ಧಾರವಾಡ(ಫೆ.05):  ಯೋಗೀಶಗೌಡ ಗೌಡರ ಕೊಲೆ ಪ್ರಕರಣದಲ್ಲಿ ಮೂರು ತಿಂಗಳಿಂದ ನ್ಯಾಯಾಂಗ ಬಂಧನದಲ್ಲಿಯೇ ಇರುವ ಮಾಜಿ ಸಚಿವ ವಿನಯ್‌ ಕುಲಕರ್ಣಿ ಅವರ ನ್ಯಾಯಾಂಗ ಬಂಧನವನ್ನು ಮತ್ತೆ 14 ದಿನ ವಿಸ್ತರಿಸಿ ಇಲ್ಲಿನ ವಿಶೇಷ ಸಿಬಿಐ ನ್ಯಾಯಾಲಯ ಗುರುವಾರ ಆದೇಶಿಸಿದೆ. 

ನ.5ರಂದು ಸಿಬಿಐ ಅಧಿಕಾರಿಗಳಿಂದ ವಿಚಾರಣೆಗೆ ಒಳಗಾದ ವಿನಯ್‌, ನ್ಯಾಯಾಲಯದ ಆದೇಶದಂತೆ ಬೆಳಗಾವಿ ಹಿಂಡಲಗಾ ಜೈಲಿನಲ್ಲಿದ್ದಾರೆ. ಫೆ.4ರಂದು ಬಂಧನದ ಅವಧಿ ಮುಗಿದ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿದ ನ್ಯಾಯಾಧೀಶರು ವಿನಯ ಕುಲಕರ್ಣಿ ಸೇರಿದಂತೆ ಅವರ ಮಾವ ಚಂದ್ರಶೇಖರ ಇಂಡಿ ಅವರಿಗೂ 14 ದಿನಗಳ ಅಂದರೆ ಫೆ.19ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿದ್ದಾರೆ.

ಬಿಜೆಪಿ ಮುಖಂಡ ಯೋಗೇಶ್‌ ಗೌಡ ಹತ್ಯೆ: ಬಯಲಾದವು ಸತ್ಯಗಳು

ವಿನಯ್‌ ಬಂಧನವಾಗಿ 90 ದಿನಗಳಾದ ಹಿನ್ನೆಲೆಯಲ್ಲಿ ಬುಧವಾರವಷ್ಟೇ ಅವರ ಮೇಲೆ ನ್ಯಾಯಾಲಯಕ್ಕೆ ದೋಷಾರೋಪಗಳ ಪಟ್ಟಿ ಸಲ್ಲಿಸಲಾಗಿತ್ತು.