ಮಂಗಳೂರಿನಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಗ್ರಾಮಸ್ಥರ ಬೇಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನಾವೂರ ಎಂಬಲ್ಲಿ ಘಟನೆ ಭೂ ಸ್ವಾಧೀನದ ಪರಿಹಾರ ನಿಡದ ಸಂಬಂಧ ರಸ್ತೆಗೆ ಬೇಲಿ
ಮಂಗಳೂರು (ಜು.20): ಮಂಗಳೂರಿನಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಗ್ರಾಮಸ್ಥರು ಬೇಲಿ ಹಾಕಿದ ಘಟನೆ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನಾವೂರ ಎಂಬಲ್ಲಿ ಘಟನೆ ನಡೆದಿದೆ. ಬಿ.ಸಿ.ರೋಡ್ - ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿದೆ.
ತಾವು ಬಿಟ್ಟುಕೊಟ್ಟ ಜಾಗದ ರಸ್ತೆಗೆ ಬೇಲಿ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ರಸ್ತೆ ಅಗಲೀಕರಣಕ್ಕಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಾವೂರ ಗ್ರಾಮದ ಸುಮಾರು 32ಕ್ಕೂ ಹೆಚ್ಚು ನಿವಾಸಿಗಳಿಂದ ಭೂಮಿ ಪಡೆದಿತ್ತು.
ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಸಂಪೂರ್ಣ ಮುಳುಗಡೆ
ಬಿ.ಸಿರೋಡ್-ಪೂಂಜಾಲಕಟ್ಟೆ ರಸ್ತೆಯ ಸುಮಾರು 19ಕಿ.ಮೀ ರಸ್ತೆ ಅಗಲೀಕರಣ ಮಾಡಲಾಗಿತ್ತು. ಸುಮಾರು 200 ಎಕರೆಗಿಂತಲೂ ಜಾಸ್ತಿ ಭೂ ಸ್ವಾಧೀನ ಮಾಡಿಕೊಂಡಿರುವ ಇಲಾಖೆ
ಪರಿಹಾರ ನೀಡದೆ ಸತಾಯಿಸುತ್ತಿದೆ. ಕಳೆದ ಮೂರು ವರ್ಷಗಳಿಂದ ಪರಿಹಾರ ನೀಡದೆ ಸತಾಯಿಸುತ್ತಿದ್ದು, ಇದರಿಂದ ಇಂದು ಪ್ರತಿಭಟನೆ ನಡೆಸಿ ಅಕ್ರೋಶ ಹೊರಹಾಕಿದ್ದಾರೆ.
