ರಾಣಿಬೆನ್ನೂರು(ಡಿ.05): ಮತದಾನ ಯಾವತ್ತೂ ಗೌಪ್ಯವಾಗಿರಬೇಕು, ಯಾರಿಗೆ, ಯಾವ ಪಕ್ಷಕ್ಕೆ ಮತ ಹಾಕಿದೆ ಅಂತ ತೋರಿಸುವುದು ಕೂಡ ಕಾನೂನು ಉಲ್ಲಂಘನೆಯಾಗುತ್ತದೆ. ಆದರೆ, ಇಲ್ಲೊಬ್ಬ ಮಹಾಶಯ ಯಾರಿಗೆ ಮತ ಹಾಕಿದ್ದೇನೆ ಎಂದು ಮತ ಹಾಕಿರುವ ಪೋಟೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿಕೊಂಡಿದ್ದಾನೆ. 

ಹೌದು, ಈ ಘಟನೆ ನಡೆದಿರೋದು ಹಾವೇರಿ ಜಿಲ್ಲೆಯ ರಾಣಿಬೆನ್ನೂರು ಉಚುನಾವಣೆಯಲ್ಲಿ. ಮತಕ್ಷೇತ್ರದ ಮತಗಟ್ಟೆಯೊಂದರಲ್ಲಿ ಒಳಗೆ ಮೊಬೈಲ್ ತೆಗೆದುಕೊಂಡು ಹೋದ ಬಿಜೆಪಿ ಕಾರ್ಯಕರ್ತ ಬಿಜೆಪಿ ಅಭ್ಯರ್ಥಿಗೆ ಅರುಣ್ ಕುಮಾರ್ ಪೂಜಾರ್ ಅವರಿಗೆ ಮತ ಹಾಕಿದ ಫೋಟೋ ತೆಗೆದುಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.   

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಕಮಲ ಗುರುತಿಗೆ ಮತ ಹಾಕಿರುವ ಫೋಟೋ ತೆಗೆದುಕೊಂಡು ಬಿಜೆಪಿ ಕಾರ್ಯಕರ್ತರು ಸೋಷಿಯಲ್ ಮೀಡಿಯಾದಲ್ಲಿ ಹಾಕಿಕೊಂಡಿದ್ದಾರೆ. ಇದೀಗ ಈ ಫೋಟೋ ಭಾರೀ ವೈರಲ್ ಆಗಿದೆ.

ಜಿಲ್ಲೆಯ ರಾಣಿಬೆನ್ನೂರು ಹಾಗೂ ಹಿರೇಕೆರೂರು ಕ್ಷೇತಗ್ರಳಿಗೆ ಉಪಚುನಾವಣೆ ನಡೆಯುತ್ತಿದೆ. ರಾಣಿಬೆನ್ನೂರು ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಕೋಳಿವಾಡ ಹಾಗೂ ಬಿಜೆಪಿಯಿಂದ ಅರುಣ್ ಕುಮಾರ್ ಪೂಜಾರ್ ಅವರು ಸ್ಪರ್ಧಿಸಿದ್ದಾರೆ. ಇವರಿಬ್ಬರ ಮಧ್ಯೆ ಭಾರಿ ಟಾಕ್ ವಾರ್ ನಡೆಯುತ್ತಿದೆ. 

ಇಂದು ರಾಜ್ಯದಲ್ಲಿ 15 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದ್ದು, 9ರಂದು ಫಲಿತಾಂಶ ಪ್ರಕಟವಾಗಲಿದೆ.