ಬೆಂಗಳೂರು [ಆ.24]:  ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್‌ಎಸ್‌ಬಿ) ಅಧ್ಯಕ್ಷರನ್ನಾಗಿ ಎಂ.ಮಹೇಶ್ವರ ರಾವ್‌ ಅವರನ್ನು ನೇಮಕ ಮಾಡಿ ಆದೇಶಿಸಿದ 24 ಗಂಟೆಗಳ ಅವಧಿಯಲ್ಲಿಯೇ ಹಿಂದಿನ ಸ್ಥಾನಕ್ಕೆ ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ. 

ಮಹೇಶ್ವರರಾವ್‌ ಅವರನ್ನು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಕಾರ್ಯದರ್ಶಿಯನ್ನಾಗಿ ನೇಮಕಗೊಳಿಸಿ ಮರು ಆದೇಶ ಹೊರಡಿಸಲಾಗಿದೆ.

ಗುರುವಾರ ಮಹೇಶ್ವರ್‌ ರಾವ್‌ ಅವರನ್ನು ಬಿಡಬ್ಲ್ಯೂಎಸ್‌ಎಸ್‌ಬಿ ಅಧ್ಯಕ್ಷರನ್ನಾಗಿ ವರ್ಗಾವಣೆಗೊಳಿಸಲಾಗಿತ್ತು.