ವಿಧಾನಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸುವಂತಹ ಯಾವುದೇ ರೀತಿಯ ಚಟುವಟಿಕೆಗಳು ಜಿಲ್ಲೆಯಲ್ಲಿ ಕಂಡು ಬಂದರೆ ನಿರ್ದಾಕ್ಷಿಣ್ಯವಾಗಿ ಪ್ರಕರಣ ದಾಖಲಿಸಿ ಎಂದು ಜಿಲ್ಲಾ ಚುನಾವಣಾಧಿಕಾರಿಯಾದ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಸೂಚಿಸಿದರು.

 ಮೈಸೂರು : ವಿಧಾನಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸುವಂತಹ ಯಾವುದೇ ರೀತಿಯ ಚಟುವಟಿಕೆಗಳು ಜಿಲ್ಲೆಯಲ್ಲಿ ಕಂಡು ಬಂದರೆ ನಿರ್ದಾಕ್ಷಿಣ್ಯವಾಗಿ ಪ್ರಕರಣ ದಾಖಲಿಸಿ ಎಂದು ಜಿಲ್ಲಾ ಚುನಾವಣಾಧಿಕಾರಿಯಾದ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಸೂಚಿಸಿದರು.

Add Asianetnews Kannada as a Preferred SourcegooglePreferred

ವಿಧಾನಸಭೆ ಸಾರ್ವತ್ರಿಕ ಚುನಾವಣೆ- 2023ರ ಸಂಬಂಧ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ಮತ್ತು ಚಾಮರಾಜ ವಿಧಾನಸಭಾ ಕ್ಷೇತ್ರಗಳ ಫ್ಲೈಯಿಂಗ್‌ ಸ್ಕಾ$್ವಡ್‌ ಹಾಗೂ ಸ್ಟಾಟಿಸ್ಟಿಕ್‌ ಸರ್ವೇಲೆನ್ಸ್‌ ತಂಡದ ಸದಸ್ಯರು ನಿರ್ವಹಿಸಬೇಕಾದ ಕರ್ತವ್ಯಗಳು ಮತ್ತು ಜವಾಬ್ದಾರಿಗಳ ಕುರಿತು ಜಿಪಂ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ತರಬೇತಿಯನ್ನು ಅವರು ಉದ್ಘಾಟಿಸಿ ಮಾತನಾಡಿದರು.

ಚುನಾವಣೆಗೆ ನಿಯೋಜನೆಗೊಂಡಿರುವ ಅಧಿಕಾರಿಗಳು ಬದ್ಧತೆಯಿಂದ ಕಾರ್ಯ ನಿರ್ವಹಿಸಬೇಕು. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಂತೆ ಎಚ್ಚರಿಕೆ ವಹಿಸಿ ಕರ್ತವ್ಯ ನಿರ್ವಹಿಸಬೇಕು. ಜಿಲ್ಲೆಯಲ್ಲಿ ಈಗಾಗಲೇ ತೆರೆದಿರುವ ಚೆಕ್‌ ಪೋಸ್ಟ್‌ಗಳಲ್ಲಿ ಸೂಕ್ಷ್ಮವಾಗಿ ವಾಹನ ತಪಾಸಣೆ ಮಾಡಬೇಕು. ತಪಾಸಣೆ ವೇಳೆ ಸಾರ್ವಜನಿಕರಿಗೆ ತೊಂದರೆಯಾಗಬಾರದು ಎಂದರು.

ಜಿಲ್ಲಾ ಮಾದರಿ ನೀತಿ ಸಂಹಿತೆ ನೋಡಲ್‌ ಅಧಿಕಾರಿಯಾದ ಜಿಪಂ ಸಿಇಒ ಕೆ.ಎಂ. ಗಾಯತ್ರಿ ಮಾತನಾಡಿ, ಇದು ಚುನಾವಣಾ ಹಬ್ಬ. ಸರ್ಕಾರವನ್ನು ರಚನೆ ಮಾಡಲು ನಾಯಕರನ್ನು ಆಯ್ಕೆ ಮಾಡುವ ಚುನಾವಣೆ ಪ್ರಕ್ರಿಯೆಯಲ್ಲಿ ತಾವು ಭಾಗಿಗಳಾಗುತ್ತಿದ್ದೀರಿ ಎಂಬ ಹೆಮ್ಮೆ ಇರಲಿ. ತಮಗೆ ಯಾವುದೇ ಗೊಂದಲಗಳಿದ್ದರೆ ರಿಟರ್ನಿಂಗ್‌ ಆಫೀಸರ್‌ಗಳ ಹತ್ತಿರ ಬಗೆಹರಿಸಿಕೊಳ್ಳಿ ಎಂದು ಹೇಳಿದರು.

ಚಚ್‌ರ್‍, ಮಸೀದಿ ಹಾಗೂ ದೇವಸ್ಥಾನಗಳ ಮುಂದೆ ಯಾವುದೇ ರೀತಿ ಪ್ರಚಾರ ಮಾಡುವಂತಿಲ್ಲ. ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳು ಮೆರವಣಿಗೆಗೆ, ಸಭೆ ಸಮಾರಂಭಗಳಿಗೆ ಕಡ್ಡಾಯವಾಗಿ ಅನುಮತಿ ಪಡೆದಿರಬೇಕು. ವಿಡಿಯೋ ವ್ಯಾನ್‌ಗಳಿಗೆ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳ ಕಚೇರಿಯಲ್ಲಿ ಅನುಮತಿ ಪಡೆದಿರಬೇಕು. ಮತದಾನ ಮುಕ್ತಾಯವಾಗುವ 48 ಗಂಟೆ ಮುಂಚೆ ಬಹಿರಂಗ ಪ್ರಚಾರಗಳು ಅಂತ್ಯವಾಗಬೇಕು. ಚುನಾವಣಾ ಪ್ರಚಾರಕ್ಕೆ ಮಕ್ಕಳನ್ನು ಮತ್ತು ಪ್ರಾಣಿಗಳನ್ನು ಬಳಸಿಕೊಳ್ಳುವಂತಿಲ್ಲ ಎಂದು ಅವರು ತಿಳಿಸಿದರು.

ಪ್ರಾಚ್ಯ ವಸ್ತು ಸಂಗ್ರಹಾಲಯದ ಆಯುಕ್ತ ದೇವರಾಜ್‌ ಮಾತನಾಡಿ, ಚುನಾವಣೆ ಕರ್ತವ್ಯದಲ್ಲಿ ಯಾವುದೇ ಲೋಪಗಳು ಆಗಬಾರದು. ನಾವು ಮಾಡುವ ಕೆಲಸದಲ್ಲಿ ಅರಿವು ಇಲ್ಲದೆ ಇದ್ದಾಗ ಲೋಪಗಳು ಉಂಟಾಗುತ್ತವೆ. ಆದ್ದರಿಂದ ಈ ತರಬೇತಿ ನೀಡಲಾಗುತ್ತಿದೆ. ಈ ಹಿಂದೆ ಅಸಂಖ್ಯಾತ ಬ್ಯಾನರ್‌ಗಳು, ಮೈಕ್‌ಗಳಲ್ಲಿ ಪ್ರಚಾರ ಹೆಚ್ಚಾಗಿ ಇರುತ್ತಿತ್ತು. ಆದರೆ ಈಗ ಎಲ್ಲವೂ ನಿಯಮ ಬದ್ಧವಾಗಿ ಅನುಮತಿ ಪಡೆದುಕೊಂಡು ಮಾಡಬೇಕು. ಎಫ್‌ಎಸ್‌ಟಿ ತಂಡದವರಿಗೆ ತಮ್ಮ ವ್ಯಾಪ್ತಿಯ ಬಗ್ಗೆ ಸಂಪೂರ್ಣ ಮಾಹಿತಿ ಇರಬೇಕು ಎಂದು ಹೇಳಿದರು.

ಯಾವುದೇ ಅಧಿಕಾರಿಗಳು ಮತ್ತು ಪಕ್ಷಗಳು ವೈಯಕ್ತಿಕ ಟೀಕೆಗಳನ್ನು ಮಾಡುವಂತಿಲ್ಲ. ಯಾವುದೇ ಸರ್ಕಾರಿ ಕಚೇರಿ ಕಾಂಪೌಂಡ್‌ಗಳ ಮೇಲೆ ಪೋಸ್ಟರ್‌ ಮತ್ತು ಬ್ಯಾನರ್‌ಗಳನ್ನು ಅಂಟಿಸುವಂತಿಲ್ಲ. ಬಹಿರಂಗ ಸಭೆ ಸಮಾರಂಭಗಳ ವಿಡಿಯೋ ರೆಕಾಡಿಂರ್‍ಗ್‌ ಆಗಬೇಕು. ಬೈಕ್‌ ರಾರ‍ಯಲಿ ಹಾಗೂ ಕಾರು ರಾರ‍ಯಲಿಗಳಿಗೆ ಬೈಕ್‌ ಹಾಗೂ ಕಾರುಗಳ ನೋಂದಣಿ ಸಂಖ್ಯೆ ಸಮೇತ ಅನುಮತಿ ಪಡೆದಿರಬೇಕು. ಬೇರೆ ವಾಹನಗಳನ್ನು ಬಳಸಲು ಅವಕಾಶ ಇರುವುದಿಲ್ಲ. ಪೋಸ್ಟರ್‌ ಮತ್ತು ಪಾಂಪ್ಲೆಟ್ಸ್‌ಗಳಲ್ಲಿ ಪ್ರಿಂಟ​ರ್‍ಸ್ ಮತ್ತು ಪಬ್ಲಿಕೇಷನ್ಸ್‌ ಹೆಸರು, ವಿಳಾಸ ಹಾಗೂ ಪ್ರತಿಗಳ ಸಂಖ್ಯೆ ಮುದ್ರಣ ಕಡ್ಡಾಯವಾಗಿರಬೇಕು. ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆಯವರೆಗೆ ಚುನಾವಣೆ ಪ್ರಚಾರ ಮಾಡುವಂತಿಲ್ಲ ಎಂದು ಅವರು ತಿಳಿಸಿದರು.

ಡಿಸಿಪಿ ಎಂ. ಮುತ್ತುರಾಜು, ವಾಣಿಜ್ಯ ತೆರಿಗೆ ಇಲಾಖೆಯ ಜಂಟಿ ನಿರ್ದೇಶಕ ತಂಬಣ್ಣ ಮೊದಲಾದವರು ಇದ್ದರು.