ ಗಂಡನಿಂದಲೇ ಹೆಂಡತಿಯ ಕೊಲೆ!

9ನೇ ತರಗತಿ ವಿದ್ಯಾರ್ಥಿ ಹೃದಯಾಘಾತಕ್ಕೆ ಬಲಿ: ಅರ್ಧವಾರ್ಷಿಕ ಪರೀಕ್ಷೆ ಬರೆಯಲು ಆಗಮಿಸಿದ್ದ ಬಾಲಕನಿಗೆ ಹೃದಯಾಘಾತವಾಗಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಜಮಖಂಡಿ ತಾಲೂಕಿನ ಹುಲ್ಯಾಳ ಗ್ರಾಮದಲ್ಲಿ ಶನಿವಾರ ನಡೆದಿದೆ. ರಾಹುಲ್ ಕೋಲಕಾರ್‌ (15) ಹೃದಯಾಘಾತದಿಂದ ಸಾವಿಗೀಡಾದ ವಿದ್ಯಾರ್ಥಿ. ಜಮಖಂಡಿ ತಾಲ್ಲೂಕಿನ ಇನಾಂ ಹಂಚಿನಾಳ ಗ್ರಾಮದ ನಿವಾಸಿ ಹಾಗೂ ಹುಲ್ಯಾಳ ಗ್ರಾಮದ ಖಾಸಗಿ ಪ್ರೌಢಶಾಲೆಯ ವಿದ್ಯಾರ್ಥಿ 9ನೇ ತರಗತಿ ಓದುತ್ತಿದ್ದ. 

ತಮಿಳ್ನಾಡಿನ 40 ಎಂಪಿ ಸೀಟಿಗಾಗಿ ರಾಜ್ಯವನ್ನೇ ಅಡವಿಟ್ಟ ಕಾಂಗ್ರೆಸ್‌: ಎಚ್.ಡಿ.ರೇವಣ್ಣ

ಶನಿವಾರ ಅರ್ಧ ವಾರ್ಷಿಕ ಪರೀಕ್ಷೆ ವೇಳೆ ಉಂಟಾದ ಎದೆ ನೋವು ಕಾಣಿಸಿಕೊಂಡಿದೆ. ಹೀಗಾಗಿ, ಆತನನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲಿಯೇ ವಿದ್ಯಾರ್ಥಿ ಅಸುನೀಗಿದ್ದಾನೆ. ಎದೆನೋವು ಕಂಡ ತಕ್ಷಣ ಜಮಖಂಡಿಗೆ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ವಿದ್ಯಾರ್ಥಿ ಅಸುನೀಗಿದ್ದಾನೆ. ವಿದ್ಯಾರ್ಥಿ ಸಾವಿನ ಸುದ್ದಿ ತಿಳಿದು ಶಾಲಾ ಶಿಕ್ಷಕರು, ಆತನ ಸಹಪಾಠಿಗಳು ಸೇರಿ ಸಂಸ್ಥೆಯ ಇತರರು ಕಂಬನಿ ಮಿಡಿದರು. ಮೃತ ಬಾಲಕನಿಗೆ ಹೃದಯ ಸಂಬಂಧಿ ಕಾಯಿಲೆ ಇತ್ತು ಎಂಬ ಮಾಹಿತಿ ಲಭ್ಯವಾಗಿದೆ.

Follow Us:
Download App:
  • android
  • ios