Asianet Suvarna News Asianet Suvarna News

ಮಡಿಕೇರಿ: ಕಾವೇರಿ ನೀರಿನ ಮಟ್ಟ ಹೆಚ್ಚಳ, ನದಿತಟದ ಜನರೇ ಜೋಪಾನ

ಕರಾವಳಿ ಸೇರಿ ಕೊಡಗಿನಲ್ಲಿ ಮತ್ತೆ ಮಳೆ ಅಬ್ಬರ ಹೆಚ್ಚಾಗಿದ್ದು, ಕಾವೇರಿ ನದಿಯಲ್ಲಿ ನೀರಿನ ಪ್ರವಾಹವೂ ಹೆಚ್ಚಾಗಿದೆ. ಹಾರಂಗಿ ಜಲಾಶಯದಿಂದ 15000 ಕ್ಯೂಸೆಕ್ಸ್ ನೀರನ್ನು ಹೊರ ಬಿಡಲಾಗುತ್ತಿದೆ. ನದಿಯಲ್ಲಿ ನೀರಿನ ಪ್ರವಾಹ ಹೆಚ್ಚಾಗಿದ್ದು, ತಗ್ಗು ಪ್ರದೇಶಗಳಲ್ಲಿ ಮತ್ತೊಮ್ಮೆ ಪ್ರವಾಹ ಭೀತಿ ಎದುರಾಗಿದೆ.

Water flow in Kaveri River increased as heavy rain lashes in kodagu
Author
Bangalore, First Published Sep 5, 2019, 1:20 PM IST

ಮಡಿಕೇರಿ(ಸೆ.05): ಕೊಡಗು ಜಿಲ್ಲೆಯಾದ್ಯಂತ ಹೆಚ್ಚು ಮಳೆಯಾಗುತ್ತಿದ್ದು, ಹಾರಂಗಿ ಜಲಾಶಯಕ್ಕೆ ನೀರಿನ ಒಳ ಹರಿವು ಹೆಚ್ಚಾಗಿದೆ. ಕರಾವಳಿ ಸೇರಿದಂತೆ, ಕೊಡಗಿನಲ್ಲಿ ಕಳೆದ ಕೆಲವು ದಿನಗಳಿಂದ ಮಳೆ ಪ್ರಮಾಣ ಹೆಚ್ಚಾಗಿದ್ದು, ಮತ್ತೆ ಪ್ರವಾಹ ಭೀತಿ ಎದುರಾಗಿದೆ.

ದಿನಾಂಕ:04-09-2019 ರ ರಾತ್ರಿಯಿಂದ ಹಾರಂಗಿ ಜಲಾಶಯದಿಂದ 15000 ಕ್ಯೂಸೆಕ್ಸ್ ನೀರನ್ನು ಹೊರ ಬಿಡಲಾಗುತ್ತಿದೆ. ಜಲಾಶಯಕ್ಕೆ ನೀರಿನ ಒಳ ಹರಿವು ಹೆಚ್ಚಾದಲ್ಲಿ ಇನ್ನೂ ಹೆಚ್ಚು ನೀರನ್ನು ಜಲಾಶಯದಿಂದ ಹೊರ ಬಿಡುವ ಸಾಧ್ಯತೆ ಇರಲಿದೆ.

ಕೊಡಗಿನಲ್ಲಿ ಭಾರೀ ಮಳೆ ಮುನ್ಸೂಚನೆ: ರೆಡ್ ಅಲರ್ಟ್ ಘೋಷಣೆ, ಶಾಲಾ-ಕಾಲೇಜು ಬಂದ್

ಅಲ್ಲದೆ ಕಾವೇರಿ ಜಲಾನಯನ ಪ್ರದೇಶಗಳಲ್ಲೂ ಹೆಚ್ಚಿನ ಮಳೆಯಾಗುತ್ತಿರುವುದರಿಂದ ಕಾವೇರಿ ಹೊಳೆಯಲ್ಲೂ ನೀರಿನ ಮಟ್ಟ ಏರಿಕೆಯಾಗುತ್ತಿದ್ದು, ಕುಶಾಲನಗರ ಸೇರಿದಂತೆ ಕಾವೇರಿ ನದಿ ತಟದಲ್ಲಿರುವ ಜನರು ಜಾಗರೂಕತೆಯಿಂದ ಇರಲು ಜಿಲ್ಲಾಡಳಿತ ಸೂಚಿಸಿದೆ.

ದಕ್ಷಿಣ ಕನ್ನಡದಲ್ಲಿ ಮತ್ತೆ ಮಳೆ ಅಬ್ಬರ : ಉಕ್ಕಿ ಹರಿಯುತ್ತಿರುವ ನದಿಗಳು

Follow Us:
Download App:
  • android
  • ios