ಕಬಿನಿ ಪ್ರವಾಹ : ಜನರು ಸುರಕ್ಷಿತ ಸ್ಥಳಕ್ಕೆ ತೆರಳಲು ಸೂಚನೆ
- ಕಬಿನಿ ಜಲಾನಯನ ಪ್ರದೇಶದಲ್ಲಿ ಹೆಚ್ಚಾಗಿರುವ ಮಳೆ
- ಜುಲೈ 15 ರಂದು ಕಬಿನಿ ಜಲಾಶಯಕ್ಕೆ ಒಳ ಹರಿವಿನ ಪ್ರಮಾಣ 15000 ಕ್ಯುಸೆಕ್‌ಗೂ ಹೆಚ್ಚಿದೆ
- ಕಬಿನಿ ನದಿಯ ಪಾತ್ರದಲ್ಲಿರುವ ಮತ್ತು ನದಿಯ ಎರಡೂ ದಂಡೆಯಲ್ಲಿ ವಾಸಿಸುತ್ತಿರುವ ಜನರಿಗೆ ಎಚ್ಚರಿಕೆ
ಮೈಸೂರು (ಜು.16) : ಕಬಿನಿ ಜಲಾನಯನ ಪ್ರದೇಶದಲ್ಲಿ ಹೆಚ್ಚಾಗಿ ಮಳೆಯಾಗುತ್ತಿದ್ದು, ಜುಲೈ 15 ರಂದು ಕಬಿನಿ ಜಲಾಶಯಕ್ಕೆ ಒಳ ಹರಿವಿನ ಪ್ರಮಾಣ 15000 ಕ್ಯುಸೆಕ್‌ಗೂ ಹೆಚ್ಚಿದೆ.
ಈ ಹಿನ್ನೆಲೆ ಕಬಿನಿ ನದಿಗೆ 12000 ಕ್ಯುಸೆಕ್ ನೀರನ್ನು ಹರಿಸಲಾಗುತ್ತಿದೆ. ಒಳ ಹರಿವಿನ ಪ್ರಮಾಣ ಆಧರಿಸಿ ಜಲಾಶಯದಿಂದ ನೀರನ್ನು ನದಿಗೆ ಹರಿಸಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ವರುಣನ ಅಬ್ಬರ: ಜು.18ವರೆಗೆ ಭಾರೀ ಮಳೆ ಸಾಧ್ಯತೆ
ಕಬಿನಿ ನದಿಯ ಪಾತ್ರದಲ್ಲಿರುವ ಮತ್ತು ನದಿಯ ಎರಡೂ ದಂಡೆಯಲ್ಲಿ ವಾಸಿಸುತ್ತಿರುವ ಜನರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರು ರಕ್ಷಣೆಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಿ, ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಕಬಿನಿ ಜಲಾಶಯದ ಕಾರ್ಯಪಾಲನ ಎಂಜಿನಿಯರ್ ಸಿ.ವಿ. ಸುರೇಶ್ ಬಾಬು ತಿಳಿಸಿದ್ದಾರೆ
ಈಗಾಗಲೇ ರಾಜ್ಯ ಹಲವೆಡೆ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಮಲೆನಾಡು ಹಾಗು ಕರಾವಳಿ ಜಿಲ್ಲೆಗಳು ಹೆಚ್ಚಿನ ಮಳೆಯಿಂದ ತತ್ತರಿಸಿವೆ.