ಮಸೀದಿ ಬಳಿ ದಲಿತ ಸಮುದಾಯ ಭವನ ನಿರ್ಮಾಣಕ್ಕೆ ಮುಸ್ಲಿಂರಿಂದ ವಿರೋಧ

ವಿಜಯಪುರದಲ್ಲಿ ಮಸೀದಿ ಬಳಿ ದಲಿತರ ಸಮುದಾಯ ಭವನ ನಿರ್ಮಾಣ ಮಾಡುವುದಕ್ಕೆ ಮುಸ್ಲಿಂ ಸಮುದಾಯದವರಿಂದ ವಿರೋಧ ವ್ಯಕ್ತವಾಗಿದ್ದು, ಕೆಲಕಾಲ ಎರಡೂ ಸಮುದಾಯದವರ ವಾಗ್ವಾದದಿಂದ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು.

Vijayapura Muslim Opposition for community hall construction near Masjid sat

ವಿಜಯಪುರ (ಮೇ 18): ಮಸೀದಿ ಬಳಿ ದಲಿತ ವರ್ಗದವರಿಂದ ಸಮುದಾಯ ಭವನ ನಿರ್ಮಾಣ ಮಾಡುವ ವಿಚಾರಕ್ಕೆ ಮುಸ್ಲಿಂಮರು ವಿರೋಧ ವ್ಯಕ್ತಪಡಿಸಿದ್ದು, ಎರಡೂ ಬಣಗಳ ನಡುವೆ ವಾಗ್ವಾದ ಉಂಟಾಗಿದ್ದು,  ಕೆಲಕಾಲ ಗೊಂದಲದ ವಾತಾವರಣ ಉಂಟಾದ ಘಟನೆ ವಿಜಯಪುರದ ಮನಗೂಳಿ ಕ್ರಾಸ್ ಬಳಿ ನಡೆದಿದೆ.

ವಿಜಯಪುರ ನಗರದ ಇಕ್ಲಾಸಖಾನ್ ಮಸೀದಿ ಬಳಿಯ ಜಾಗದಲ್ಲಿ ದಲಿತ ಸಮುದಾಯದ ಯುವಕರು ಸಮುದಾಯ ಭವನ ನಿರ್ಮಾಣಕ್ಕೆ ಮುಂದಾಗಿದ್ದರು. ಇದಕ್ಕೆ ಮುಸ್ಲಿಂ ಮುಖಂಡರು ವಿರೋಧ ವ್ಯಕ್ತ ಪಡೆಸಿದ್ದಾರೆ‌. ಮಸೀದಿ ಭಾರತೀಯ ಪುರಾತತ್ವ ಇಲಾಖಾ ವ್ಯಾಪ್ತಿಯ ಸಂರಕ್ಷಿತ ವಲಯದಲ್ಲಿದ್ದು ಇಲ್ಲಿ ಸಮುದಾಯ ಭವನ ನಿರ್ಮಾಣ ಮಾಡದಂತೆ ಮುಸ್ಲಿಂ ಮುಖಂಡರು ವಿರೋಧಿಸಿದ್ದಾರೆ. ಇದರಿಂದಾಗಿ ಎರಡು ಸಮುದಾಯಗಳ ಯುವಕರು ಜಮಾಯಿಸಿ ಕೆಲಕಾಲ ಗೊಂದಲದ ವಾತಾವರಣ ಉಂಟಾಗಿತ್ತು. 

4 ವರ್ಷ ಪ್ರೀತಿಸಿ ಮದುವೆಯಾಗಿದ್ದ ನವದಂಪತಿ, 4 ತಿಂಗಳೂ ಸಂಸಾರ ಸಾಗಿಸದೇ ಆತ್ಮಹತ್ಯೆಗೆ ಶರಣು

ವಿಜಯಪುರ ನಗರದಲ್ಲಿ ಸರ್ಕಾರದ ಜಾಗದಲ್ಲಿ ಸಮುದಾಯ ಭವನ ನಿರ್ಮಾಣ ಮಾಡುವುದನ್ನು ತಡೆಯುವುದಕ್ಕೆ ನೀವ್ಯಾರು? ಇಲ್ಲಿ ನಾವು ಸಮುದಾಯ ಭವನ ನಿರ್ಮಿಸುತ್ತೇವೆ ಎಂದು ದಲಿತ ಸಮುದಾಯದ ಮುಖಂಡರು ಹೇಳಿದ್ದಾರೆ. ಆದರೆ, ಮುಸ್ಲಿಂ ಸಮುದಾಯದ ಮುಖಂಡರು ಬಂದು ವಿಜಯಪುರದ ಎಲ್ಲ ಮಸೀದಿಗಳ ಬಳಿಯೂ ಯಾವುದೇ ಕಟ್ಟಡ ನಿರ್ಮಾಣ ಮಾಡಬೇಕೆಂದರೆ ನೀವು ಸರ್ಕಾರದ ಅನುಮತಿ ಮಾತ್ರವಲ್ಲ, ಭಾರತೀಯ ಪುರಾತತ್ವ ಇಲಾಖೆ ಅನುಮತಿ ಪಡೆದುಕೊಂಡು ಬನ್ನಿ ಎಂದು ಹೇಳಿದ್ದಾರೆ. ಈ ವೇಳೆ ಎರಡೂ ಸಮುದಾಯದವರ ನಡುವೆ ವಾಗ್ದಾದ ಜೋರಾಗಿದೆ.

ಎರಡು ಸಮುದಾಯಗಳ ನಡುವೆ ವಾಗ್ವಾದ ಜೋರಾಗುತ್ತಿದ್ದಂತೆಯೇ ಇದು ಎರಡು ಸಮುದಾಯಗಳ ನಡುವೆ ಧರ್ಮಾಧಾರಿತ ಕಲಹಕ್ಕೆ ದಾರಿ ಆಗಬಹುದೆಂಬ ಮುನ್ಸೂಚನೆಯಿಂದ ಸ್ಥಳಕ್ಕೆ ಕೂಡಲೇ ಪೊಲೀಸರು ಆಗಮಿಸಿದ್ದಾರೆ. ಪೊಲೀಸ್ ಕಾನ್ಸ್‌ಸ್ಟೇಬಲ್‌ಗಳ ಬಂದರೂ ಅವರ ಮಾತನ್ನು ಕೇಳದೇ ಎರಡೂ ಸಮುದಾಯದ ಮುಖಂಡರು ವಾಗ್ವಾದ ಮುಂದುವರೆಸಿದ್ದರು. ಕೂಡಲೇ ಕೆಲವು ಪೊಲೀಸ್ ಸಿಬ್ವಂದಿಯೊಂದಿಗೆ ಸ್ಥಳಕ್ಕೆ ಬಂದ ಗೋಳಗುಮ್ಮಟ ಪೊಲೀಸ್ ಠಾಣೆಯ ಸಿಪಿಐ ಮಲ್ಲಯ್ಯ ಮಠಪತಿ ಅವರು ಎರಡು ಕಡೆಗಳ ಮುಖಂಡರನ್ನ ಸಮಾಧಾನ ಪಡೆಸಿದ್ದಾರೆ. ಅಲ್ಲದೆ ಸಂಬಂಧಿಸಿದ ದಾಖಲಾತಿಗಳನ್ನ ತರುವಂತೆ ವಾತಾವರಣ ತಿಳಿಗೊಳಿಸಿದ್ದಾರೆ.

ಬರಗಾಲದಿಂದ ಬರಿದಾಗಿದ್ದ ಭಾಗಮಂಡಲದ ತ್ರಿವೇಣಿ ಸಂಗಮಕ್ಕೆ ಮರಳಿದ ಜೀವಕಳೆ

ಅಪ್ರಾಪ್ತೆ ಯುವತಿಗೆ ಪುಸಲಾಯಿಸಿ ಲೈಂಗಿಕ ದೌರ್ಜನ್ಯ: ವಿಜಯಪುರದಲ್ಲಿ ಮತ್ತೊಂದು ಘಟನೆಯಲ್ಲಿ ಅನ್ಯಕೋಮಿನ ಯುವಕನೋರ್ವ ಅಪ್ರಾಪ್ತೆ ಯುವತಿಯನ್ನು ಪುಸಲಾಯಿಸಿ ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ವಿಜಯಪುರದ ಇಂಡಿ ತಾಲೂಕಿನ ಚಿಕ್ಕಬೇವನೂರು ಗ್ರಾಮದಲ್ಲಿ ನಡೆದಿದೆ. ಸೋಹೇಲ್ ಹೊನಮುರಗಿ ಬಂಧಿತ ಆರೋಪಿ. ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಪರಾರಿಯಾಗಿದ್ದನು. ಇಂಡಿ ಗ್ರಾಮೀಣ ಪೊಲೀಸರು ಆರೋಪಿಯನ್ನ ಪತ್ತೆ ಮಾಡಿ ಬಂಧಿಸಿದ್ದಾರೆ.

ಆರೋಪಿ ಸೋಹೆಲ್ ಏ.13 ರಂದು ಅಪ್ರಾಪ್ತ ಯುವತಿಯನ್ನ ಪುಸಲಾಯಿಸಿ ಮಹಾರಾಷ್ಟ್ರಕ್ಕೆ ಕರೆದುಕೊಂಡು ಹೋಗಿ ಲೈಂಗಿಕವಾಗಿ ಬಳಸಿಕೊಂಡು ನಂತರ ಏ.17ರಂದು ತಂದು ಗ್ರಾಮದಲ್ಲಿ ಬಿಟ್ಟು ಹೋಗಿದ್ದನು. ಆದರೆ, ಮಹಾರಾಷ್ಟ್ರದಲ್ಲಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಬಗ್ಗೆ ಯುವತಿ ಮನೆಯವರ ಬಳಿ ಹೇಳಿಕೊಂಡ ಹಿನ್ನೆಲೆಯಲ್ಲಿ ಕೂಡಲೇ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿದ್ದಾರೆ. ಇಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಆರೋಪಿ ಸೋಹೇಲ್ ವಿರುದ್ಧ ಕಲಂ 366, 376(2) (ಐ), ಐಪಿಸಿ & 4, 6, 12 ಹಾಗೂ ಪೊಕ್ಸೋ-2012 ಅಡಿಯಲ್ಲಿ ಕೇಸ್ ದಾಖಲು ಮಾಡಿಕೊಳ್ಳಲಾಗಿದೆ. ಪ್ರಕರಣದ ಸಂಬಂಧ ಆರೋಪಿಯನ್ನ ಬಂಧಿಸಿ ವಿಚಾರಣೆ ಮುಂದುವರಿಸಿದ್ದಾರೆ.

Latest Videos
Follow Us:
Download App:
  • android
  • ios