ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸಾಕ್ಷಿ ಹೇಳಲು ಕೋರ್ಟ್‌ಗೆ ಹಾಜರಾಗದ ಹಿನ್ನೆಲೆ  ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರಿಗೆ ಸುಳ್ಯ ಕೋರ್ಟ್‌ನಿಂದ ವಾರಂಟ್‌ 

ಸುಳ್ಯ (ಸೆ.15): ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸಾಕ್ಷಿ ಹೇಳಲು ಕೋರ್ಟ್‌ಗೆ ಹಾಜರಾಗದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರಿಗೆ ಸುಳ್ಯ ಕೋರ್ಟ್‌ನಿಂದ ವಾರಂಟ್‌ ಜಾರಿ ಮಾಡಲಾಗಿದೆ.

2016ರಲ್ಲಿ ಡಿ.ಕೆ. ಶಿವಕುಮಾರ್‌ ಅವರು ಇಂಧನ ಸಚಿವರಾಗಿದ್ದ ಸಂದರ್ಭ ನಡೆದಿದ್ದ ಪ್ರಕರಣ ಇದಾಗಿದೆ. 2016ರ ಫೆ.28ರಂದು ಸುಳ್ಯ ತಾಲೂಕಿನ ಬೆಳ್ಳಾರೆಯ ಗಿರಿಧರ್‌ ರೈ ಎಂಬವರು ತಮ್ಮ ವ್ಯಾಪ್ತಿಯ ವಿದ್ಯುತ್‌ ಸಮಸ್ಯೆ ಹೇಳಿಕೊಳ್ಳಲು ಡಿ.ಕೆ. ಶಿವಕುಮಾರ್‌ಗೆ ಕರೆ ಮಾಡಿದ್ದರು. ಈ ವೇಳೆ ಇಬ್ಬರ ಮಧ್ಯೆ ಮಾತಿನಚಕಮಕಿ ನಡೆದಿತ್ತು.

ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಕಾಂಗ್ರೆಸ್ ಮಾಸ್ಟರ್ ಪ್ಲಾನ್: ಡಿಕೆಶಿ ಸುಳಿವು

ಈ ಹಿನ್ನೆಲೆ ಅಂದಿನ ಮೆಸ್ಕಾಂ ಎಂಡಿ ಮೂಲಕ ಗಿರಿಧರ್‌ ವಿರುದ್ಧ ಡಿಕೆಶಿ ಪೊಲೀಸ್‌ ದೂರು ದಾಖಲಿಸಿದ್ದರು. ಕೇಸು ದಾಖಲಿಸಿಕೊಂಡ ಪೊಲೀಸರು ರಾತ್ರೋರಾತ್ರಿ ಗಿರಿಧರ್‌ ರೈ ಬಂಧಿಸಿದ್ದರು. ಸದ್ಯ ಈ ಪ್ರಕರಣದ ವಿಚಾರಣೆ ಸುಳ್ಯ ಕೋರ್ಟ್‌ನಲ್ಲಿದ್ದು, ಪ್ರಕರಣ ಸಂಬಂಧ ಸಾಕ್ಷಿ ಹೇಳಲು ಡಿಕೆಶಿಗೆ ಮೂರು ಬಾರಿ ಸಮಸ್ಸ್‌, ಒಂದು ಬಾರಿ ವಾರೆಂಟ್‌ ಜಾರಿ ಮಾಡಿತ್ತು. ಇದೀಗ ಮತ್ತೆ ವಾರಂಟ್‌ ಜಾರಿ ಮಾಡಲಾಗಿದೆ. ಸೆ.29ರಂದು ಪ್ರಕರಣದ ಮುಂದಿನ ವಿಚಾರಣೆ ನಡೆಯಲಿದೆ.