ಪೌರತ್ವ ಕಾಯ್ದೆ ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ|ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪರೀಕ್ಷೆಗಳು ಮುಂದೂಡಿಕೆ| ಮಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ಕರ್ಫ್ಯೂ ಜಾರಿ| ಮುಂಜಾಗ್ರತಾ ಕ್ರಮವಾಗಿ ಪರೀಕ್ಷೆ ಮುಂದೂಡಿದ ವಿವಿ ಆಡಳಿತ ಮಂಡಳಿ|
ಬೆಳಗಾವಿ[ಡಿ.20]: ಪೌರತ್ವ ಕಾಯ್ದೆ ವಿರೋಧಿಸಿ ರಾಜ್ಯಾದ್ಯಂತ ನಡೆಯುತ್ತಿರುವ ಪ್ರತಿಭಟನೆಯ ಹಿನ್ನೆಲೆ ಯಲ್ಲಿ ಇಂದು ನಡೆಯಬೇಕಿದ್ದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪರೀಕ್ಷೆಗಳು ಮುಂದೂಡಿಕೆಯಾಗಿವೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಮಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ಕರ್ಫ್ಯೂ ಜಾರಿ ಮಾಡಿದ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ವಿವಿ ಆಡಳಿತ ಮಂಡಳಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಿ ಆದೇಶ ಹೊರಡಿಸಿದೆ.

ಪೌರತ್ವ ಕಾಯ್ದೆಯನ್ನು ವಿರೋಧಿಸಿ ಗುರುವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆದಿದೆ. ಮಂಗಳೂರಲ್ಲಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಪರಿಣಾಮ ಪೊಲೀಸರ ಗುಂಡಿಗೆ ಇಬ್ಬರು ಬಲಿಯಾಗಿದ್ದಾರೆ. ಇಂದೂ ಕೂಡ ಪ್ರತಿಭಟನೆ ಇರುವ ಹಿನ್ನೆಲೆಯಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪರೀಕ್ಷೆಯನ್ನು ಮುಂದೂಡಲಾಗಿದೆ.
